ನಾಳೆ ಕೊವಿಡ್ ಲಸಿಕೆ ಮೇಳಕ್ಕೆ ಚಾಲನೆ; ಸಿಎಂ ಯಡಿಯೂರಪ್ಪ ಜತೆ ಜೆಪಿ ನಡ್ಡಾ ವಿಡಿಯೋ ಕಾನ್ಫರೆನ್ಸ್

ಎಲ್ಲಾ ಬಿಜೆಪಿ ರಾಜ್ಯಗಳ ಮುಖ್ಯ ಮಂತ್ರಿಗಳ ಜೊತೆ ಸಭೆ ನಡೆಸಲಿರುವ ಜೆಪಿ ನಡ್ಡಾ ,ಕೊರೊನಾ ನಿರ್ವಹಣೆಗೆ ಯಾವ ರೀತಿ ಕ್ರಮಕೈಗೊಳ್ಳಲಾಗಿದೆ ಎಂದು ಮಾಹಿತಿ ಕೇಳಬಹುದು. ನಾಳೆಯಿಂದ ಎಲ್ಲಾ ರಾಜ್ಯಗಳಿಗೆ ಕೇಂದ್ರದಿಂದ ಉಚಿತ ಲಸಿಕೆ ನೀಡಲಾಗುತ್ತದೆ.

ನಾಳೆ ಕೊವಿಡ್ ಲಸಿಕೆ ಮೇಳಕ್ಕೆ ಚಾಲನೆ; ಸಿಎಂ ಯಡಿಯೂರಪ್ಪ ಜತೆ ಜೆಪಿ ನಡ್ಡಾ ವಿಡಿಯೋ ಕಾನ್ಫರೆನ್ಸ್
ಸಿಎಂ ಯಡಿಯೂರಪ್ಪ
Follow us
TV9 Web
| Updated By: sandhya thejappa

Updated on:Jun 20, 2021 | 11:31 AM

ಬೆಂಗಳೂರ: ಜೂನ್ 21 ಅಂದರೆ ನಾಳೆ ಕೊವಿಡ್ ಲಸಿಕೆ ಮೇಳಕ್ಕೆ ಚಾಲನೆ ನಿಡುವ ಹಿನ್ನೆಲೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸುತ್ತಿದ್ದಾರೆ. ಈಗಾಗಲೇ ವಿಡಿಯೋ ಕಾನ್ಫರೆನ್ಸ್ ಆರಂಭವಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ, ಡಿಸಿಎಂ ಗೋವಿಂದ ಕಾರಜೋಳ, ಸಚಿವರಾದ ಬಸವರಾಜ ಬೊಮ್ಮಾಯಿ, ಕೆ.ಸುಧಾಕರ್ ಭಾಗಿಯಾಗಿದ್ದಾರೆ.

ಎಲ್ಲಾ ಬಿಜೆಪಿ ರಾಜ್ಯಗಳ ಮುಖ್ಯ ಮಂತ್ರಿಗಳ ಜೊತೆ ಸಭೆ ನಡೆಸಲಿರುವ ಜೆಪಿ ನಡ್ಡಾ , ಕೊರೊನಾ ನಿರ್ವಹಣೆಗೆ ಯಾವ ರೀತಿ ಕ್ರಮಕೈಗೊಳ್ಳಲಾಗಿದೆ ಎಂದು ಮಾಹಿತಿ ಕೇಳಬಹುದು. ನಾಳೆಯಿಂದ ಎಲ್ಲಾ ರಾಜ್ಯಗಳಿಗೆ ಕೇಂದ್ರದಿಂದ ಉಚಿತ ಲಸಿಕೆ ನೀಡಲಾಗುತ್ತದೆ. ಹೀಗಾಗಿ ಸಮರ್ಪಕ ಬಳಕೆ, ಹಾಳಾಗದಂತೆ ಎಚ್ಚರಿಕೆ ಬಗ್ಗೆ ಸಲಹೆ ನೀಡುವ ಸಾಧ್ಯತೆಯಿದೆ. ಕೊರೊನಾದಿಂದ ಕೆಲವೆಡೆ ಸರ್ಕಾರದ ವರ್ಚಸ್ಸು ಕಡಿಮೆಯಾಗಿದೆ. ಸರ್ಕಾರದ ವರ್ಚಸ್ಸು ಹೆಚ್ಚಿಸುವ ನಿಟ್ಟಿನಲ್ಲಿ ತಳ ಮಟ್ಟದಿಂದ ಪಕ್ಷ ಸಂಘಟನೆಗೆ ಒತ್ತು ನೀಡುವ ಬಗ್ಗೆ ಚರ್ಚೆ ನಡೆಸಲಾಗುವುದು.

18ರಿಂದ 44 ವರ್ಷದವರಿಗೆ, 45 ವರ್ಷ ಮೇಲ್ಪಟ್ಟವರಿಗೆ, ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಿಕೆಗೆ ಸಿಎಂ ಚಾಲನೆ ನೀಡಲಿದ್ದಾರೆ. 14 ಲಕ್ಷ ಕೋವಿಶೀಲ್ಡ್ ಡೋಸ್ ದಾಸ್ತಾನು ಇದ್ದು, ಸೋಮವಾರ 5 ರಿಂದ 7 ಲಕ್ಷ ಡೋಸ್ ನೀಡುವ ಗುರಿ ಇರಿಸಲಾಗಿದೆ. ಈವರೆಗೆ 1.80 ಕೋಟಿ ಲಸಿಕೆ ನೀಡಲಾಗಿದೆ.

ಇದನ್ನೂ ಓದಿ

ಕೇಂದ್ರ ಸರ್ಕಾರದಿಂದ ಉಚಿತ ಲಸಿಕೆ ಘೋಷಣೆಯಾಗುತ್ತಿದ್ದಂತೆ ಲಸಿಕೆ ಖರೀದಿಯಿಂದ ಹಿಂದೆ ಸರಿದ ರಾಜ್ಯ ಸರ್ಕಾರ

ಅಂತಾರಾಷ್ಟ್ರೀಯ ಪ್ರಯಾಣದ ನಿರ್ಬಂಧ ಸಡಿಸಿಲಿದ ದುಬೈ; ಭಾರತದಿಂದ ಹೋಗುವವರಿದ್ದರೆ ಈ ನಿಯಮಗಳ ಪಾಲನೆ ಕಡ್ಡಾಯ

(J P Nadda discussion with BS Yediyurappa about corona vaccine on video conference)

Published On - 11:29 am, Sun, 20 June 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್