Bengaluru News: ಬೆಂಗಳೂರಿನಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಅರೆಸ್ಟ್

ಬೆಂಗಳೂರಲ್ಲಿ ಹೆಸರು ಬದಲಾಯಿಸಿಕೊಂಡು ಓಡಾಡುತ್ತಿದ್ದ ಶಂಕಿತ ಉಗ್ರ ತಾಲಿಬ್ ಹುಸೇನ್​ನನ್ನು ಜಮ್ಮು ಕಾಶ್ಮೀರದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Bengaluru News: ಬೆಂಗಳೂರಿನಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಅರೆಸ್ಟ್
ಉಗ್ರ ತಾಲಿಬ್ ಹುಸೇನ್
Edited By: Rakesh Nayak Manchi

Updated on: Jun 07, 2022 | 4:12 PM

ಬೆಂಗಳೂರು: ನಗರದಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್​ನನ್ನು ಪೊಲೀಸರು ಬಂಧಿಸುವಲ್ಲಿ ಯಶ್ವಿಯಾಗಿದ್ದಾರೆ. ಕಾಶ್ಮೀರದಿಂದ ಬೆಂಗಳೂರಿಗೆ ಬಂದು ಹೆಸರು ಬದಲಾಯಿಸಿಕೊಂಡು ಓಡಾಡುತ್ತಿದ್ದ ಉಗ್ರ ತಾಲಿಬ್ ಹುಸೇನ್ (38)​ನನ್ನು ಜಮ್ಮು ಮತ್ತ ಕಾಶ್ಮೀರದ ಪೊಲೀಸರು ಶ್ರೀರಾಂಪುರದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಇದನ್ನೂ ಓದಿ: Kupwara Encounter: ಕಾಶ್ಮೀರದ ಕುಪ್ವಾರಾದಲ್ಲಿ ಎನ್​ಕೌಂಟರ್; ಸೇನಾ ಪಡೆಯಿಂದ ಇಬ್ಬರು ಎಲ್​ಇಟಿ ಉಗ್ರರ ಹತ್ಯೆ

ಬೆಂಗಳೂರಿನಲ್ಲಿ ತಾಲಿಕ್ ಎಂದು ಹೆಸರು ಬದಲಿಸಿ ಓಡಾಡ್ತಿದ್ದ ಶಂಕಿತ ಉಗ್ರ ತಾಲಿಬ್, ಬಿಎನ್​ಎಲ್​ ಏರ್​ ಸರ್ವಿಸ್​ನಲ್ಲಿ ಕೆಲಸ ಮಾಡುತ್ತಿದ್ದ. ಕಾಶ್ಮೀರದಿಂದ ಬೆಂಗಳೂರಿಗೆ ಬರುವ ವೇಳೆಯಲ್ಲಿ ಪೊಲೀಸ್​ ಪತ್ನಿಯನ್ನೇ ಕರೆತಂದಿದ್ದಾನೆ. ಅದರಂತೆ ಪತ್ನಿ ಸಲೀಮಾ (35) ಮತ್ತು ಆಸೀಫ್(6),ದಾನೀಫರ್ (10),ಆಶಿಯಾ(2) ಎಂಬ ಮೂವರು ಮಕ್ಕಳ ಜೊತೆಗೆ ಬೆಂಗಳೂರಿನಲ್ಲಿ ನೆಲಸಿದ್ದನು.

ಶಂಕಿತನಿಗೆ ಆಶ್ರಯ ನೀಡಿದ ಮಸೀದಿ ಮುಖ್ಯಸ್ಥ

ಶಂಕಿತ ಉಗ್ರ ತಾಲಿಬ್ ಹುಸೇನ್​ಗೆ ಓಕಳಿಪುರಂ ಮಸೀದಿ ಮುಖ್ಯಸ್ಥ ಅನ್ವರ್ ಪಾಷಾ ಆಶ್ರಯ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಮಸೀದಿ ಪಕ್ಕದಲ್ಲೇ ರೂಮ್ ಮಾಡಿ ನೆಲೆಸಿದ್ದನು. ಅಷ್ಟೇ ಅಲ್ಲದೆ ಅಲ್ಲಿನ ಮಸೀದಿಯಲ್ಲಿ ಪಾಠ ಪ್ರವಚನ ಮಾಡುತ್ತಿದ್ದ ಶಂಕೆಯೂ ವ್ಯಕ್ತವಾಗಿದೆ. ಈತನಿಗೆ ಓಕಳಿಪುರಂ ನಿವಾಸಿಯಾದ ಮೌಸೀನ್ ಎಂಬಾತ ಸಿಮ್ ಕಾರ್ಡ್​ ಕೊಡಿಸಿದ್ದಾನೆ ಎನ್ನಲಾಗುತ್ತಿದೆ. ಸದ್ಯ ತಾಲಿಬ್​ನನ್ನು ಪೊಲೀಸರು ಬಂಧಿಸಿ ಕಾಶ್ಮೀರಕ್ಕೆ ಕರೆದುಕೊಂಡು ಹೋಗಿದ್ದಾರೆ.

ಶಂಕಿತ ಉಗ್ರರ ಮೇಲೆ ಹದ್ದಿನ ಕಣ್ಣು

ಬೆಂಗಳೂರಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನದ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj  Bommai), ಇಂತಹ ಶಂಕಿತರ ಮೇಲೆ ಪೊಲೀಸ್ ಇಲಾಖೆ ನಿರಂತರ ಕಣ್ಣಿಟ್ಟಿದೆ. ಜಮ್ಮು-ಕಾಶ್ಮೀರ ಪೊಲೀಸರು ಕೂಡ ಹದ್ದಿನ ಕಣ್ಣಿಟ್ಟಿದ್ದಾರೆ.  ಹಿಂದೆಯೂ ಭಟ್ಕಳ, ಶಿರಸಿಯಲ್ಲಿ ಶಂಕಿತರನ್ನು ಬಂಧಿಸಲಾಗಿತ್ತು. ಕಾಶ್ಮೀರ ಪೊಲೀಸರಿಗೆ ಕರ್ನಾಟಕ ಪೊಲೀಸರು ಸಹಕಾರ ನೀಡುತ್ತಿದ್ದಾರೆ ಎಂದರು.

ಶಂಕಿತ ಉಗ್ರನ ಬಂಧನದ ಬಗ್ಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ (Prathap Reddy), ಜಮ್ಮು-ಕಾಶ್ಮೀರ ಪೊಲೀಸರು ಶಂಕಿತ ಉಗ್ರನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ನಮ್ಮ ಜೊತೆ ಜಮ್ಮು ಪೊಲೀಸರು ಸಂಪರ್ಕದಲ್ಲಿದ್ದಾರೆ. ಆದರೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ವಿನಿಮಯವಾಗಿಲ್ಲ. ಮುಂದಿನ ಹಂತದಲ್ಲಿ ನಮ್ಮ ಪೊಲೀಸರು ತನಿಖೆ ಮಾಡಲಿದ್ದಾರೆ ಎಂದಿದ್ದಾರೆ.

YouTube video player

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:22 am, Tue, 7 June 22

TV9 Web

TV9 Kannada

Read More
Loading...
Unable to load recommendations.
Follow Us