ಡಿಕೆ ಶಿವಕುಮಾರ್​​ ಭೇಟಿಯಾದ ಜಗನ್ ಮೋಹನ್ ರೆಡ್ಡಿ ಸಹೋದರಿ ಶರ್ಮಿಳಾ: ಹಿಂದಿನ ರಾಜಕೀಯ ಮರ್ಮವೇನು?

|

Updated on: May 29, 2023 | 3:27 PM

ವೈಎಸ್‌ಆರ್ ತೆಲಂಗಾಣ ಪಕ್ಷದ (YSRTP) ಅಧ್ಯಕ್ಷೆ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ಶರ್ಮಿಳಾ ಅವರು ಸೋಮವಾರ ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಡಿಕೆ ಶಿವಕುಮಾರ್​​ ಭೇಟಿಯಾದ ಜಗನ್ ಮೋಹನ್ ರೆಡ್ಡಿ ಸಹೋದರಿ ಶರ್ಮಿಳಾ: ಹಿಂದಿನ ರಾಜಕೀಯ ಮರ್ಮವೇನು?
ಡಿಕೆ ಶಿವಕುಮಾರ್​​, ವೈಎಸ್​ ಶರ್ಮಿಳಾ
Follow us on

ಬೆಂಗಳೂರು: ವೈಎಸ್‌ಆರ್ ತೆಲಂಗಾಣ ಪಕ್ಷದ (YSRTP) ಅಧ್ಯಕ್ಷೆ ಮತ್ತು ಆಂಧ್ರಪ್ರದೇಶ (Andhra Pradesh) ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ (Jagan Mohan Reddy) ಅವರ ಸಹೋದರಿ ಶರ್ಮಿಳಾ (YS Sharmila) ಅವರು ಸೋಮವಾರ (ಮೇ.29) ಬೆಂಗಳೂರಿನಲ್ಲಿ (Bengaluru) ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ಭೇಟಿ ಮಾಡಿದರು. ಇದು ಅವರ ಎರಡನೇ ಭೇಟಿಯಾಗಿದೆ. ಈ ಹಿಂದೆ ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಫಲಿತಾಂಶ ಪ್ರಕಟವಾದಗಲೂ ಶರ್ಮಿಳಾ, ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದರು. ಇನ್ನು ಈ ಭೇಟಿಯ ಹಿಂದೆ ರಾಜಕೀಯ ಕಾರಣವೂ ಇದೆ ಎಂದು ಹೇಳಲಾಗುತ್ತಿದೆ. ಈ ವರ್ಷ ಡಿಸೆಂಬರ್‌ನಲ್ಲಿ ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆ ಇದ್ದು, ಮುಂಚಿತವಾಗಿ ಹೊಸದಾಗಿ ರಚನೆಯಾದ ವೈಎಸ್‌ಆರ್‌ಟಿಪಿಯನ್ನು ಕಾಂಗ್ರೆಸ್​ನಲ್ಲಿ ವಿಲೀನ ಮಾಡುವ ಅಥವಾ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಗಳ ಬಗ್ಗೆ ಇಬ್ಬರ ನಡುವೆ ಮಾತುಕತೆಗಳ ನಡೆದಿದೆ ಎನ್ನಲಾಗುತ್ತಿದೆ.

ಇನ್ನು ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದಗ ಶರ್ಮಿಳಾ ಅವರು ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದರು. ಅಲ್ಲದೇ ಮೂರು ದಿನಗಳ ಕಾಲ ನಗರದಲ್ಲಿಯೇ ತಂಗಿದ್ದ ಅವರು ಡಿಕೆ ಶಿವಕುಮಾರ್​ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದರು. ಮೊದಲ ಭೇಟಿಯಲ್ಲಿ ಅವರು ಪಕ್ಷದ ಭವಿಷ್ಯ ಮತ್ತು ಕಾಂಗ್ರೆಸ್‌ನೊಂದಿಗೆ ಸಂಭವನೀಯ ವಿಲೀನ ಅಥವಾ ಮೈತ್ರಿಯ ಬಗ್ಗೆ ಚರ್ಚಿಸಿದ್ದರು ಮತ್ತು ಅವರ ಷರತ್ತುಗಳನ್ನು ಮುಂದಿಟ್ಟರು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಸಚಿವ ಸ್ಥಾನ ವಂಚಿತ ಶಾಸಕರಿಂದ ಬಿಡಿಎ ಚೇರ್ಮನ್ ಹುದ್ದೆಗೆ ಶುರುವಾಯ್ತು ಲಾಬಿ: ರೇಸ್​ನಲ್ಲಿ ಯಾರ್ಯಾರು?

ಆದಾಗ್ಯೂ, ಮೇ 17 ರಂದು, ಶರ್ಮಿಳಾ ಅವರು ವೈಎಸ್‌ಆರ್‌ಟಿಪಿಯನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವುದಿಲ್ಲ ಎಂದು ಕಡ್ಡಿ ಮುರಿದ ಹಾಗೆ ಹೇಳಿದ್ದರು. ಒಂದು ವೇಳೆ ವಿಲೀನಗೊಳಿಸುವ ಇಚ್ಛೆ ಇದ್ದಿದ್ದರೇ ಪಕ್ಷವನ್ನು ಪ್ರಾರಂಭಿಸುತ್ತಿರಲಿಲ್ಲ ಎಂದು ಹೇಳಿದ್ದರು.

ಕಾಂಗ್ರೆಸ್ ಪಕ್ಷದ ಚುನಾವಣಾ ತಂತ್ರಗಾರ ಸುನಿಲ್ ಕಾನುಗೋಲು ಅವರು ವೈಎಸ್ ಶರ್ಮಿಳಾ ಅವರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಡಿಕೆ ಶಿವಕುಮಾರ್ ತಂತ್ರ ಅನುಸರಿಸಲು ಮುಂದಾದ ಟಿಪಿಸಿಸಿ

ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (TPCC) ಇದುವರೆಗೆ ರಾಜ್ಯದ ಚುನಾವಣಾ ರಾಜಕೀಯದಲ್ಲಿ ಗಂಭೀರವಾದ ಪ್ರಭಾವ ಬೀರಲು ವಿಫಲವಾಗಿದೆ. ಏತನ್ಮಧ್ಯೆ , ಪಕ್ಷವನ್ನು ಒಗ್ಗೂಡಿಸಲು ಮತ್ತು ಪ್ರಬಲ ಶಕ್ತಿಯನ್ನಾಗಿ ಮಾಡಲು ಡಿಕೆ ಶಿವಕುಮಾರ್‌ಗೆ ಪ್ರಮುಖ ಪಾತ್ರವನ್ನು ನೀಡಲಾಗುವುದು ಎಂಬುದು ಪಕ್ಷದ ವಲಯದಲ್ಲಿ ಸುದ್ದಿ ಹಬ್ಬಿದೆ.

ಈ ಹಿನ್ನೆಲೆ ಟಿಪಿಸಿಸಿಯಲ್ಲಿನ ಗುಂಪುಗಾರಿಕೆಯನ್ನು ಶಮನ ಮಾಡಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರ ಆಡಳಿತ ಕೌಶಲ್ಯವನ್ನು ಬಳಸಿಕೊಳ್ಳಲು ಮತ್ತು ಕರ್ನಾಟಕದಲ್ಲಿ ನಾಯಕರನ್ನು ಒಗ್ಗೂಡಿಸಲು ಡಿಕೆ ಶಿವಕುಮಾರ್​ ಉಪಯೋಗಿಸಿದ ತಂತ್ರಗಳನ್ನು ಅಳವಡಿಸಿಕೊಳ್ಳ ಟಿಪಿಸಿಸಿ ಮುಂದಾಗಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:17 pm, Mon, 29 May 23