AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಸೂಚಿಸಿದ ಲಾಕ್​ಡೌನ್​ ಇದಾಗಿರಲಿಲ್ಲ; ಹೆಚ್.ಡಿ.ಕುಮಾಸ್ವಾಮಿ ಟ್ವೀಟ್

ಲಾಕ್​ಡೌನ್ ಮಾಡಿ ಜನರ ಜೀವ ಉಳಿಸಿ ಎಂದು ನಾನು ಮೊದಲೇ ಹೇಳಿದ್ದೆ. ಹಾಗೆ ಹೇಳುವಾಗ ಲಾಕ್​ಡೌನ್​ನಿಂದ ಜನ ಜೀವನಕ್ಕೆ ಆಗುವ ತೊಂದರೆಗಳಿಗೆ ಪರಿಹಾರ ಕ್ರಮಗಳಿರಬೇಕು. ಜನರ ಅಗತ್ಯವನ್ನು ಸರ್ಕಾರ ಭರಿಸಬೇಕೆಂದು ಹೇಳಿದ್ದೆ ಎಂದು ಟ್ವೀಟ್​ ಮಾಡಿದ್ದಾರೆ.

ನಾವು ಸೂಚಿಸಿದ ಲಾಕ್​ಡೌನ್​ ಇದಾಗಿರಲಿಲ್ಲ; ಹೆಚ್.ಡಿ.ಕುಮಾಸ್ವಾಮಿ ಟ್ವೀಟ್
ಹೆಚ್.ಡಿ.ಕುಮಾಸ್ವಾಮಿ
sandhya thejappa
|

Updated on: May 10, 2021 | 12:27 PM

Share

ಬೆಂಗಳೂರು: ಕೊರೊನಾ ಸೋಂಕನ್ನು ನಿಯಂತ್ರಿಸಲು ಇಂದಿನಿಂದ ರಾಜ್ಯಾದಾದ್ಯಂತ ಲಾಕ್​ಡೌನ್ ಜಾರಿಯಾಗಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಲಾಕ್​ಡೌನ್ ಅಲ್ಲದ ಕಠಿಣ ಲಾಕ್​ಡೌನ್, ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್​ಡೌನ್ ಇಂದಿನಿಂದ ಜಾರಿಗೆ ಬರಲಿದೆ. ಜನ ಸಂಚಾರ ತಡೆಯುವುದೇ ಲಾಕ್​ಡೌನ್ ಎಂದು ಭಾವಿಸಿರುವ ಸರ್ಕಾರ ಸಂಕಷ್ಟದಲ್ಲಿ ನಾಗರಿಕರನ್ನು ಮರೆತಿರುವುದು ದುರಂತ. ನಾವು ಸೂಚಿಸಿದ ಲಾಕ್​ಡೌನ್ ಇದಾಗಿರಲಿಲ್ಲ. ನಾವು ಹೇಳಿದ್ದು ಜನಹಿತದ ಲಾಕ್​ಡೌನ್ ಆಗಿತ್ತು ಎಂದು ಹೆಚ್.ಡಿ.ಕುಮಾಸ್ವಾಮಿ ಟ್ವೀಟ್ ಮಾಡಿದ್ದಾರೆ.

ಲಾಕ್​ಡೌನ್ ಮಾಡಿ ಜನರ ಜೀವ ಉಳಿಸಿ ಎಂದು ನಾನು ಮೊದಲೇ ಹೇಳಿದ್ದೆ. ಹಾಗೆ ಹೇಳುವಾಗ ಲಾಕ್​ಡೌನ್​ನಿಂದ ಜನ ಜೀವನಕ್ಕೆ ಆಗುವ ತೊಂದರೆಗಳಿಗೆ ಪರಿಹಾರ ಕ್ರಮಗಳಿರಬೇಕು. ಜನರ ಅಗತ್ಯವನ್ನು ಸರ್ಕಾರ ಭರಿಸಬೇಕೆಂದು ಹೇಳಿದ್ದೆ. ಆದರೆ ಲಾಕ್​ಡೌನ್ ಸಂದರ್ಭದಲ್ಲಿ ನೀಡಬೇಕಾದ ಪರಿಹಾರ ಕ್ರಮಗಳಿಂದ ವಿಮುಖವಾಗಿರುವ ಸರ್ಕಾರ ಬೇಜವಾಬ್ದಾರಿತನ ತೋರಿದೆ ಎಂದು ಟ್ವಿಟರ್​ನಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಜನರಿಗೆ ಎಲ್ಲಿ ಪರಿಹಾರ ನೀಡಬೇಕಾಗುತ್ತದೆಯೋ, ಜೀವನ ನಿರ್ವಹಣೆಗೆ ನೆರವು ನೀಡಬೇಕಾಗಿ ಬರುತ್ತದೆಯೋ ಎಂಬ ದುರಾಲೋಚನೆ ಮಾಡಿರುವ ಸರ್ಕಾರ ಲಾಕ್​ಡೌನ್ ಎಂಬ ಪದವನ್ನು ಧೈರ್ಯದಿಂದ ಹೇಳುತ್ತಲೇ ಇಲ್ಲ. ಕಠಿಣ ನಿಯಮ ಎಂದು ಹೇಳಿ ಲಾಕ್​ಡೌನ್​ನಿಮದ ದೂರ ನಿಂತಿದೆ. ಕೇಂದ್ರವೂ ಇದೇ ಕುತಂತ್ರದ ನಡೆಯನ್ನು ಅನುಸರಿಸಿ ಜವಾಬ್ದಾರಿಯಿಂದ ನುಣುಚಿಕೊಂಡಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಲಾಕ್​ಡೌನ್ ಎಂದರೆ ಜನ ಹೊರ ಹೋಗಲಾಗದ ಪರಿಸ್ಥಿತಿ. ಬದುಕಿನ ಅಗತ್ಯವನ್ನು ದುಡಿದುಕೊಳ್ಳಲಾಗದ ದುಸ್ಥಿತಿ. ಸರ್ಕಾರವೇ ಇದರ ಹೊಣೆಗಾರ. ಅದಕ್ಕೆ ಸರ್ಕಾರವೇ ಪರಿಹಾರ ನೀಡಬೇಕು ಎಂಬುದೂ ನನ್ನ ನಿಲುವು, ಸಲಹೆ. ಸರ್ಕಾರ ಸಂಪೂರ್ಣ ಲಾಕ್​ಡೌನ್ ಘೋಷಿಸಬೇಕಿತ್ತು ಮತ್ತು ಪರಿಹಾರ ನೀಡಬೇಕಿತ್ತು. ಆದರೆ ಈವರೆಗೆ ಪರಿಹಾರ ಪ್ಯಾಕೇಜಿನ ಮಾತೇ ಇಲ್ಲ ಎಂದು ಹೆಚ್ಡಿಕೆ ಟ್ವೀಟರ್​ನಲ್ಲಿ ತಿಳಿಸಿದರು.

ಮಹಾರಾಷ್ಟ್ರ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಕೇಂದ್ರ ಸರ್ಕಾರಕ್ಕೆ ಕಾಯದೇ ಲಾಕ್​ಡೌನ್ ಮಾಡಿವೆ. ಜನರಿಗೆ ಆಹಾರ ಸೇರಿದಂತೆ ಪರಿಹಾರ ಘೋಷಿಸಿವೆ. ಆಂಧ್ರದಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ. ಇದು ಸರ್ಕಾರಗಳ ಜವಾಬ್ದಾರಿಯುತ ನಡೆ. ಆದರೆ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕೇಂದ್ರದ ದುರ್ನಡತೆಯನ್ನು ರಾಜ್ಯ ಅನುಸರಿಸಬಾರದು ಎಂದು ಹೇಳಿದರು.

ಮನೆಗಳಿಂದ ಹೊರ ಬರುವ ಜನರ ಮೇಲೆ ದರ್ಪ ಪ್ರದರ್ಶಿಸುವುದನ್ನು ಬಿಟ್ಟು, ಜನ ಹೊರಗೆ ಬಾರದಂತೆ ಅವರ ಅಗತ್ಯಗಳನ್ನು ಪೂರೈಸುವ, ಪರಿಹಾರ ಒದಗಿಸುವ ಕ್ರಮಗಳತ್ತ ಸರ್ಕಾರ ಗಮನಹರಿಸಬೇಕು. ಈ ವಿಚಾರದಲ್ಲಿ ನೆರೆ ರಾಜ್ಯಗಳು ಅನುಸರಿಸುತ್ತಿರುವ ಕ್ರಮಗಳನ್ನು ರಾಜ್ಯ ಅವಲೋಕಿಸಬೇಕು. ಜನರ ಆರೋಗ್ಯ ಎಷ್ಟು ಮುಖ್ಯವೋ ಜನರ ಬದುಕೂ ಅಷ್ಟೇ ಮುಖ್ಯವಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ

ಮೈಸೂರು ಮೃಗಾಲಯಕ್ಕೂ ಎದುರಾಯ್ತು ಲಾಕ್​ಡೌನ್ ಸಂಕಷ್ಟ; ಪ್ರಾಣಿಗಳ ನೆರವಿಗೆ ಬರುವಂತೆ ಪ್ರಾಧಿಕಾರದಿಂದ ಮನವಿ

ಕೊರೊನಾ ನಿಯಮ ಉಲ್ಲಂಘಿಸಿ ಯಾದಗಿರಿಯಲ್ಲಿ ನಡೆಯಿತು ಗ್ರಾಮದೇವತೆ ಜಾತ್ರೆ; ಸಾವಿರಾರು ಜನರು ಭಾಗಿ

(It was not the lockdown we suggested said HD Kumaswamy)

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ