AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2023ರ ವೇಳೆಗೆ ಕರ್ನಾಟಕದ ಗ್ರಾಮೀಣ ಭಾಗದ ಎಲ್ಲ ಮನೆಗಳಿಗೂ ನಲ್ಲಿ ನೀರು ಪೂರೈಕೆಗೆ ಜಲಜೀವನ್ ಮಿಷನ್​ನಡಿ ₹5,009 ಕೋಟಿ ಹಣ ವಿತರಣೆಗೆ ಅನುಮತಿ

Jal Jeevan mission: 2020-21 ರಲ್ಲಿ ಇದೇ ಯೋಜನೆಯಡಿ ಕರ್ನಾಟಕಕ್ಕೆ 1,189 ಕೋಟಿ ಹಣವನ್ನು ಮಾತ್ರ ವಿತರಿಸಲಾಗಿತ್ತು. ಆದರೆ ಈಗ ಅದರ ನಾಲ್ಕು ಪಟ್ಟು ಹೆಚ್ಚಿನ ಹಣ ವಿತರಿಸಲು ಕೇಂದ್ರದ ಜಲಶಕ್ತಿ ಇಲಾಖೆ ಒಪ್ಪಿಗೆ ಸೂಚಿಸಿದೆ.

2023ರ ವೇಳೆಗೆ ಕರ್ನಾಟಕದ ಗ್ರಾಮೀಣ ಭಾಗದ ಎಲ್ಲ ಮನೆಗಳಿಗೂ ನಲ್ಲಿ ನೀರು ಪೂರೈಕೆಗೆ ಜಲಜೀವನ್ ಮಿಷನ್​ನಡಿ ₹5,009 ಕೋಟಿ ಹಣ ವಿತರಣೆಗೆ ಅನುಮತಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jul 08, 2021 | 8:20 PM

Share

ದೆಹಲಿ: ಕರ್ನಾಟಕಕ್ಕೆ 2021-22 ನೇ ಸಾಲಿನಲ್ಲಿ ಜಲಜೀವನ್ ಮಿಷನ್​ನಡಿ ₹5,009 ಕೋಟಿ ಹಣವನ್ನು ವಿತರಿಸಲಾಗುವುದು ಎಂದ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ತಿಳಿಸಿದ್ದಾರೆ. 2023 ರೊಳಗೆ ಕರ್ನಾಟಕದ ಗ್ರಾಮೀಣ ಭಾಗದ ಎಲ್ಲ ಮನೆಗಳಿಗೂ ನಲ್ಲಿ ನೀರು ಪೂರೈಕೆ ಗುರಿ ಹೊಂದಲಾಗಿದ್ದು, ಕರ್ನಾಟಕದಲ್ಲಿ ಸದ್ಯ ಶೇ.32 ರಷ್ಟು ಮನೆಗಳಿಗೆ ಮಾತ್ರ ನಲ್ಲಿ ಮೂಲಕ ನೀರು ಪೂರೈಕೆಯಾಗುತ್ತಿದೆ. ಈ ಕಾರಣದಿಂದ ರಾಜ್ಯದ ಗ್ರಾಮೀಣ ಭಾಗದ ಎಲ್ಲಾ ಮನೆಗಳಿಗೂ ನಲ್ಲಿಯ ಮೂಲಕ ನೀರು ಪೂರೈಸಲು ಹೆಚ್ಚಿನ ಪ್ರಮಾಣದ ಅನುದಾನ ಒದಗಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

2020-21 ರಲ್ಲಿ ಇದೇ ಯೋಜನೆಯಡಿ ಕರ್ನಾಟಕಕ್ಕೆ 1,189 ಕೋಟಿ ಹಣವನ್ನು ಮಾತ್ರ ವಿತರಿಸಲಾಗಿತ್ತು. ಆದರೆ ಈಗ ಅದರ ನಾಲ್ಕು ಪಟ್ಟು ಹೆಚ್ಚಿನ ಹಣ ವಿತರಿಸಲು ಕೇಂದ್ರದ ಜಲಶಕ್ತಿ ಇಲಾಖೆ ಒಪ್ಪಿಗೆ ಸೂಚಿಸಿದೆ. 2019 ರಲ್ಲಿ ಈ ಯೋಜನೆ ಪ್ರಾರಂಭವಾದಾಗ, ದೇಶದ ಒಟ್ಟು 19.20 ಕೋಟಿ ಗ್ರಾಮೀಣ ಕುಟುಂಬಗಳಲ್ಲಿ, ಕೇವಲ 3.23 ಕೋಟಿ (17%) ಜನರು ಮಾತ್ರ ನಲ್ಲಿ ನೀರು ಸರಬರಾಜು ಹೊಂದಿದ್ದರು. ಕಳೆದ 22 ತಿಂಗಳುಗಳಲ್ಲಿ, ಕೊವಿಡ್ ಸೋಂಕು ಮತ್ತು ಲಾಕ್‌ಡೌನ್ ಅಡೆತಡೆಗಳ ಹೊರತಾಗಿಯೂ, ಜಲ ಜೀವನ್ ಮಿಷನ್​ನ್ನು ತೀವ್ರಗತಿಯಲ್ಲಿ ಜಾರಿಗೆ ತರಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಅವಧಿಯಲ್ಲಿ 4.42 ಕೋಟಿ ಮನೆಗಳಿಗೆ ನೀರಿನ ಪೈಪ್​ ಸಂಪರ್ಕ ಒದಗಿಸಲಾಗಿದೆ. ವ್ಯಾಪ್ತಿ 23.36% ರಷ್ಟು ಹೆಚ್ಚಾಗುವುದರೊಂದಿಗೆ, ಪ್ರಸ್ತುತ ದೇಶಾದ್ಯಂತ 7.66 ಕೋಟಿ (40.5%) ಗ್ರಾಮೀಣ ಕುಟುಂಬಗಳು ನಲ್ಲಿ ನೀರನ್ನು ಸೌಕರ್ಯ ಪಡೆದಿವೆ. ಗೋವಾ, ತೆಲಂಗಾಣ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಪುದುಚೇರಿ ಗ್ರಾಮೀಣ ಪ್ರದೇಶಗಳಲ್ಲಿ 100% ಮನೆಗಳಿಗೆ ಈ ಸೌಕರ್ಯವನ್ನು ಕಲ್ಪಿಸಲಾಗಿದೆ. ಎಂದು ಸರ್ಕಾರ ತಿಳಿಸಿದೆ. ಪ್ರಸ್ತುತ ದೇಶದ 69 ಜಿಲ್ಲೆಗಳ 98 ಸಾವಿರಕ್ಕೂ ಹೆಚ್ಚು ಹಳ್ಳಿಗಳಲ್ಲಿ, ಪ್ರತಿ ಮನೆಯಲ್ಲೂ ನಲ್ಲಿ ನೀರು ಸರಬರಾಜು ಇದ್ದು, ಪ್ರತಿ ಹಳ್ಳಿಯ ಪ್ರತಿಯೊಂದು ಮನೆಗೂ ನಲ್ಲಿ ನೀರಿನ ಸಂಪರ್ಕವನ್ನು ಒದಗಿಸುವ ಮಹತ್ವಾಕಾಂಕ್ಷೆಯನ್ನು ಸರ್ಕಾರ ಹೊಂದಿದೆ.

ಕರ್ನಾಟಕದಲ್ಲಿ, 91.19 ಲಕ್ಷ ಮನೆಗಳಲ್ಲಿ, 29.96 ಲಕ್ಷ ಕುಟುಂಬಗಳಿಗೆ (32.86%) ನಲ್ಲಿ ನೀರಿನ ಸಂಪರ್ಕವನ್ನು ಒದಗಿಸಲಾಗಿದೆ. 15 ಆಗಸ್ಟ್ 2019 ರಂದು, ಜಲ ಜೀವನ್ ಮಿಷನ್ ಪ್ರಾರಂಭಿಸುವ ಸಮಯದಲ್ಲಿ, 24.51 ಲಕ್ಷ (26.88%) ಕುಟುಂಬಗಳು ಕೊಳವೆ ನೀರು ಸರಬರಾಜು ಹೊಂದಿದ್ದವು. 22 ತಿಂಗಳಲ್ಲಿ ರಾಜ್ಯದಲ್ಲಿ ಕೇವಲ 5.44 ಲಕ್ಷ ಮನೆಗಳಿಗೆ ಮಾತ್ರ ನಲ್ಲಿ ನೀರಿನ ಸಂಪರ್ಕ ನೀಡಲಾಗಿದೆ. 2021-22ರಲ್ಲಿ 25.17 ಲಕ್ಷ ಮನೆಗಳಿಗೆ, 2022-23ರಲ್ಲಿ 17.93 ಲಕ್ಷ ನಲ್ಲಿ ನೀರಿನ ಸಂಪರ್ಕ ಮತ್ತು 2023-24ರಲ್ಲಿ ಉಳಿದ 19.93 ಲಕ್ಷ ನಲ್ಲಿ ನೀರಿನ ಸಂಪರ್ಕಗಳನ್ನು ಒದಗಿಸಲು ರಾಜ್ಯವು ಯೋಜಿಸಿದೆ.

ಇದನ್ನೂ ಓದಿ: 

Big News: ರೈತರಿಗೆ ಎಪಿಎಂಸಿ ಮೂಲಕ 1 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಣೆ, 23,123 ಕೋಟಿ ತುರ್ತು ಕೊವಿಡ್​ ಫಂಡ್ ಬಿಡುಗಡೆ: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

K Annamalai: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ನೇಮಕ

(Jal Jeevan mission Central Govt allocates Rs 5009 Crore grant to Karnataka )

Published On - 8:06 pm, Thu, 8 July 21

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ