ಐಟಿ ಅಧಿಕಾರಿಗಳ ಭರ್ಜರಿ ಬೇಟೆ; ಬೆಂಗಳೂರಲ್ಲಿ ಒಂದು ವಾರದಲ್ಲಿ 80 ಕೋಟಿಗೂ ಅಧಿಕ ಹಣ ಪತ್ತೆ

ತೆಲಂಗಾಣ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹೈದರಾಬಾದ್​ ಹಾಗೂ ಚೆನ್ನೈಗೆ ಹಣ ರವಾನೆ ಮಾಡುತ್ತಿರುವ ಬಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ದೊರೆತಿದೆ. ಮಾಹಿತಿ ಆಧರಿಸಿ ನಗರಕ್ಕೆ ಬಂದ ದೆಹಲಿ, ಚೆನ್ನೈ, ಹೈದರಾಬಾದ್ ಅಧಿಕಾರಿಗಳು ಕಳೆದ ಒಂದು ವಾರದಿಂದ ಸ್ಥಳೀಯ ಪೊಲೀಸರ ಸಹಾಯದಿಂದ ರಿಯಲ್​ ಎಸ್ಟೇಟ್​, ಚಿನ್ನದ ವ್ಯಾಪಾರಿಗಳು, ಗುತ್ತಿಗೆದಾರರು ಸೇರಿಂದತೆ 20ಕ್ಕೂ ಹೆಚ್ಚು ಜನರ ಮನೆಗಳ ಮೇಲೆ ದಾಳಿ ಮಾಡಿದ್ದಾರೆ.

ಐಟಿ ಅಧಿಕಾರಿಗಳ ಭರ್ಜರಿ ಬೇಟೆ; ಬೆಂಗಳೂರಲ್ಲಿ ಒಂದು ವಾರದಲ್ಲಿ 80 ಕೋಟಿಗೂ ಅಧಿಕ ಹಣ ಪತ್ತೆ
ಆದಾಯ ತೆರಿಗೆ ಇಲಾಖೆ
Follow us
TV9 Web
| Updated By: ವಿವೇಕ ಬಿರಾದಾರ

Updated on: Oct 13, 2023 | 1:29 PM

ಬೆಂಗಳೂರು ಅ.11: ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಕಳೆದ ವಾರ ಬೆಂಗಳೂರಿನಲ್ಲಿ (Bengaluru) ಆಭರಣ ವ್ಯಾಪಾರಿಗಳ ಮೇಲೆ ಐಟಿ ಅಧಿಕಾರಿಗಳು (IT Officers) ದಾಳಿ ನಡೆಸಿದ್ದರು. ದೊರೆತ ದಾಖಲೆಗಳ ಆಧಾರದ ಮೇಲೆ ಕೆಲವು ಆಭರಣ ವ್ಯಾಪಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಮತ್ತೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ವ್ಯಾಪಾರಿಗಳು ಮಾತ್ರವಲ್ಲದೆ ಅಧಿಕಾರಿಗಳು ಗುತ್ತಿಗೆದಾರರ​ ಮನೆ ಮೇಲೂ ದಾಳಿ ಮಾಡಿದ್ದಾರೆ. ಐಟಿ ಅಧಿಕಾರಿಗಳ ಈ ದಾಳಿಗು ಮತ್ತು ಪಂಚ ರಾಜ್ಯಗಳ ಚುನಾವಣೆಗೂ ನಂಟು ಇದೆ. ಹೌದು ಕೇಂದ್ರ ಚುನಾವಣಾ ಆಯೋಗ ಪಂಚ ರಾಜ್ಯಗಳ ಚುನಾವಣೆ ದಿನಾಂಕ ಘೋಷಿಸಿದ ಹಿನ್ನೆಲೆಯಲ್ಲಿ ದೆಹಲಿ, ಚೆನ್ನೈ, ಹೈದರಾಬಾದ್ ಕರ್ನಾಟಕ ಐಟಿ ಅಧಿಕಾರಿಗಳು ಅಲರ್ಟ್​ ಆಗಿದ್ದಾರೆ.

ತೆಲಂಗಾಣ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹೈದರಾಬಾದ್​ ಹಾಗೂ ಚೆನ್ನೈಗೆ ಹಣ ರವಾನೆ ಮಾಡುತ್ತಿರುವ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ದೊರೆತಿದೆ. ಮಾಹಿತಿ ಆಧರಿಸಿ ನಗರಕ್ಕೆ ಬಂದ ದೆಹಲಿ, ಚೆನ್ನೈ, ಹೈದರಾಬಾದ್ ಅಧಿಕಾರಿಗಳು ಕಳೆದ ಒಂದು ವಾರದಿಂದ ಸ್ಥಳೀಯ ಪೊಲೀಸರ ಸಹಾಯದಿಂದ ರಿಯಲ್​ ಎಸ್ಟೇಟ್​, ಚಿನ್ನದ ವ್ಯಾಪಾರಿಗಳು, ಗುತ್ತಿಗೆದಾರರು ಸೇರಿಂದತೆ 20ಕ್ಕೂ ಹೆಚ್ಚು ಜನರ ಮನೆಗಳ ಮೇಲೆ ದಾಳಿ ಮಾಡಿದ್ದಾರೆ.

ಐಟಿ ಅಧಿಕಾರಿಗಳ ಗುರುವಾರ ಆಂಧ್ರ ಮೂಲದ ಉದ್ಯಮಿಗಳಾದ ಚಂದ್ರಶೇಖರ್, ಯಶಸ್ವಿನಿ, ಸುನೀತಾ, ವೆಂಕಟಶ್ರೀನಿವಾಸ್ ಮತ್ತು ವಿಜಯ್ ಸೇರಿದಂತೆ 10ಕ್ಕೂ ಹೆಚ್ಚು ಜನರ ಮನೆ, ಕಚೇರಿ ಸೇರಿದಂತೆ 75 ಕಡೆ ದಾಳಿ ಮಾಡಿದ್ದಾರೆ. ನಿನ್ನೆ (ಅ.12) ಉದ್ಯಮಿಗಳ ಮನೆಯಲ್ಲಿ 20 ಕೋಟಿ ರೂ. ಜಪ್ತಿ ಮಾಡಿದ್ದರು. ಕಳೆದ ವಾರ ಬಿಲ್ಡರ್ ಕಚೇರಿಯಲ್ಲಿ 20 ಕೋಟಿ ರೂ. ಪತ್ತೆಯಾಗಿತ್ತು. ಇದೀಗ ಗುತ್ತಿಗೆದಾರ ಅಂಬಿಕಾಪತಿಗೆ ಸೇರಿದ ಮನೆಯಲ್ಲಿ 42 ಕೋಟಿ ರೂ. ಪತ್ತೆಯಾಗಿದೆ. ಒಟ್ಟಾರೆಯಾಗಿ ಕಳೆದ ಒಂದು ವಾರದಿಂದ 82 ಕೋಟಿಗೂ ಅಧಿಕ ನಗದು ವಶಪಡಿಸಿಕೊಳ್ಳಲಾಗಿದೆ. ಇನ್ನೂ ಹಲವೆಡೆ ದಾಳಿ ಮುಂದುವರೆದಿದೆ.

ಇದನ್ನೂ ಓದಿ: Bengaluru IT Raid: ಬೆಂಗಳೂರಿನ ಫ್ಲಾಟ್​ ಒಂದರ ಮೇಲೆ ಐಟಿ ದಾಳಿ, ಮಂಚದಡಿ ಕಂತೆ ಕಂತೆ ನೋಟುಗಳು ಪತ್ತೆ

ಯಾರು ಈ ಅಶ್ಚತಮ್ಮ ಮತ್ತು ಅಂಬಿಕಾಪತಿ

ಆರ್​.ಟಿ ನಗರದ ಆನಂದ ಕೊಲೋನಿ ನಿವಾಸಿಯಾಗಿರುವ ಅಶ್ವತಮ್ಮ ಕಾಂಗ್ರೆಸ್​ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅಕ್ಕ. 2001ರಲ್ಲಿ ಕಾವಲ್ ಬೈರಸಂದ್ರ (ವಾರ್ಡ್​​ ನಂ 95)ರ ಕಾರ್ಪೊರೇಟರ್​​ ಆಗಿದ್ದರು. ಇವರ ಪತಿ ಆರ್.ಅಂಬಿಕಾಪತಿ ಕಾಂಟ್ರಾಕ್ಟರ್ ಆಗಿದ್ದಾರೆ. ಕೆಂಪಣ್ಣ ಅವರ ಕಾಂಟ್ರಾಕ್ಟರ್ ಸಂಘದಲ್ಲಿ ಗುರುತಿಸಿಕೊಂಡಿದ್ದಾರೆ. ಇವರು ಹಿಂದಿನ ಬಿಜೆಪಿ ಸರ್ಕಾರದ ಮೇಲೆ ರಾಜ್ಯದಲ್ಲಿ ನಡೆಯುವ ಕಾಮಗಾರಿಗೆ ಶೇ.40 ನೀಡಬೇಕು, ಬಿಬಿಎಂಪಿಯಲ್ಲಿ 50 ಪರ್ಸೆಂಟ್ ನೀಡಬೇಕು ಎಂದು ಆರೋಪ ಮಾಡಿದ್ದರು. ಕೆಲವು ರಾಜಕೀಯ ವ್ಯಕ್ತಿಗಳ ವಿರುದ್ಧ ಆರೋಪ ಮಾಡಿದ್ದರು.

ತನ್ನ ವಿರುದ್ಧ ಕಮಿಷನ್ ಆರೋಪ ಮಾಡಿದ ಬಿಜೆಪಿ ಶಾಸಕ ಮುನಿರತ್ನ ಅವರು ಅಂಬಿಕಾಪತಿ ವಿರುದ್ಧ ಮಾನನಷ್ಟ ಮೊಕದ್ದಮ್ಮೆ ಹೂಡಿದ್ದರು. ಈ ಪ್ರಕರಣದಲ್ಲಿ ಅಂಬಿಕಾಪತಿ ವೈಯ್ಯಾಲಿಕಾವಲ್ ಠಾಣೆ ಪೊಲೀಸರಿಂದ ಬಂಧನಕ್ಕೊಳಗಾಗಿ ಬಳಿಕ ಜಾಮೀನು ಮೇಲೆ ಬಿಡುಗಡೆಯಾಗಿದ್ದರು.

ಅಂಬಿಕಾಪತಿ ಮೆನ ಮೇಲೂ ಐಟಿ ದಾಳಿ

ಆರ್​​ಟಿ ನಗರದ ವೈಟ್​ ಗೌಸ್​ನಲ್ಲಿರುವ ಅಂಬಿಕಾಪತಿ ಮಗಳ ಮನೆ ಮೇಲೂ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಒಂದು ಮನೆ ಮತ್ತು ಆರ್​ಟಿ ನಗರದ ಸುಲ್ತಾನ್ ಪಾಳ್ಯದಲ್ಲಿ ಎರಡು ಕಡೆ ದಾಳಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್