AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತೀಶ್ ಸೈಲ್​ಗೆ ಶಿಕ್ಷೆ: ನ್ಯಾಯಾಂಗದ ಮೇಲೆ ಜನರಿಗೆ ವಿಶ್ವಾಸ ಬಂದಿದೆ ಎಂದ ನಿವೃತ್ತ ನ್ಯಾ.ಸಂತೋಷ್ ಹೆಗ್ಡೆ

ಬೇಲೇಕೇರಿ ಬಂದರಿನ ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ತೀರ್ಪಿನ ಬಗ್ಗೆ ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಅವರು ಸಂತೋಷ ವ್ಯಕ್ತಪಡಿಸಿದ್ದು, ನ್ಯಾಯಾಂಗದ ಮೇಲಿನ ನಂಬಿಕೆ ಹೆಚ್ಚಿದೆ ಎಂದಿದ್ದಾರೆ.

ಸತೀಶ್ ಸೈಲ್​ಗೆ ಶಿಕ್ಷೆ: ನ್ಯಾಯಾಂಗದ ಮೇಲೆ ಜನರಿಗೆ ವಿಶ್ವಾಸ ಬಂದಿದೆ ಎಂದ ನಿವೃತ್ತ ನ್ಯಾ.ಸಂತೋಷ್ ಹೆಗ್ಡೆ
ಸತೀಶ್ ಸೈಲ್​ಗೆ ಶಿಕ್ಷೆ: ನ್ಯಾಯಾಂಗದ ಮೇಲೆ ಜನರಿಗೆ ವಿಶ್ವಾಸ ಬಂದಿದೆ ಎಂದ ನಿವೃತ್ತ ನ್ಯಾ.ಸಂತೋಷ್ ಹೆಗ್ಡೆ
ಗಂಗಾಧರ​ ಬ. ಸಾಬೋಜಿ
|

Updated on: Oct 26, 2024 | 6:59 PM

Share

ಬೆಂಗಳೂರು, ಅಕ್ಟೋಬರ್​ 26: ಬೇಲೇಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಟ ಕೇಸ್​ನಲ್ಲಿ ಇದೀಗ ಕಾಂಗ್ರೆಸ್​ ಶಾಸಕ ಸತೀಶ್ ಸೈಲ್​ಗೆ (Satish Sail) 7 ವರ್ಷ ಶಿಕ್ಷೆ ವಿಧಿಸಲಾಗಿದೆ. ಈ ಪ್ರಕರಣವನ್ನು ಮೊದಲು ಬಯಲಿಗೆಳೆದಿದ್ದ ಅಂದಿನ ಕರ್ನಾಟಕ ಲೋಕಾಯುಕ್ತರಾಗಿದ್ದ ಎನ್. ಸಂತೋಷ್ ಹೆಗ್ಡೆ ಪ್ರತಿಕ್ರಿಯಿಸಿದ್ದು, ನ್ಯಾಯಾಂಗದ ಮೇಲೆ ಜನರಿಗೆ ವಿಶ್ವಾಸ ಬಂದಿದೆ ಎಂದು ಹೇಳಿದ್ದಾರೆ.

ಅಕ್ರಮದಲ್ಲಿ ಇನ್ನೂ ಹಲವರು ಇದ್ದಾರೆ, ಅವರಿಗೂ ಶಿಕ್ಷೆ ಆಗಬೇಕು ಎಂದ ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ 

ನಗರದಲ್ಲಿ ಟಿವಿ9 ಜೊತೆ ಮಾತನಾಡಿದ ಅವರು, ನ್ಯಾಯಾಲಯದ ತೀರ್ಪಿನಿಂದ ನನಗೆ ಬಹಳ ಖುಷಿಯಾಗಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗೇ ಆಗುತ್ತದೆ ಎಂದು ತೋರಿಸುತ್ತದೆ. ಅಕ್ರಮ ಅದಿರು ಸಾಗಣೆ ಕೇಸ್​ನಲ್ಲಿ ಶಿಕ್ಷೆಯಾಗಿದ್ದು ಉತ್ತಮ ಬೆಳವಣಿಗೆ ಎಂದಿದ್ದಾರೆ.

ಇದನ್ನೂ ಓದಿ: ಸತೀಶ್ ಸೈಲ್​ಗೆ ಜೈಲು ಶಿಕ್ಷೆ: ಯಾವ ಪ್ರಕರಣದಲ್ಲಿ ಎಷ್ಟು ಶಿಕ್ಷೆ? ಇಲ್ಲಿದೆ ವಿವರ

ದೊಡ್ಡ ರಾಜಕಾರಣಿಗಳ ವಿರುದ್ಧ ತನಿಖೆ ವೇಳೆ ಅಡೆತಡೆ ಎದುರಾಗಿತ್ತು. ನನ್ನ ಜೊತೆ ಕೆಲಸ ಮಾಡಿದ ಅಧಿಕಾರಿಗಳಿಗೆ ಸಂತೃಪ್ತಿ ಸಿಕ್ಕಂತಾಗುತ್ತೆ. ಶಿಕ್ಷೆಯಾಗಿರುವುದರಿಂದ ನ್ಯಾಯಾಂಗದ ಶಕ್ತಿ ತೋರಿಸಿದಂತಾಗುತ್ತೆ. ಅಕ್ರಮದಲ್ಲಿ ಇನ್ನೂ ಹಲವರು ಇದ್ದಾರೆ, ಅವರಿಗೂ ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ.

ಅಕ್ರಮ ಮಾಡಿದವರ ಪರ ನಿಲ್ಲುವುದು ಕಾಂಗ್ರೆಸ್ ಧೋರಣೆ: ಪ್ರಲ್ಹಾದ್​ ಜೋಶಿ ವಾಗ್ದಾಳಿ 

ಬೆಂಗಳೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಮಾತನಾಡಿದ್ದು, ಸರ್ಕಾರ ಕೂಡಲೇ ಸತೀಶ್ ಸೈಲ್​ರನ್ನು ಅನರ್ಹಗೊಳಿಸಬೇಕು. ಸರ್ಕಾರ ಹಾಗೂ ವಿಧಾನಸಭೆ ಸ್ಪೀಕರ್​ಗೆ ಮನವಿ ಮಾಡುತ್ತೇನೆ. ತಕ್ಷಣವೇ ಸೈಲ್​ರನ್ನ ಶಾಸಕ ಸ್ಥಾನದಿಂದ ವಜಾಗೊಳಿಸಿ ಉಪಚುನಾವಣೆ​ ನಡೆಸಬೇಕು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ನ ಸತೀಶ್​​ ಸೈಲ್​ಗೆ 7 ವರ್ಷ ಜೈಲು: ಬೇಲೆಕೇರಿ ಅದಿರು ಅಕ್ರಮ ಸಾಗಾಟ ಪ್ರಕರಣದಲ್ಲಿ ಮಹತ್ವದ ತೀರ್ಪು

ಕಾಂಗ್ರೆಸ್ ನಾಯಕರು ಸತೀಶ್ ಸೈಲ್ ಪರ ಮಾತಾಡುತ್ತಿದ್ದರು. ಕಳ್ಳರ ಬಗ್ಗೆ ಕಾಂಗ್ರೆಸ್ ಚೆನ್ನಾಗಿ ಸಮರ್ಥನೆ ಮಾಡಿಕೊಳ್ಳುತ್ತದೆ. ಅಕ್ರಮ ಮಾಡಿದವರ ಪರ ನಿಲ್ಲುವುದು ಕಾಂಗ್ರೆಸ್ ಧೋರಣೆ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.