ಬಾಗಲಕೋಟೆ, ಡಿಸೆಂಬರ್ 21: ಸಿಟಿ ರವಿ ಅವರನ್ನ ಫೇಕ್ಎನ್ಕೌಂಟರ್ ಮಾಡುವ ವಿಚಾರ ಪೊಲೀಸರಿಗೆ ಇತ್ತು ಅನಿಸುತ್ತೆ. ನಾವು ಏನು ಮಾಡಬೇಕು ಅದನ್ನ ನಾವು ಮಾಡುತ್ತೇವೆ. ಈ ಬಗ್ಗೆ ನಾವು ಸುಮ್ಮನೆ ಕೂರುವುದಿಲ್ಲ, ಹೋರಾಟ ಮಾಡುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಆರೋಪ ಮಾಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವಕಾಶ ಸಿಕ್ಕರೆ ಸಿ.ಟಿ.ರವಿ ಮುಗಿಸಬೇಕೆಂಬ ಉದ್ದೇಶವಿತ್ತು ಅನಿಸುತ್ತೆ. ಆದರೆ, ಸರಿಯಾದ ಅವಕಾಶ ಸಿಕ್ಕಿಲ್ಲ. ನಮ್ಮ ಎಂಎಲ್ಸಿ ಕೇಶವಪ್ರಸಾದ್ ಕೂಡ ಅವರ ಹಿಂದೆ ಇದ್ದರು. ನಮಗೆ ಸಿ.ಟಿ.ರವಿ ಅವರ ಲೈವ್ ಲೊಕೇಶನ್ ಸಿಗುತ್ತಿತ್ತು. ಕೆಲವು ಮಾಧ್ಯಮದವರು ಕೂಡ ಬೆನ್ನುಹತ್ತಿದ್ರು, ಧನ್ಯವಾದಗಳು ಎಂದಿದ್ದಾರೆ.
ಇದನ್ನೂ ಓದಿ: ಆ ರಾತ್ರಿ ಕಾಂತಾರದ ದೈವದ ರೀತಿ ವರ್ತಿಸಿದ್ದರಿಂದ ಪೊಲೀಸರಿಂದ ಬಚಾವ್ ಆದೆ: ಸಿಟಿ ರವಿ ಸ್ಫೋಟಕ ಹೇಳಿಕೆ
ಅಂತಹ ರಾತ್ರಿಯೊಳಗೆ ಬೆಳಗಾವಿ ಮಾಧ್ಯಮದವರು ಬೆನ್ನು ಹತ್ತಿದ್ದರು. ವಿಡಿಯೋ ಮಾಡುತ್ತಿದ್ದರು ಲೊಕೇಶನ್ ಹಾಕುತ್ತಿದ್ದರು. ಇಲ್ಲದೆ ಹೋಗಿದ್ದರೆ ಸಿಟಿ ಅವರನ್ನ ಫೇಕ್ಎನ್ಕೌಂಟರ್ ಮಾಡುವಂತ ವಿಚಾರ ಅಲ್ಲಿನ ಪೊಲೀಸ್ ತಂಡಕ್ಕೆ ಇತ್ತು ಅಂತ ನನಗೆ ಅನಿಸುತ್ತದೆ ಎಂದು ಹೇಳಿದ್ದಾರೆ.
ಕಾನೂನು ಸಮಾಲೋಚನೆ ತೆಗೆದುಕೊಳ್ಳಲಿಕ್ಕೆ ನಾನು ಸಿಟಿ ರವಿಗೆ ಹೇಳಿದ್ದೇನೆ. ಆ ಪ್ರಕಾರ ಅವರು ಕಾನೂನು ಹೋರಾಟ ಮಾಡುತ್ತಾರೆ. ಸಿಟಿ ರವಿ ಅವರನ್ನ ಬಂಧನ ಮಾಡಿದ ನಂತರ ಅದೇ ದಿನ ರಾತ್ರಿ ಮ್ಯಾಜಿಸ್ಟ್ರೇಟ್ ಮುಂದೆ ಹೋಗಿ ನಿಲ್ಲಿಸುತ್ತಾರೆ. ಇಡೀ ರಾತ್ರಿ ಎಲ್ಲಾ ಕರೆದುಕೊಂಡು ತಮಗೆ ಸಂಬಂಧವಿಲ್ಲದ ಖಾನಾಪುರ ಬಾಗಲಕೋಟೆ, ಧಾರವಾಡ, ಗದಗ ವ್ಯಾಪ್ತಿಯಲ್ಲಿ ಓಡಾಡಿದ್ದಾರೆ. ಬೆಳಗಾವಿ ಕಮಿಷನರ್ ದುಷ್ಟ ಕೆಲಸ ಮಾಡಿದ್ದಾರೆ. ತಮ ವ್ಯಾಪ್ತಿಯಲ್ಲಿ ಬರ ಜಾಗದಲ್ಲಿ ಓಡಾಡಿಸಿದ್ದಾರೆ ಎಂದು ಗರಂ ಆಗಿದ್ದಾರೆ.
ಇನ್ನು ಸಿಟಿ ರವಿ ಬಂಧನ ಮತ್ತು ಪೊಲೀಸರ ದುರ್ವರ್ತನೆ ಖಂಡಿಸಿ ಇಂದು ಜಿಲ್ಲೆಯ ಬನಹಟ್ಟಿ ನಗರದಲ್ಲಿ ಬಿಜೆಪಿಯಿಂದ ಪ್ರತಿಭಟನೆ ಮಾಡಲಾಗಿದೆ. ತೇರದಾಳ ಶಾಸಕ ಸಿದ್ದು ಸವದಿ ನೇತೃತ್ವದಲ್ಲಿ ಭದ್ರಣ್ಣವರ ಸರ್ಕಲ್‌ನಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಡಲಾಗಿದೆ. ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:51 pm, Sat, 21 December 24