AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಪ್ರಚಾರ ಬ್ಯುಸಿ ಮಧ್ಯೆ, ಡಿಕೆಶಿಗೆ ಐಟಿ ಬಿಸಿ

ಬೆಂಗಳೂರು: ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್​ನ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಐಟಿ ಇಲಾಖೆ ಡಿಕೆಶಿ ಮತ್ತು ಕುಟುಂಬಕ್ಕೆ ನೋಟಿಸ್ ನೀಡಿದೆ. ಅಕ್ರಮ ಹಣ ಪತ್ತೆ ಪ್ರಕಣದಲ್ಲಿ ಈಗಾಗಲೇ ತಿಹಾರ್ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಬಂದಿದ್ದಾರೆ. ಈ ಮಧ್ಯೆ, ವಿಚಾರಣೆಗೆ ಹಾಜರಾಗುವಂತೆ ಡಿ.ಕೆ.ಶಿವಕುಮಾರ್ ಮತ್ತು ಕುಟುಂಬಸ್ಥರಿಗೆ ಐಟಿ ಇಲಾಖೆ ನೋಟಿಸ್ ಮೇಲೆ ನೋಟಿಸ್ ನೀಡಿದೆ. ವಿಚಾರಣೆಗೆ ಹಾಜರಾಗುವಂತೆ ಡಿಕೆಶಿ ಮತ್ತು ಕುಟುಂಬಸ್ಥರಿಗೆ ಒಂದೇ ತಿಂಗಳಲ್ಲಿ 30 ನೋಟಿಸ್ ನೀಡಿದೆ. ಡಿ.ಕೆ.ಶಿವಕುಮಾರ್, ಪತ್ನಿ ಉಷಾ, ಸೋದರ […]

ಚುನಾವಣಾ ಪ್ರಚಾರ ಬ್ಯುಸಿ ಮಧ್ಯೆ, ಡಿಕೆಶಿಗೆ ಐಟಿ ಬಿಸಿ
ಸಾಧು ಶ್ರೀನಾಥ್​
|

Updated on:Dec 02, 2019 | 11:48 AM

Share

ಬೆಂಗಳೂರು: ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್​ನ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಐಟಿ ಇಲಾಖೆ ಡಿಕೆಶಿ ಮತ್ತು ಕುಟುಂಬಕ್ಕೆ ನೋಟಿಸ್ ನೀಡಿದೆ. ಅಕ್ರಮ ಹಣ ಪತ್ತೆ ಪ್ರಕಣದಲ್ಲಿ ಈಗಾಗಲೇ ತಿಹಾರ್ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಬಂದಿದ್ದಾರೆ. ಈ ಮಧ್ಯೆ, ವಿಚಾರಣೆಗೆ ಹಾಜರಾಗುವಂತೆ ಡಿ.ಕೆ.ಶಿವಕುಮಾರ್ ಮತ್ತು ಕುಟುಂಬಸ್ಥರಿಗೆ ಐಟಿ ಇಲಾಖೆ ನೋಟಿಸ್ ಮೇಲೆ ನೋಟಿಸ್ ನೀಡಿದೆ.

ವಿಚಾರಣೆಗೆ ಹಾಜರಾಗುವಂತೆ ಡಿಕೆಶಿ ಮತ್ತು ಕುಟುಂಬಸ್ಥರಿಗೆ ಒಂದೇ ತಿಂಗಳಲ್ಲಿ 30 ನೋಟಿಸ್ ನೀಡಿದೆ. ಡಿ.ಕೆ.ಶಿವಕುಮಾರ್, ಪತ್ನಿ ಉಷಾ, ಸೋದರ ಡಿ.ಕೆ.ಸುರೇಶ್ ಹಾಗೂ ಡಿಕೆಶಿ ಪುತ್ರಿ ಐಶ್ವರ್ಯಾ ಹೀಗೆ ಕುಟುಂಬಸ್ಥರಿಗೆಲ್ಲಾ, ದಿನ ಬಿಟ್ಟು ದಿನ ಐಟಿ ಇಲಾಖೆ ನೋಟಿಸ್ ನೀಡುತ್ತಾ ಬಂದಿದೆ .

ಮನವಿ ಮಾಡಿದ್ರೂ ನೋಟಿಸ್ ಮೇಲೆ ನೋಟಿಸ್: ಉಪಚುನಾವಣೆ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಲು ಬೇರೆ ದಿನಾಂಕ ನಿಗದಿಗೆ ಡಿಕೆಶಿ ಮನವಿ ಮಾಡಿದ್ರೂ ನೋಟಿಸ್ ಮೇಲೆ ನೋಟಿಸ್ ನೀಡುತ್ತಿದೆ. ಹೀಗಾಗಿ ಇಂದು ಐಟಿ ಅಧಿಕಾರಿಗಳ ಎದುರು ಡಿ.ಕೆ.ಶಿವಕುಮಾರ್ ವಿಚಾರಣೆಗೆ ಹಾಜರಾಗಲಿದ್ದಾರೆ.

ಡಿಕೆಶಿ ಬೆಳಗಾವಿ ಪ್ರವಾಸ ರದ್ದು: ಡಿ.ಕೆ.ಶಿವಕುಮಾರ್‌ಗೆ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಬೆಳಗಾವಿ ಪ್ರವಾಸ ರದ್ದುಗೊಳಿಸಿ, ಬೆಂಗಳೂರಿನತ್ತ ತೆರಳಿದ್ದಾರೆ. ಇಂದು ಡಿಕೆಶಿ ಅಥಣಿ, ಕಾಗವಾಡ ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಅಭ್ಯರ್ಥಿಗಳ ಪರ ಪ್ರಚಾರ ನಡೆಸಬೇಕಿತ್ತು.

Published On - 10:06 am, Mon, 2 December 19

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು