
ಕಲಬುರಗಿ: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ (Priyank Kharge) ಬೆಂಬಲಿಗ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಅರವಿಂದ್ ಚೌಹಾಣ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ (IT Raid) ಮಾಡಿದ್ದಾರೆ. ಅಧಿಕಾರಿಗಳು ಮನೆ, ಜಲ್ಲಿ ಕ್ರಷರ್ ಮತ್ತು ಹೋಟೆಲ್ ಮೇಲೆ ದಾಳಿ ಮಾಡಿ ಪರಿಶೀಲಿಸಿ ತೆರಳಿದ್ದಾರೆ. ನಿನ್ನೆ (ಮೇ.07) ಸಾಯಂಕಾಲ ದಾಳಿ ಮಾಡಿದ್ದ ಅಧಿಕಾರಿಗಳು ರಾತ್ರಿ 11 ಗಂಟೆವರಗೆ ಪರಿಶೀಲನೆ ನಡೆಸಿ ಹೋಗಿದ್ದಾರೆ. ಅರವಿಂದ್ ಚೌಹಾಣ್ ಕೆಲ ದಿನಗಳ ಹಿಂದಷ್ಟೇ ಬಿಜೆಪಿ (BJP) ಬಿಟ್ಟು ಕಾಂಗ್ರೆಸ್ (Congress) ಸೇರಿದ್ದರು. ಹಾವೇರಿ ಕಾಂಗ್ರೆಸ್ ಮುಖಂಡನ ಮನೆ ಮೇಲೆ ಐಟಿ ದಾಳಿ
ಹಾವೇರಿ: ಕಾಂಗ್ರೆಸ್ ಮುಖಂಡ ಚನ್ನಬಸಪ್ಪ ಹುಲ್ಲತ್ತಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಜಿಲ್ಲೆಯ ಬ್ಯಾಡಗಿ ಪಟ್ಟಣದ ವಿದ್ಯಾನಗರದಲ್ಲಿರುವ ನಿವಾಸದ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ.
ಇದನ್ನೂ ಓದಿ: IT Raid: ಅಬ್ಬಾ… ಐಟಿ ದಾಳಿ ವೇಳೆ ಸಿಕ್ಕಿತು ಎಷ್ಟೊಂದು ಹಣ! ಚಿತ್ರಗಳಲ್ಲಿ ನೋಡಿ
ಕಲಬುರಗಿ: ನಿನ್ನೆ (ಮೇ.07) ಆದಾಯಕ್ಕಿಂತ ಹೆಚ್ಚಿನ ಹಣ ಗಳಿಕೆ ಆರೋಪ ಸಂಬಂಧ ರಿಯಲ್ ಎಸ್ಟೇಟ್ ಉದ್ಯಮಿ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದರು. ಕಲಬುರಗಿ ನಗರದ ನೂರ್ಬಾಗ್ ಕಾಲೋನಿಯಲ್ಲಿರುವ ವಾಹೇದ್ ಅಲಿ ಬಾತೆಖಾನಿ ನಿವಾಸದ ಮೇಲೆ ಈ ದಾಳಿ ನಡೆದಿದ್ದು, ಪತ್ತೆಯಾದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.
ವಾಹೇದ್ ಅಲಿ ಬಾತೆಖಾನಿ ನಿವಾಸದಲ್ಲಿ ಐಟಿ ಅಧಿಕಾರಿಗಳು ಶೋಧಕಾರ್ಯ ನಡೆಸಿದ್ದು, ಪತ್ತೆಯಾದ ದಾಖಲಾತಿಗಳು, ಬ್ಯಾಂಕ್ ಪಾಸಬುಕ್ ತಪಾಸಣೆ ಮಾಡಿದ್ದಾರೆ. ಆದಾಯ ಮೀರಿ ಹೆಚ್ಚಿನ ಪ್ರಮಾಣದಲ್ಲಿ ಹಣ ಗಳಿಕೆ ಆರೋಪವನ್ನು ವಾಹೇದ್ ಅಲಿ ಬಾತೆಖಾನಿ ಎದುರಿಸುತ್ತಿದ್ದಾರೆ.
ಬೆಂಗಳೂರು: ನಿನ್ನೆ (ಮೇ.06) ಬೆಂಗಳೂರು ಹಾಗೂ ಮೈಸೂರು ನಗರದ ಹಲವೆಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿ, ಕೋಟ್ಯಂತರ ರೂಪಾಯಿ ನಗದು, ಚಿನ್ನಾಭರಣ ವಶಪಡಿಸಿಕೊಂಡಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳಿಗೆ ಫಂಡ್ ಒದಗಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿ ಕೇಳಿಬಂದ ದೂರುಗಳ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಂಗಳೂರು ಹಾಗೂ ಮೈಸೂರಿನ ಹಲವೆಡೆ ದಾಳಿ ನಡೆಸಿ ಸುಮಾರು 20 ಕೋಟಿ ರೂ. ನಗದು ಹಾಗೂ 5 ಕೋಟಿ ರೂ. ಬೆಲೆಬಾಳುವ ಚಿನ್ನಾಭರಣ ವಶಪಡಿಸಿಕೊಂಡಿದ್ದರು.
ಬೆಂಗಳೂರಿನ ಶಾಂತಿನಗರ, ಕಾಕ್ಸ್ಟೌನ್, ಶಿವಾಜಿನಗರ, ಆರ್ಎಂವಿ ಬಡಾವಣೆ, ಸದಾಶಿವ ನಗರ, ಕುಮಾರಪಾರ್ಕ್ ವೆಸ್ಟ್ ಸೇರಿ ಹಲವು ಕಡೆ ದಾಳಿ ನಡೆಸಲಾಗಿದೆ. ಕೆಲವೇ ದಿನಗಳ ಹಿಂದೆಯಷ್ಟೇ ಮೈಸೂರಿನಲ್ಲಿ ದಾಳಿ ಮಾಡಿದ್ದ ಐಟಿ ಅಧಿಕಾರಿಗಳಿಗೆ ಮನೆಯಂಗಳದಲ್ಲಿದ್ದ ಗಿಡದಲ್ಲಿ ಮಾವಿನ ಹಣ್ಣಿನ ಬಾಕ್ಸ್ನಲ್ಲಿ ಬಚ್ಚಿಟ್ಟಿದ್ದ ಕಂತೆ ಕಂತೆ ಹಣ ಪತ್ತೆಯಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:51 am, Sun, 7 May 23