ಬೆಂಗಳೂರು: ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಭವ್ಯವಾದ ಬಂಗಲೆಯ ಮೇಲೆ ಇಂದು ಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳಿಂದ ಐಟಿ ದಾಳಿ ನಡೆದಿದೆ. ಚಾಮರಾಜಪೇಟೆಯಲ್ಲಿರುವ ಶಾಸಕರ ಕಚೇರಿ ಮತ್ತು ಕಂಟೋನ್ಮೆಂಟ್ ರೈಲು ನಿಲ್ದಾಣ ಬಳಿಯಿರುವ ಮನೆ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ರೇಡ್ ನಡೆದಿದೆ
ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದ (Chamrajpet) ಶಾಸಕ ಜಮೀರ್ ಅಹ್ಮದ್ (Zameer Ahmed Khan ) ನಿವಾಸದ ಮೇಲೆ ಐಟಿ ದಾಳಿ ನಡೆದಿದೆ. ಬೆಂಗಳೂರಿನ ಕಂಟೋನ್ಮೆಂಟ್ ರೈಲು ನಿಲ್ದಾಣ ಬಳಿಯಿರುವ ಮನೆಯ ಮೇಲೆ ಬೆಳಗ್ಗೆ 6 ಗಂಟೆಗೆ ಐಟಿ ದಾಳಿ ನಡೆದಿದೆ. ಸುಮಾರು 15 ಮಂದಿ ಐಟಿ ಅಧಿಕಾರಿಗಳು 2 ಗಂಟೆಗಳಿಂದ ಸತತವಾಗಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ದೆಹಲಿಯಿಂದ ಬಂದಿರುವ 45 ಐಟಿ ಅಧಿಕಾರಿಗಳ ತಂಡದಿಂದ ದಾಳಿ ನಡೆಸಲಾಗಿದೆ. ವಸಂತನಗರದ ಜಮೀರ್ ಹಳೇ ನಿವಾಸ, ಬಂಬೂ ಬಜಾರ್ ನ ನಿವಾಸ, ಕಲಾಸಿಪಾಳ್ಯದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಸದಾಶಿವನಗರದ ಜಮೀರ್ ಆಪ್ತನ ನಿವಾಸ ಹಾಗೂ ಜಮೀರ್ ಪಿ.ಎ ಮನೆ ಸೇರಿ 6 ಕಡೆ ದಾಳಿ ನಡೆದಿದೆ.
ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ಐಟಿ ಶಾಕ್:
ಜಮೀರ್ ಅಹ್ಮದ್ ನಿವಾಸ, ಕಚೇರಿ, ಫ್ಲ್ಯಾಟ್‌ನಲ್ಲಿ ಐಟಿ ಅಧಿಕಾರಿಗಳು ತಂಡೋಪಾದಿಯಲ್ಲಿ ದಾಖಲೆಗಳ ಪರಿಶೀಲನೆ, ಶೋಧ ನಡೆಸುತ್ತಿದ್ದಾರೆ. ಜಮೀರ್ ಅಹ್ಮದ್ ಗೆ ಸೇರಿದ ಮನೆ, ಯುಬಿ ಸಿಟಿಯಲ್ಲಿರುವ ಫ್ಲ್ಯಾಟ್, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ರೇಡ್ ಮಾಡಲಾಗಿದೆ (IT Raid).
ಇತ್ತೀಚೆಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಪುತ್ರಿಯ ಮದುವೆ ಮಾಡಿದ್ದ ಜಮೀರ್:
ಶಾಸಕ ಜಮೀರ್ ಅಹ್ಮದ್ ಖಾನ್ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ, ವಿಶಾಲವಾದ ಜಾಗದಲ್ಲಿ ಭವ್ಯ ಬಂಗಲೆ ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಜಮೀರ್ ತಮ್ಮ ಪುತ್ರಿಯ ವಿವಾಹ ಮಹೋತ್ಸವ ನೆರವೇರಿಸಿದ್ದರು.
(IT Raid on congress mla zameer ahmed khan in chamrajpet bangalore)
Published On - 8:04 am, Thu, 5 August 21