ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲಿಸುವುದೇ ಒಳ್ಳೆಯದು: ಜನರಿಗೆ ಇಷ್ಟ ಆಗಿಲ್ಲ ಎಂದ ಎಂ.ಲಕ್ಷ್ಮಣ್​

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಂ.ಲಕ್ಷ್ಮಣ್​, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲಿಸುವುದೇ ಒಳ್ಳೆಯದು. ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ. ಬಿಜೆಪಿಗರು ಗ್ಯಾರಂಟಿ ವಿರುದ್ಧ ಮಾತಾಡ್ತಿದ್ರೂ ಜನ ಬೆಂಬಲಿಸಿದ್ದಾರೆ. ಹಾಗಾಗಿ ಜನರಿಗೆ ನಮ್ಮ ಗ್ಯಾರಂಟಿ ಇಷ್ಟ ಆಗಿಲ್ಲ ಅಂತಾನೇ ಅಲ್ವಾ? ಗ್ಯಾರಂಟಿ ಯೋಜನೆ ಬಗ್ಗೆ ಸಿಎಂ ಮರು ಪರಿಶೀಲನೆ ಮಾಡಬೇಕು ಎಂದಿದ್ದಾರೆ. ​

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲಿಸುವುದೇ ಒಳ್ಳೆಯದು: ಜನರಿಗೆ ಇಷ್ಟ ಆಗಿಲ್ಲ ಎಂದ ಎಂ.ಲಕ್ಷ್ಮಣ್​
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲಿಸುವುದೇ ಒಳ್ಳೆಯದು: ಜನರಿಗೆ ಇಷ್ಟ ಆಗಿಲ್ಲ ಎಂದ ಎಂ.ಲಕ್ಷ್ಮಣ್​
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jun 08, 2024 | 3:33 PM

ಮೈಸೂರು, ಜೂನ್ 08: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ (guarantee scheme) ನಿಲ್ಲಿಸುವುದೇ ಒಳ್ಳೆಯದು. ಏಕೆಂದರೆ ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ ಎಂದು ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂ.ಲಕ್ಷ್ಮಣ್ (M Lakshman) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಇಷ್ಟವಿಲ್ಲವೆಂದು ಫಲಿತಾಂಶ ಮೂಲಕ ತೋರಿಸಿದ್ದಾರೆ. ಬಿಜೆಪಿಗರು ಗ್ಯಾರಂಟಿ ವಿರುದ್ಧ ಮಾತಾಡ್ತಿದ್ರೂ ಜನ ಬೆಂಬಲಿಸಿದ್ದಾರೆ. ಹಾಗಾಗಿ ಜನರಿಗೆ ನಮ್ಮ ಗ್ಯಾರಂಟಿ ಇಷ್ಟ ಆಗಿಲ್ಲ ಅಂತಾನೇ ಅಲ್ವಾ? ಈ ಬಗ್ಗೆ ಸಿಎಂ ಮರು ಪರಿಶೀಲನೆ ಮಾಡಬೇಕು ಎಂದು ಹೇಳಿದ್ದಾರೆ.

ಶೇ.70ರಷ್ಟು ಮೇಲ್ವರ್ಗದವರು ಈ ಗ್ಯಾರಂಟಿ ಯೋಜನೆ ಫಲಾನುಭವಿಗಳು. 25 ಸಾವಿರ ರೂ. ಸಂಬಳ ಪಡೆಯುವ ವ್ಯಕ್ತಿಗೆ ಫ್ರೀ ಕರೆಂಟ್ ಕೊಟ್ರೆ ಹೇಗೆ? ಈಗಲೂ ಗ್ಯಾರಂಟಿ ಹಣದಿಂದಲೇ ಜೀವನ ನಡೆಸುವ ಜನ ಇದ್ದಾರೆ. ಅಂತಹವರನ್ನು ನೋಡಿ ಗ್ಯಾರಂಟಿ ರೀ ಲುಕ್ ಮಾಡುವ ಅಗತ್ಯ ಇದೆ ಎಂದಿದ್ದಾರೆ.

ಇದನ್ನೂ ಓದಿ: ಡಿಕೆ ಸುರೇಶ್ ಸೋಲಿಗೆ ಸಿದ್ದರಾಮಯ್ಯ ಆ್ಯಂಡ್​ ಟೀಮ್ ಕಾರಣ: ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ

ಹುಣಸೂರಿನ ಹಲವು ಹಳ್ಳಿಗಳಲ್ಲಿ ಒಂದೇ ಸಮುದಾಯದವರಿದ್ದಾರೆ. ಆ ಹಳ್ಳಿಗಳಲ್ಲಿ ಬಿಜೆಪಿ ಅಭ್ಯರ್ಥಿಗೆ 600ಕ್ಕೂ ಹೆಚ್ಚು ಮತ ನೀಡಿದರೆ ನನಗೆ ಕೇವಲ ಮೂರು, ಏಳು ಮತಗಳನ್ನ ನೀಡಿದ್ದಾರೆ. ಆ ಮೂಲಕ ಬಹಿರಂಗವಾಗಿ ಒಕ್ಕಲಿಗರ ವಿರುದ್ದ ಅಸಮಾಧಾನ ಹೊರ ಹಾಕಿದ್ದಾರೆ.

ಸಿದ್ದರಾಮಯ್ಯಗೆ ಎಷ್ಟು ಬಾರಿ ನೋವು ಕೊಡ್ತೀರಿ: ಮತದಾರರ ವಿರುದ್ಧ ಎಂ.ಲಕ್ಷ್ಮಣ್ ಆಕ್ರೋಶ  

ನನ್ನನ್ನು ಸೋಲಿಸಿ ಬೇಜಾರಿಲ್ಲ. ಆದರೆ ಸಿದ್ದರಾಮಯ್ಯ ಏನ್ ತಪ್ಪು ಮಾಡಿದ್ದಾರೆ. ತವರು ಜಿಲ್ಲೆಯಲ್ಲೇ ಎಷ್ಟು ಬಾರಿ ಅಪಮಾನ ಮಾಡುತ್ತೀರಿ? ಇಷ್ಟರ ಮಟ್ಟಿಗೆ ಸ್ಯಾಡಿಸ್ಟಿಕ್ ನೇಚರ್ ಇದ್ದರೆ ಹೇಗೆ? ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದರು. ಐದು ರೂಪಾಯಿ ಕೊಟ್ಟಿದ್ರಾ? ಆದರೆ ಸಿದ್ದರಾಮಯ್ಯ ಎಷ್ಟು ಕೆಲಸ ಮಾಡಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: ಹೆಚ್ಚಾಯ್ತು ಸವದಿ – ಸತೀಶ್ ಜಾರಕಿಹೊಳಿ ಫೈಟ್: ಸಚಿವರ ವಿರುದ್ಧ ಸವದಿ ಬೆಂಬಲಿಗರಿಂದ ಆಕ್ರೋಶ

ಜಯದೇವ ಆಸ್ಪತ್ರೆ ಸೇರಿದಂತೆ ಮೈಸೂರಿಗೆ ಎಷ್ಟು ಕೊಡುಗೆ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರಂಥ ಕ್ಲೀನ್ ಇಮೇಜ್ ಇರುವ ಸಿಎಂ ದೇಶದಲ್ಲಿ ಬೇರೆ ಎಲ್ಲಾದ್ರೂ ಇದ್ದಾರಾ? ಸಾಹೇಬರು ಯಾವುದನ್ನೂ ಹೇಳಿಕೊಳ್ಳೋದಿಲ್ಲ. ಆದರೆ ಮೈಸೂರಿನ ಜನ ಸಿದ್ದರಾಮಯ್ಯ ಅವರಿಗೆ ಎಷ್ಟು ಬಾರಿ ನೋವು ಕೊಡ್ತೀರಿ ಎಂದು ಮತದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್