ಎರಡೂವರೆ ವರ್ಷಗಳ ಬಳಿಕ ಸಿಎಂ ಬದಲಾಯಿಸಬೇಕೇ ಅಂತ ಹೈಕಮಾಂಡ್ ತೀರ್ಮಾನಿಸುತ್ತದೆ: ಎಂಬಿ ಪಾಟೀಲ್, ಸಚಿವ
ರಾಜ್ಯಕ್ಕೆ ಯಾರು ಮುಖ್ಯಮಂತ್ರಿಯಾಗಬೇಕು, ಯಾರು ಮುಂದುವರಿಯಬೇಕು, ಅಸಲಿಗೆ ಬದಲಾವಣೆಯ ಅವಶ್ಯಕತೆ ಇದೆಯಾ ಇಲ್ಲವಾ, ಸಚಿವ ಸಂಪುಟದಲ್ಲಿ ಯಾರಿರಬೇಕು ಮೊದಲಾದ ಎಲ್ಲ ಸಂಗತಿಗಳನ್ನು ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ರಂದೀಪ್ ಸಿಂಗ್ ಸುರ್ಜೆವಾಲಾ ಅವರನ್ನೊಳಗೊಂಡ ಹೈ ಕಮಾಂಡ್ ತೀರ್ಮಾನಿಸುತ್ತದೆ ಎಂದು ಪಾಟೀಲ್ ಹೇಳಿದರು.
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಎರಡೂವರೆ ವರ್ಷಗಳ ನಂತರ ಬದಲಾಗುತ್ತಾರಾ? ಸಿದ್ದರಾಮಯ್ಯ (Siddaramaiah) ಸ್ಥಾನಕ್ಕೆ ಈಗ ಉಪ ಮುಖ್ಯಮಂತ್ರಿಯಾಗಿರುವ ಡಿಕೆ ಶಿವಕುಮಾರ್ ಗೆ (DK Shivakumar) ಬಡ್ತಿ ಸಿಗಲಿದೆಯ? ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕೆ ನಿರಂತರವಾಗಿ ಕೇಳಿಬರುತ್ತಿರುವ ಪ್ರಶ್ನೆ ಇದು. ಸಿದ್ದರಾಮಯ್ಯ ಮತ್ತು ಶಿವಕುಮಾರ್ ಸೇರಿದಂತೆ ರಾಜ್ಯದ ಯಾವುದೇ ಕಾಂಗ್ರೆಸ್ ನಾಯಕ ಈ ಪ್ರಶ್ನೆಗೆ ಸಮಾಧಾನಕರ ಉತ್ತರ ನೀಡಲ್ಲ. ಅದನ್ನು ಹೈಕಮಾಂಡ್ ಕಡೆ ಜಾರಿಸಿಬಿಡುತ್ತಾರೆ. ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂಬಿ ಪಾಟೀಲ್ (MB Patil) ಸಹ ಅದನ್ನೇ ಮಾಡಿದರು. ರಾಜ್ಯಕ್ಕೆ ಯಾರು ಮುಖ್ಯಮಂತ್ರಿಯಾಗಬೇಕು, ಯಾರು ಮುಂದುವರಿಯಬೇಕು, ಅಸಲಿಗೆ ಬದಲಾವಣೆಯ ಅವಶ್ಯಕತೆ ಇದೆಯಾ ಇಲ್ಲವಾ, ಸಚಿವ ಸಂಪುಟದಲ್ಲಿ ಯಾರಿರಬೇಕು ಮೊದಲಾದ ಎಲ್ಲ ಸಂಗತಿಗಳನ್ನು ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ರಂದೀಪ್ ಸಿಂಗ್ ಸುರ್ಜೆವಾಲಾ ಅವರನ್ನೊಳಗೊಂಡ ಹೈ ಕಮಾಂಡ್ ತೀರ್ಮಾನಿಸುತ್ತದೆ ಎಂದು ಪಾಟೀಲ್ ಹೇಳಿದರು. ಕೆಲ ಶಾಸಕರು ತಮ್ಮ ತಮ್ಮ ನಾಯಕರ ಮೇಲಿನ ಪ್ರೀತಿಯಿಂದ ಅವರು ಸಿಎಂ ಆಗಬೇಕು ಅನ್ನುತ್ತಿರುತ್ತಾರೆ, ಹೈಕಮಾಂಡ್ ಅದೆಲ್ಲವನ್ನು ಗಮನಿಸುತ್ತಿರುತ್ತದೆ ಎಂದು ಪಾಟೀಲ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
