Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಂಡತನಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ: ಜಗದೀಶ್ ಶೆಟ್ಟರ್ ವಾಗ್ದಾಳಿ

ಹುಬ್ಬಳ್ಳಿಯಲ್ಲಿ ಬೆಳಗಾವಿ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಮಾತನಾಡಿ, ಭಂಡತನಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ ಎಂದು ವಾಗ್ದಾಳಿ ಮಾಡಿದ್ದಾರೆ. ಮೊದಲು ಹಗರಣ ನಡೆದಿಲ್ಲ ಎಂದಿದ್ದವರು ಈಗ ಒಪ್ಪಿಕೊಂಡಿದ್ದಾರೆ. ಇಷ್ಟೆಲ್ಲ ಆದರೂ ಸಿದ್ದರಾಮಯ್ಯ ಭಂಡತನ ಪ್ರದರ್ಶಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಭಂಡತನಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ: ಜಗದೀಶ್ ಶೆಟ್ಟರ್ ವಾಗ್ದಾಳಿ
ಭಂಡತನಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ: ಜಗದೀಶ್ ಶೆಟ್ಟರ್ ವಾಗ್ದಾಳಿ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on: Jul 20, 2024 | 10:07 PM

ಹುಬ್ಬಳ್ಳಿ, ಜುಲೈ 20: ಮೊದಲು ಹಗರಣ ನಡೆದಿಲ್ಲ ಎಂದಿದ್ದವರು ಈಗ ಒಪ್ಪಿಕೊಂಡಿದ್ದಾರೆ. ಇಷ್ಟೆಲ್ಲ ಆದರೂ ಸಿಎಂ ಸಿದ್ದರಾಮಯ್ಯ (Siddaramaiah) ಭಂಡತನ ಪ್ರದರ್ಶಿಸುತ್ತಿದ್ದಾರೆ. ಭಂಡತನಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ ಎಂದು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ (Jagadish Shettar)​ ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣದಲ್ಲಿ ಬಿ.ನಾಗೇಂದ್ರ ರಾಜೀನಾಮೆ ಕೊಟ್ಟರು. ಮುಡಾ ಅವ್ಯವಹಾರದಲ್ಲಿ ಸಿದ್ದರಾಮಯ್ಯ ಸಿಕ್ಕಿಹಾಕಿಕೊಂಡಿದ್ದಾರೆ ಎಂದರು.

ಅದು ಹಿಂದಿನ ಸರ್ಕಾರದ ಅವಧಿಯಲ್ಲಿ ಸೈಟ್ ಹಂಚಿಕೆಯಾಗಿತ್ತು ಅಂತಾರೆ. ಇವರು ಅಧಿಕಾರಕ್ಕೆ ಬಂದು 1 ವರ್ಷವಾದರೂ ಯಾಕೆ ತನಿಖೆ ಮಾಡಿಲ್ಲ? ಬಿಜೆಪಿ ಅವಧಿಯಲ್ಲಿ ತಪ್ಪಾಗಿದ್ದರೆ ಎಸ್​ಐಟಿ ಅಥವಾ ಸಿಬಿಐ ತನಿಖೆಗೆ ವಹಿಸಿ. ಮುಡಾ ಅಕ್ರಮದ ತನಿಖೆ ಸಿಬಿಐಗೆ ವಹಿಸುವ ಧೈರ್ಯ ನಿಮಗಿದೆಯಾ ಎಂದು ಪ್ರಶ್ನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರದು ವಿತಂಡವಾದ

ಅರ್ಕಾವತಿ ಡಿನೋಟಿಫೈ ಪ್ರಕರಣ ಸಿಬಿಐಗೆ ಕೊಡಿ ಅಂದ್ರೂ ಕೊಡಲಿಲ್ಲ. ನಾನು ಸಾಕ್ಷ್ಯಧಾರ ನೀಡಿದ ಮೇಲೆ ಕೆಂಪಣ್ಣ ಆಯೋಗ ರಚಿಸಿ ತನಿಖೆ ಮಾಡಿ ರಿಪೋರ್ಟ್ ನೀಡಿದ್ದರು. ಆದರೆ ಕೆಂಪಣ್ಣ ಆಯೋಗದ ವರದಿಯನ್ನು ಸಿದ್ದರಾಮಯ್ಯ ಸದನಕ್ಕೆ ನೀಡಲಿಲ್ಲ. ನೀವು ತಪ್ಪಿತಸ್ಥರಾಗಿರುವ ಕಾರಣ ಸದನದಲ್ಲಿ ವರದಿ ಮಂಡನೆ ಮಾಡಿಲ್ಲ. ಜನರ ಗಮನ ಬೇರೆಡೆ ಸೆಳೆಯಲು ಖಾಸಗಿ ವಲಯದಲ್ಲಿ ಮೀಸಲಾತಿ ವಿಚಾರ ಹರಿಬಿಟ್ಟರು. ಸಿಎಂ ಸಿದ್ದರಾಮಯ್ಯನವರದು ವಿತಂಡವಾದ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಭೋವಿ ನಿಗಮದ ಅವ್ಯವಹಾರದಲ್ಲಿ ಹೆಸರು ಪ್ರಸ್ತಾಪ: ಆರೋಪ ಹಿಂಪಡೆಯುವಂತೆ ಸಿಎಂಗೆ ಕೋಟ ಶ್ರೀನಿವಾಸ ಪತ್ರ

ಇಡಿ ಅಧಿಕಾರಿಗಳ ಒತ್ತಡ ಹಾಕುತ್ತಾರೆ ಅನ್ನೋದು‌ ಕೂಡ ವಿತಂಡವಾದ. ಸಿದ್ದರಾಮಯ್ಯ ಹೇಳಿದ್ದು ಎಲ್ಲ ನಂಬಬೇಕಾ? ಎಲ್ಲ‌ ಪ್ರಕರಣವನ್ನು ಸಿಬಿಐಗೆ ಕೊಡಿ. ಏನೋ ಇದೆ ಎಂದು ಕಾಗದದ ಹುಲಿ ಅಂತೆ ಹೆದರಿಸುತ್ತಿದ್ದಾರೆ. ಯಾವ ಸಾವಿರಾರು ಕೋಟಿ ರೂ. ಹಣ ನೀವು ಫೈನಾನ್ಸ್ ಮಿನಿಸ್ಟರ್, 15 ಬಜೆಟ್ ಮಂಡನೆ ಮಾಡಿದ್ದೀರಿ. ಸರಿಯಾಗಿ ಹೇಳಬೇಕಲ್ಲ. ಈ ಸರ್ಕಾರದ ಮೇಲೆ ಕಾಂಗ್ರೆಸ್ ಶಾಸಕರೇ ಅಸಮಾಧಾನ ಇದಾರೆ. ಸರ್ಕಾರದಲ್ಲಿ ಹಣವೇ ಇಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಪ್ರಬುದ್ಧ ಯೋಜನೆಗೆ ಕತ್ತರಿ; ಪರಿಶಿಷ್ಟರ ಕನಸಿಗೆ ಕಲ್ಲು ಹಾಕಿದ ಸರ್ಕಾರದ ವಿರುದ್ದ ಬಿವೈ ವಿಜಯೇಂದ್ರ ಆಕ್ರೋಶ

ಗ್ಯಾರಂಟಿ ಸಲುವಾಗಿ ಸರ್ಕಾರದಲ್ಲಿ ಬಹಳ ಗೊಂದಲ ಇದೆ. ರಾಯರೆಡ್ಡಿ ಇದನ್ನು ಹೇಳಿದ್ದಾರೆ. ಯಾವ ಶಾಸಕರಿಗೂ ಹಣ ನೀಡಿಲ್ಲ. ಬಿಜೆಪಿ ಸರ್ಕಾರದಲ್ಲಿ ನಡೆದ ಕೆಲಸಗಳೇ ನಡೆದಿವೆ. ಗ್ಯಾರಂಟಿಗಳ ಬಗ್ಗೆ, ಮುಖ್ಯಮಂತ್ರಿಗಳ ಬಗ್ಗೆ ಶಾಸಕರೇ ಬೇಜಾರಿದ್ದಾರೆ. ಆಡಳಿತ ಶೂನ್ಯವಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ
ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ
ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ
ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ
ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ
ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ
’ಅಂದೊಂತಿತ್ತು ಕಾಲ’, ಆ ಸುಂದರ ಕಾಲ ತೋರಿಸಲು ಬಂದ ವಿನಯ್ ರಾಜ್​ಕುಮಾರ್
’ಅಂದೊಂತಿತ್ತು ಕಾಲ’, ಆ ಸುಂದರ ಕಾಲ ತೋರಿಸಲು ಬಂದ ವಿನಯ್ ರಾಜ್​ಕುಮಾರ್
ಆರೋಪಿಗಳನ್ನು ವಿಜಯಪುರದ ದರ್ಗಾ ಜೈಲಿಗೆ ಕರೆದೊಯ್ದ ಪೊಲೀಸರು
ಆರೋಪಿಗಳನ್ನು ವಿಜಯಪುರದ ದರ್ಗಾ ಜೈಲಿಗೆ ಕರೆದೊಯ್ದ ಪೊಲೀಸರು