ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಬೊಮ್ಮಾಯಿ ಸರ್ಕಾರ ಮೀನಾಮೇಷ: ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ

| Updated By: ರಮೇಶ್ ಬಿ. ಜವಳಗೇರಾ

Updated on: Jan 04, 2023 | 7:38 PM

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಆಸ್ತಿ ಜಪ್ತಿ ಮಾಡಲು ಕರ್ನಾಟಕ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಇದರಿಂದ ಸಿಬಿಐ ರಾಜ್ಯ ಸೆರ್ಕಾರದ ವಿರುದ್ಧ ಸಿಬಿಐ ಹೈಕೋರ್ಟ್ ಮೊರೆ ಹೊಗಿದೆ.

ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಬೊಮ್ಮಾಯಿ ಸರ್ಕಾರ ಮೀನಾಮೇಷ: ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ
ಜನಾರ್ದನ ರೆಡ್ಡಿ ಆಸ್ತಿ ಪ್ರಕರಣ
Follow us on

ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ, ಮಾಜಿ ಸಚಿವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ (Gali Janardhan Reddy) ಆಸ್ತಿ ಜಪ್ತಿಗೆ ಕರ್ನಾಟಕ ಸರ್ಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಸಿಬಿಐ (CBI) ಹೈಕೋರ್ಟ್ ಮೆಟ್ಟಿಲೇರಿದೆ. ಅಕ್ರಮ ಹಣದ ಮೂಲದಿಂದ ಖರೀದಿಸಿದ್ದ ಜನಾರ್ದನ ರೆಡ್ಡಿ ಆಸ್ತಿಯನ್ನು ಜಪ್ತಿ ಮಾಡಿ ಎಂದು ಕರ್ನಾಟಕ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದರೂ ಅನುಮತಿ ನೀಡಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಸಿಬಿಐ ಮನವಿ ಹೈಕೋರ್ಟ್​ಗೆ (Karnataka High court) ಮನವಿ ಮಾಡಿದೆ.

ಇದನ್ನೂ ಓದಿ: ಹೊಸ ಪಕ್ಷ ಸ್ಥಾಪನೆ ಜತೆಗೆ ತಾವು ಸ್ಪರ್ಧೆ ಮಾಡುವ ಕ್ಷೇತ್ರವನ್ನೂ ಘೋಷಿಸಿದ ಜನಾರ್ದನ ರೆಡ್ಡಿ

ಜನಾರ್ದನ ರೆಡ್ಡಿಯ 219 ಆಸ್ತಿಗಳನ್ನ ಹೊಸದಾಗಿ ಪತ್ತೆ ಮಾಡಿದ್ದೇವೆ. ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಆಸ್ತಿ ಪತ್ತೆ ಹಚ್ಚಿದ್ದು, ಅಕ್ರಮ ಹಣದ ಮೂಲದಿಂದ ಖರೀದಿಸಿದ ಆಸ್ತಿ ಎಂದು ತಿಳಿದುಬಂದಿದೆ. ಇದರಿಂದ ಆಸ್ತಿ ಜಪ್ತಿಗೆ ಅನುಮತಿ ಕೋರಿ ಕರ್ನಾಟಕ ಸರ್ಕಾರಕ್ಕೆ  2022ರ ಆ.30ರಂದೇ ಅರ್ಜಿ ಸಲ್ಲಿಸಲಾಗಿದೆ. ಆದರೂ ಸಹ ರೆಡ್ಡಿ ಆಸ್ತಿ ಜಪ್ತಿಗೆ ಸರ್ಕಾರ ಅನುಮತಿ ನೀಡಿಲ್ಲ. ಈ ವಿಚಾರ ತಿಳಿದು ಜನಾರ್ದನ ರೆಡ್ಡಿ ಆಸ್ತಿ ಮಾರಾಟ ಮಾಡುತ್ತಿದ್ದಾರೆ. ಕರ್ನೂಲ್, ರಂಗಾರೆಡ್ಡಿ ಜಿಲ್ಲೆಗಳಲ್ಲಿನ ಆಸ್ತಿ ಮಾರಾಟಕ್ಕೆ ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ರೆಡ್ಡಿ ಆಸ್ತಿ ಜಪ್ತಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಸಿಬಿಐ ಕೋರ್ಟ್​ಗೆ ಮನವಿ ಮಾಡಿದೆ.

ಅಕ್ರಮ ಗಣಿಗಾರಿಕೆ ಹಿನ್ನೆಲೆಯಲ್ಲಿ 2013 ರಲ್ಲಿ ಸಿಬಿಐ ಆರೋಪಪಟ್ಟಿ ಸಲ್ಲಿಸಿತ್ತು. ಸರ್ಕಾರದ‌ ಬೊಕ್ಕಸಕ್ಕೆ 198 ಕೋಟಿ ನಷ್ಟ ಉಂಟು ಮಾಡಿದ್ದಾಗಿ ಆರೋಪಿಸಿತ್ತು.

ಇದನ್ನೂ ಓದಿ: ಸ್ನೇಹವೋ.. ಅಧಿಕಾರವೋ.. ಆಪ್ತ ಸ್ನೇಹಿತ‌ನ ರೀ ಎಂಟ್ರೀ, ಇಕ್ಕಟ್ಟಿಗೆ ಸಿಲುಕಿದ ಸಚಿವ ಶ್ರೀರಾಮುಲು…!

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಘೋಷಿಸಿ ರಾಜ್ಯ ರಾಜಕಾರಣದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಜನಾರ್ದನ ರೆಡ್ಡಿ ವಿರುದ್ಧ ಇದೀಗ ಪರೋಕ್ಷವಾಗಿ ಸಿಬಿಐ ಎದ್ದು ನಿಂತಿದೆ. ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದ್ದರಿಂದ ಇನ್ನಾದರೂ ರಾಜ್ಯ ಸರ್ಕಾರ ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಅನುಮತಿ ನೀಡುತ್ತಾ? ಇನ್ನು ಹೈಕೋರ್ಟ್ ಸರ್ಕಾರಕ್ಕೆ ಹಾಗೂ ಸಿಬಿಐಗೆ ಏನು ಹೇಳುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ