14 ಗಂಟೆಗಳ ಕೆಲಸದ ಅವಧಿ ವಿಸ್ತರಣೆ ಪ್ರಸ್ತಾಪ: ಸರ್ಕಾರದ ವಿರುದ್ಧ ಐಟಿ ವೃತ್ತಿಪರರ ಮೇಲ್ ಸಮರ

ಐಟಿ ಕಂಪನಿಗಳಲ್ಲಿ 14 ಗಂಟೆ ಕೆಲಸದ ಅವಧಿ ನಿಗದಿಪಡಿಸುವ ವಿಚಾರವಾಗಿ ಸಿಡಿದೆದ್ದಿರುವ ಐಟಿ ವೃತ್ತಿಪರರು ಇದೀಗ ಮೇಲ್ ಅಭಿಯಾನ ಶುರು ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ‘I oppose the Increase in Working Hours’ ಎಂಬ ಮೇಲ್ ಮಾಡಲು ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಮುಂದೆ ಓದಿ.

14 ಗಂಟೆಗಳ ಕೆಲಸದ ಅವಧಿ ವಿಸ್ತರಣೆ ಪ್ರಸ್ತಾಪ: ಸರ್ಕಾರದ ವಿರುದ್ಧ ಐಟಿ ವೃತ್ತಿಪರರ ಮೇಲ್ ಸಮರ
ಸಾಂದರ್ಭಿಕ ಚಿತ್ರ
Follow us
Kiran Surya
| Updated By: Ganapathi Sharma

Updated on: Jul 24, 2024 | 10:44 AM

ಬೆಂಗಳೂರು, ಜುಲೈ 24: ಐಟಿ ಕಂಪನಿ ಉದ್ಯೋಗಿಗಳಿಂದ 14 ಗಂಟೆ ಕೆಲಸ ನಿರ್ವಹಿಸುವ ನೂತನ ಪ್ರಸ್ತಾವದ ವಿರುದ್ಧ ಕರ್ನಾಟಕದ ಐಟಿ ವೃತ್ತಿಪರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಕಾರ್ಮಿಕ ಸಚಿವರಿಗೆ ಸಾಮೂಹಿಕವಾಗಿ ಮೇಲ್ ಮಾಡುವ ಮೂಲಕ ಪ್ರತಿಭಟನೆ ವ್ಯಕ್ತಪಡಿಸುತ್ತಿದ್ದಾರೆ. ಮೇಲ್ ಮೂಲಕವೇ ಸರ್ಕಾರದ ವಿರುದ್ಧ ಸಮರ ಸಾರಲು ಐಟಿ ವೃತ್ತಿಪರರು ತೀರ್ಮಾನ ಮಾಡಿದ್ದಾರೆ.

ಮೇಲ್ ಮೂಲಕ ಸಿಎಂ ಹಾಗೂ ಕಾರ್ಮಿಕ ಸಚಿವರಿಗೆ ತಮಗಾಗುತ್ತಿರುವ ಸಮಸ್ಯೆಗಳ ಬಗ್ಗೆ ತಿಳಿಸಲು ಐಟಿ ವೃತ್ತಿಪರರು ನಿರ್ಧಾರ ಕೈಗೊಂಡಿದ್ದಾರೆ. ಪ್ರಸ್ತಾವನೆ ಜಾರಿಯಾದರೆ ತಮ್ಮ ಕುಟುಂಬಗಳಿಗಾಗುವ ಸಮಸ್ಯೆ, ಅಷ್ಟೇ ಅಲ್ಲದೆ ತಮಗೆ ಆಗಬಹುದಾದ ಸಮಸ್ಯೆಗಳ ಬಗ್ಗೆ ಮೇಲ್ ಸಂದೇಶದಲ್ಲಿ ಉಲ್ಲೇಖಿಸಲು ಕರ್ನಾಟಕ ರಾಜ್ಯ ಐಟಿ ಮತ್ತು ಐಟಿಇಎಸ್ ಎಂಪ್ಲಾಯೀಸ್ ಯೂನಿಯನ್ ಉದ್ಯೋಗಿಗಳಲ್ಲಿ ಮನವಿ ಮಾಡಿದೆ.

‘I oppose the Increase in Working Hours (ಕೆಲಸದ ಅವಧಿ ವಿಸ್ತರಣೆಯನ್ನು ನಾನು ವಿರೋಧಿಸುತ್ತೇನೆ)’ ಎಂಬ ಬರಹದ ಜತೆ ಮೇಲ್ ಮಾಡಲು ಸಲಹೆ ನೀಡಲಾಗಿದೆ.

ಈಗಾಗಲೇ ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಿಎಂ ಸಿದ್ದರಾಮಯ್ಯಗೆ ಸಹಸ್ರಾರು ಸಂಖ್ಯೆಯಲ್ಲಿ ಮೇಲ್ ಸಂದೇಶಗಳು ಬಂದಿವೆ. ಸಾಮಾಜಿಕ ಜಾಲತಾಣ ಎಕ್ಸ್​​​ ಹಾಗೂ ಫೇಸ್​​ಬುಕ್​​ನಲ್ಲಿ ಕೂಡ ಐಟಿ ನೌಕರರ ಕ್ಯಾಂಪೇನ್ ಟ್ರೆಂಡ್ ಆಗುತ್ತಿದೆ.

ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961ಕ್ಕೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿರುವ ಬಗ್ಗೆ ಕೆಲವು ದಿನಗಳ ಹಿಂದೆ ವರದಿಯಾಗಿತ್ತು. ಜತೆಗೆ, ಬಿಪಿಓಗಳಲ್ಲಿ 12 ಗಂಟೆಗೂ ಅಧಿಕ ಕೆಲಸ ಮಾಡಲು ಅವಕಾಶ ನೀಡಬೇಕು. ಅಲ್ಲದೇ ನಿಯಮಿತವಾಗಿ ಮೂರು ತಿಂಗಳು 125 ಗಂಟೆ ಮೀರದಂತೆ ಕೆಲಸ ಇರಬೇಕು. ಐಟಿ ಉದ್ಯೋಗಿಗಳಿಗೆ 14 ಗಂಟೆ ಕೆಲಸದ ಅವಧಿ ನಿಗದಿಪಡಿಸಬೇಕು ಎಂದು ಮನವಿ ಸಲ್ಲಿಸಲಾಗಿತ್ತು.

ಇದನ್ನೂ ಓದಿ: ದಿನಕ್ಕೆ 14 ಗಂಟೆ ಕೆಲಸಕ್ಕೆ ಕರ್ನಾಟಕ ಐಟಿ ಕಂಪನಿಗಳಿಂದ ಸರ್ಕಾರಕ್ಕೆ ಪ್ರಸ್ತಾಪ: ಭುಗಿಲೆದ್ದ ಆಕ್ರೋಶ

ಇದರ ಬೆನ್ನಲ್ಲೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಐಟಿ-ಬಿಟಿ ಕಂಪನಿಗಳು ಉದ್ಯೋಗ ಕಡಿತಗೊಳಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ