IT Raids: ಸಚಿವ ಎಂ.ಟಿ.ಬಿ ನಾಗರಾಜ್ ಬಾಮೈದನಿಗೆ ಐಟಿ ಶಾಕ್
ಸಚಿವ ಎಂ.ಟಿ.ಬಿ ನಾಗರಾಜ್ ಬಾಮೈದನಿಗೆ ಐಟಿ ಶಾಕ್ ಕೊಟ್ಟಿದೆ. ರಿಯಲ್ ಎಸ್ಟೇಟ್ ಉದ್ಯಮಿ ಆಗಿರುವ ಚಂದ್ರಶೇಖರ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬೆಂಗಳೂರು: ಪೌರಾಡಳಿತ ಸಚಿವ ಎಂ.ಟಿ.ಬಿ ನಾಗರಾಜ್ (MTB Nagaraj) ಬಾಮೈದನ ನಿವಾಸದ ಮೇಲೆ ಐಟಿ ದಾಳಿಯಾಗಿದೆ(IT Raids ). ಇಂದು(ನವೆಂಬರ್ 2) ಕಗ್ಗದಾಸಪುರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಎಂ.ಟಿ.ಬಿ ನಾಗರಾಜ್ ಬಾಮೈದ ಚಂದ್ರಶೇಖರ್ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದು, ಎರಡು ಇನೋವಾ ಕಾರಿನಲ್ಲಿ ಬಂದಿರುವ 8 ಮಂದಿ ಐಟಿ ಅಧಿಕಾರಿಗಳ ತಂಡ ಚಂದ್ರಶೇಖರ್ ಮನೆಯಲ್ಲಿ ಶೋಧಕಾರ್ಯ ನಡೆಸಿದ್ದಾರೆ.
ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
Published On - 3:42 pm, Wed, 2 November 22