ಸಿದ್ದರಾಮಯ್ಯ ದೊಡ್ಡ ಭಯೋತ್ಪಾದಕ ಅನಿಸುತ್ತಿದೆ: ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲು ಹೇಳಿಕೆ

ಸಿದ್ದರಾಮಯ್ಯ ಒಬ್ಬ ದೊಡ್ಡ ಭಯೋತ್ಪಾದಕ ಅನ್ನೋದು ನನಗೆ ಅನಿಸುತ್ತೆ. ಸಿದ್ದರಾಮಯ್ಯ ಅತಂತ್ರ ಸ್ಥಿತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯರದ್ದು ತಾಲಿಬಾನ್ ಸಂಸ್ಕೃತಿ - ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲು

ಸಿದ್ದರಾಮಯ್ಯ ದೊಡ್ಡ ಭಯೋತ್ಪಾದಕ ಅನಿಸುತ್ತಿದೆ: ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲು ಹೇಳಿಕೆ
ಸಿದ್ದರಾಮಯ್ಯ, ನಳಿನ್ ಕುಮಾರ್ ಕಟೀಲು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Sep 29, 2021 | 12:39 PM

ಮಂಗಳೂರು: ವಿಧಾನಸಭೆ ಪ್ರತಿಪಕ್ಷದ ನಾಯಕ, ಹಿರಿಯ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ದೊಡ್ಡ ಭಯೋತ್ಪಾದಕ ಎಂದು ಅನಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲು ಹೇಳಿದ್ದಾರೆ. ಆರ್‌‌.ಎಸ್.ಎಸ್‌. ಕುರಿತಾದ ಮಾಜಿ ಸಿಂಎ ಸಿದ್ದರಾಮಯ್ಯ ಅವರ ಇತ್ತೀಚಿನ ಹೇಳಿಕೆಗೆ ನಳಿನ್ ಕುಮಾರ್​ ಕಟೀಲು ಹೀಗೆ ಪ್ರತ್ರಿಕ್ರಿಯೆ ನೀಡಿದ್ದಾರೆ.

ಸಿದ್ದರಾಮಯ್ಯ ಒಬ್ಬ ದೊಡ್ಡ ಭಯೋತ್ಪಾದಕ ಅನ್ನೋದು ನನಗೆ ಅನಿಸುತ್ತೆ. ಸಿದ್ದರಾಮಯ್ಯ ಅತಂತ್ರ ಸ್ಥಿತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯರದ್ದು ತಾಲಿಬಾನ್ ಸಂಸ್ಕೃತಿ. ಅವರು ಸಿಎಂ ಆಗಿದ್ದಾಗ ಅತೀ ಹೆಚ್ಚು ಹತ್ಯೆಗಳು ನಡೆದಿವೆ. 24ಕ್ಕೂ ಹೆಚ್ಚು ಹಿಂದೂಗಳ ಹತ್ಯೆಗಳು ಆಗಿತ್ತು. ಅವರ ಕಾಲಘಟ್ಟದಲ್ಲೇ ಅತೀ ಹೆಚ್ಚು ನಡೆದಿದೆ, ಅದಕ್ಕೆ ಹೇಳಿದ್ದು ಅವರದ್ದು ತಾಲಿಬಾನ್ ಸಂಸ್ಕೃತಿ, ಅವರೇ ಭಯೋತ್ಪಾದಕ ಅಂತ. ಕೊಲೆ, ಸುಲಿಗೆ, ಗೋಹತ್ಯೆ ಅವರ ಕಾಲದಲ್ಲೇ ಹೆಚ್ಚು ನಡೆದಿರುವಾಗ ಅವರಿಗೆ ನಮ್ಮ ಬಗ್ಗೆ ಕೇಳುವುದಕ್ಕೆ ನೈತಿಕತೆ ಎಲ್ಲಿದೆ ಎಂದು ನಳಿನ್​ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಈಗ ಮುಳುಗಿದ ಹಡಗು, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತೆ ಅನ್ನೋ ವಿಶ್ವಾಸ ಜನರಿಗಿಲ್ಲ. ಹೀಗಾಗಿ ಕಾಂಗ್ರೆಸ್ ಪಕ್ಷದ ಹತ್ತಾರು ಜನ ಬಿಜೆಪಿ ಸೇರಲು ಸಿದ್ದತೆ ಮಾಡಿದ್ದಾರೆ. ಕಾಂಗ್ರೆಸ್‌ನ ಹತ್ತಾರು ಶಾಸಕರ ಸಹಿತ ಕೆಲ ಪ್ರಮುಖರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್ ಪುನರುಚ್ಚರಿಸಿದರು.

ಇದನ್ನೂ ಓದಿ: ಹಳೆಯದನ್ನೆಲ್ಲ ನೆನೆದು ಸಿದ್ದರಾಮಯ್ಯ ವಿರುದ್ಧ ಕೆಂಡ ಕಾರಿದರು ಜೆಡಿಎಸ್ ಪಿತಾಮಹ ಹೆಚ್ ಡಿ ದೇವೇಗೌಡ ! ಇದನ್ನೂ ಓದಿ: ವಿಧಾನ ಸಭೆಯಲ್ಲಿ ಪಂಚೆ ಬೀಳಿಸಿಕೊಂಡ ಸಿದ್ದರಾಮಯ್ಯ: ಮುಂದೇನಾಯ್ತು?

(It seems siddaramaiah is a terrorist describes karnataka bjp chief nalin kumar kateel)

Published On - 12:37 pm, Wed, 29 September 21

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ