AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janardhana Reddy Cases ಜನಾರ್ದನ ರೆಡ್ಡಿ ವಿರುದ್ಧದ 4 ಕೇಸ್​ ಕ್ಲೋಸ್: ಗಣಿ ಧಣಿ ಚುನಾವಣೆ ಹಾದಿ ಸುಗಮ…!

ಐಟಿ ಅಧಿಕಾರಿಗಳು ದಾಖಲಿಸಿದ್ದ ನಾಲ್ಕು ಬೇನಾಮಿ ಆಸ್ತಿ ಪ್ರಕರಣಗಳಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್​ ಸಿಕ್ಕಿದೆ. ಇದರಿಂದ ಅವರ ಚುನಾವಣೆ ಹಾದಿ ಸುಗಮವಾಗಿದೆ.

Janardhana Reddy Cases ಜನಾರ್ದನ ರೆಡ್ಡಿ ವಿರುದ್ಧದ 4 ಕೇಸ್​ ಕ್ಲೋಸ್: ಗಣಿ ಧಣಿ ಚುನಾವಣೆ ಹಾದಿ ಸುಗಮ...!
ಜನಾರ್ದನ ರೆಡ್ಡಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Dec 07, 2022 | 7:19 PM

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ಅಖಾಡಕ್ಕಿಳಿಯಲು ತಯಾರಿ ಮಾಡಿಕೊಳ್ಳುತ್ತಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ( Janardhana Reddy) ಬೇನಾಮಿ ಆಸ್ತಿ ಪ್ರಕರಣಗಳಲ್ಲಿ ಬಿಗ್​ ರಿಲೀಫ್ ಸಿಕ್ಕಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಆಧರಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಜನಾರ್ದನ ರೆಡ್ಡಿ ವಿರುದ್ಧದ ನಾಲ್ಕು ಪ್ರಕರಣಗಳನ್ನು ಕ್ಲೋಸ್ ಮಾಡಿದೆ.

2009ರಲ್ಲಿ ಬೇನಾಮಿ ಆಸ್ತಿ ಗಳಿಕೆ (Benami Property cases) ಮಾಡಿದ ಆರೋಪ ಮೇರೆಗೆ IT ಇಲಾಖೆಯಲ್ಲಿ ದಾಖಲಾಗಿದ್ದ ನಾಲ್ಕು ಪ್ರಕರಣಗಳು 2021ರಲ್ಲಿ ಆದಾಯ ತೆರಿಗೆ ಇಲಾಖೆ ಕೇಸ್​ ದಾಖಲಿಸಿತ್ತು, ಆದ್ರೆ, 2016ರ ಕಾಯ್ದೆಯನ್ನು 2009 ರ ಕೃತ್ಯಕ್ಕೆ ಪೂರ್ವಾನ್ವಯಿಸುವಂತಿಲ್ಲವೆಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಇದನ್ನೂ ಓದಿ: ಗಂಗಾವತಿಯನ್ನೇ ಆಯ್ಕೆ ಮಾಡಿಕೊಂಡಿದ್ಯಾಕೆ? ಕೊನೆಗೂ ಕಾರಣ ಕೊಟ್ಟ ಜನಾರ್ದನ ರೆಡ್ಡಿ

ಈ ಹಿಂದೆ ಸುಪ್ರೀಂ ಕೋರ್ಟ್ (Supreme Court) ನೀಡಿದ್ದ ತೀರ್ಪು ಆಧರಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲ ಕೇಸ್ ಕ್ಲೋಸ್​ ಮಾಡಿದೆ. 2009 ರಲ್ಲಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಆರೋಪಿಸಿ ಐಟಿ ಅಧಿಕಾರಿಗಳು 2016ರ ಬೇನಾಮಿ ವ್ಯವಹಾರ ನಿರ್ಬಂಧ ಕಾಯ್ದೆಯಡಿ ಐಟಿ ಕೇಸ್ ದಾಖಲಿಸಿತ್ತು. ಆದ್ರೆ, ಸುಪ್ರೀಂ ಕೋರ್ಟ್, 2016ರ ಕಾಯ್ದೆಯನ್ನು 2009 ರ ಕೃತ್ಯಕ್ಕೆ ಪೂರ್ವಾನ್ವಯಿಸುವಂತಿಲ್ಲವೆಂದು ತೀರ್ಪು ನೀಡಿತ್ತು. ಈ ತೀರ್ಪು ಆಧರಿಸಿ ವಿಶೇಷ ಕೋರ್ಟ್, ಜನಾರ್ದನ ರೆಡ್ಡಿ ವಿರುದ್ಧ ದಾಖಲಾಗಿದ್ದ ಒಟ್ಟು ನಾಲ್ಕು ಬೇನಾಮಿ ಆಸ್ತಿ ಪ್ರಕರಣಗಳನ್ನು ಇತ್ಯಾರ್ಥಗೊಳಿಸಿದೆ. ಈ ಹಿನ್ನಲೆಯಲ್ಲಿ ಇದೀಗ ನಾಲ್ಕು ಪ್ರಕರಣಗಳಿಂದ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಓಬಳಾಪುರಂ ಮೈನಿಂಗ್‌ ಸೇರಿದಂತೆ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನರೆಡ್ಡಿ ಸೇರಿದಂತೆ ಹಲವರು ಅವರನ್ನು ಸಿಬಿಐ 2011ರ ಸೆ.5 ರಂದು ಬಂಧಿಸಿತ್ತು. ಬಳಿಕ ರೆಡ್ಡಿಗೆ 2015ರ ಜ.21ರಂದು ಸುಪ್ರೀಂ ಕೋರ್ಟ್‌ ಜಾಮೀನು ನೀಡಿತ್ತು. ಆದ್ರೆ, ಕೋರ್ಟ್ ಅನುಮತಿ ಇಲ್ಲದೇ ಬಳ್ಳಾರಿ ಜಿಲ್ಲೆ ಪ್ರವೇಶ ಮಾಡುವಂತಿಲ್ಲ ಎಂದು ಷರತ್ತು ವಿಧಿಸಿತ್ತು. ಆ ಷರತ್ತು ಈಗಲೂ ಮುಂದುವರಿದಿದೆ. ಏನಾದರೂ ಎಮರ್ಜೆನ್ಸಿ ಇದ್ದರೆ ರೆಡ್ಡಿ, ಸುಪ್ರೀಂ ಕೋರ್ಟ್​ ಅನುಮತಿ ಪಡೆದುಕೊಂಡು ಬಳ್ಳಾರಿ ಪ್ರವೇಶ ಮಾಡುತ್ತಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿರುವ ಜನಾರ್ದನ ರೆಡ್ಡಿಗೆ ಇದೀಗ ನಾಲ್ಕು ಕೇಸ್ ಕ್ಲೋಸ್ ಆಗಿದ್ದರಿಂದ ಅವರ ಹಾದಿ ಮತ್ತಷ್ಟು ಸುಗಮವಾದಂತಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:18 pm, Wed, 7 December 22

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ