AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ವ್ಯಕ್ತಿ ಗುತ್ತಿಗೆಗೆ ಪಡೆದಿದ್ದ ಕಟ್ಟಡದ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ

ದೆಹಲಿ: ತೆರಿಗೆ ವಂಚಿಸಿ ಚೀನಾ ನಿರ್ಮಿತ ಎಲೆಕ್ಟ್ರಾನಿಕ್ ಉಪಕರಣಗಳ ಅಕ್ರಮ ಸಂಗ್ರಹಣೆ ಮಾಡಿದ್ದ ಕಟ್ಟಡದ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಳು ದಾಳಿ ನಡೆಸಿದ್ದಾರೆ. ದಕ್ಷಿಣ ವಲಯದ ಜಂಟಿ ಆಯುಕ್ತ ನಿತೀಶ್ ಪಾಟಿಲ್ ನೇತೃತ್ವದಲ್ಲಿ ದಾಳಿ ನಡೆದಿದ್ದು, 4 ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಓಲ್ಡ್ ಏರ್ಪೋರ್ಟ್ ರಸ್ತೆಯ ಕಟ್ಟಡವೊಂದರಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಸಂಗ್ರಹಿಸಲಾಗುತ್ತಿತ್ತು. ಈ ಖಾಸಗಿ ಕಟ್ಟಡವನ್ನು ಚೀನಾ ಮೂಲದ ವ್ಯಕ್ತಿ ಗುತ್ತಿಗೆಗೆ ಪಡೆದಿದ್ದ. ಚೀನಾದಲ್ಲೇ ಕುಳಿತು ಮಧ್ಯವರ್ತಿಗಳ ಮೂಲಕ ವ್ಯವಹರಿಸುತ್ತಿದ್ದ. ಸದ್ಯ ಈಗ […]

ಚೀನಾ ವ್ಯಕ್ತಿ ಗುತ್ತಿಗೆಗೆ ಪಡೆದಿದ್ದ ಕಟ್ಟಡದ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jun 25, 2020 | 4:18 PM

Share

ದೆಹಲಿ: ತೆರಿಗೆ ವಂಚಿಸಿ ಚೀನಾ ನಿರ್ಮಿತ ಎಲೆಕ್ಟ್ರಾನಿಕ್ ಉಪಕರಣಗಳ ಅಕ್ರಮ ಸಂಗ್ರಹಣೆ ಮಾಡಿದ್ದ ಕಟ್ಟಡದ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಳು ದಾಳಿ ನಡೆಸಿದ್ದಾರೆ. ದಕ್ಷಿಣ ವಲಯದ ಜಂಟಿ ಆಯುಕ್ತ ನಿತೀಶ್ ಪಾಟಿಲ್ ನೇತೃತ್ವದಲ್ಲಿ ದಾಳಿ ನಡೆದಿದ್ದು, 4 ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಓಲ್ಡ್ ಏರ್ಪೋರ್ಟ್ ರಸ್ತೆಯ ಕಟ್ಟಡವೊಂದರಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಸಂಗ್ರಹಿಸಲಾಗುತ್ತಿತ್ತು. ಈ ಖಾಸಗಿ ಕಟ್ಟಡವನ್ನು ಚೀನಾ ಮೂಲದ ವ್ಯಕ್ತಿ ಗುತ್ತಿಗೆಗೆ ಪಡೆದಿದ್ದ. ಚೀನಾದಲ್ಲೇ ಕುಳಿತು ಮಧ್ಯವರ್ತಿಗಳ ಮೂಲಕ ವ್ಯವಹರಿಸುತ್ತಿದ್ದ. ಸದ್ಯ ಈಗ ಈ ಕಟ್ಟಡದ ಮೇಲೆ ದಾಳಿ ನಡೆಸಿ 4 ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು