‘ಜನಶಕ್ತಿ’ ಕಲಾಕೃತಿ ಪ್ರದರ್ಶನ: ಪ್ರಧಾನಿ ಮೋದಿ ಭೇಟಿಯಾದ ಕನ್ನಡದ ಕಲಾವಿದ ಈರಣ್ಣ ಯಾರು ಗೊತ್ತಾ?

ದೆಹಲಿಯಲ್ಲಿ ನಡೆದ ಜನಶಕ್ತಿ ಕಲಾಕೃತಿ ಪ್ರದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದ ಕಲಾವಿದ ಈರಣ್ಣ ಅವರನ್ನು ಭೇಟಿಯಾಗಿದ್ದಾರೆ. ಈ ಬಗ್ಗೆ ಈರಣ್ಣ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

‘ಜನಶಕ್ತಿ’ ಕಲಾಕೃತಿ ಪ್ರದರ್ಶನ: ಪ್ರಧಾನಿ ಮೋದಿ ಭೇಟಿಯಾದ ಕನ್ನಡದ ಕಲಾವಿದ ಈರಣ್ಣ ಯಾರು ಗೊತ್ತಾ?
ಪ್ರಧಾನಿ ಮೋದಿ ಭೇಟಿ ಬಗ್ಗೆ ಸಂತಸ ವ್ಯಕ್ತಪಡಿಸಿದ ಕನ್ನಡದ ಕಲಾವಿದ ಈರಣ್ಣ
Follow us
Rakesh Nayak Manchi
|

Updated on: May 15, 2023 | 3:03 PM

ದೆಹಲಿಯ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ (NGMA) ಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜನಶಕ್ತಿ ಕಲಾಕೃತಿಗಳನ್ನು ಪ್ರದರ್ಶಿಸಿದ (Janashakthi Artwork Exhibition) ಕೆಲವು ಕಲಾವಿದರನ್ನು ಭೇಟಿಯಾಗಿದ್ದರು. ಅವರಲ್ಲಿ ಕರ್ನಾಟಕದ ಜಿಆರ್ ಈರಣ್ಣ ಕೂಡ ಒಬ್ಬರು. ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ಈರಣ್ಣ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ನಾನು ಅದೃಷ್ಟ ಮಾಡಿದ್ದೇನೆ ಎಂದಿದ್ದಾರೆ.

ಒಬ್ಬ ಕಲಾವಿದನಿಗೆ ಪ್ರಧಾನಿಯನ್ನು ಖುದ್ದಾಗಿ ಭೇಟಿಯಾಗುವುದು ತುಂಬಾ ವಿಶೇಷದ ಸಂದರ್ಭವಾಗಿದೆ. ಕಲಾವಿದರ ಆಲೋಚನೆಗಳು ಮತ್ತು ಕಲಾವಿದರ ಅಭಿಪ್ರಾಯಗಳನ್ನು ಅರ್ಥಮಾಡಿಕೊಳ್ಳಲು ಮೋದಿ ಪ್ರಯತ್ನಿಸುತ್ತಿದ್ದಾರೆ. ನಾನು ಏನು ಮಾಡುತ್ತಿದ್ದೇನೆ ಎಂಬುದರ ಬಗ್ಗೆ ಅವರು ತುಂಬಾ ತಿಳಿದಿದ್ದರು ಮತ್ತು ಬಹಳ ಪ್ರಸ್ತುತವಾದ ಪ್ರಶ್ನೆಗಳನ್ನು ಕೇಳಿದರು ಎಂದು ಈರಣ್ಣ ಹೇಳಿದರು.

ಪ್ರಧಾನಿ ಮೋದಿ ಭೇಟಿಯಾದ ಈರಣ್ಣ ಯಾರು?

ಕರ್ನಾಟಕದ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ 1970 ರಲ್ಲಿ ಜನಿಸಿದ ಈರಣ್ಣ ಅವರು ಕರ್ನಾಟಕದ ಕಲಬುರಗಿ ಜಿಲ್ಲೆಯವರು. ಸದ್ಯ ಇವರು ತಮ್ಮ ಪತ್ನಿ ಪೂಜಾರೊಂದಿಗೆ ದೆಹಲಿಯಲ್ಲಿ ನೆಲೆಸಿದ್ದಾರೆ. ಈರಣ್ಣ ಅವರು ಲಂಡನ್‌ನ ವಿಂಬಲ್ಡನ್ ಸ್ಕೂಲ್ ಆಫ್ ಆರ್ಟ್‌ ವಿಭಾಗದಲ್ಲಿ ಪದವೀಧರರಾಗಿದ್ದಾರೆ. ಇವರು ತಮ್ಮ ಕಲಾಕೃತಿಗಳನ್ನು ನ್ಯೂಯಾರ್ಕ್, ಕ್ಯಾಲಿಫೋರ್ನಿಯಾ, ಲಂಡನ್, ಮ್ಯೂನಿಚ್ ಮತ್ತು ಭಾರತದ ನಗರಗಳಾದ ದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಬೆಂಗಳೂರಿನಲ್ಲಿ ವಿವಿಧ ಪ್ರದರ್ಶನಗಳಲ್ಲಿ ಪ್ರದರ್ಶಿಸಿದ್ದಾರೆ.

ಇದನ್ನೂ ಓದಿ: ಮನ್ ಕಿ ಬಾತ್ ವಿಷಯಗಳನ್ನು ಆಧರಿಸಿದ ‘ಜನಶಕ್ತಿ’ ಕಲಾಕೃತಿ ಪ್ರದರ್ಶನ ವೀಕ್ಷಿಸಿದ ಪ್ರಧಾನಿ ಮೋದಿ

ಈರಣ್ಣ ಅವರು ವರ್ಣಚಿತ್ರಗಳು ಮತ್ತು ಶಿಲ್ಪಕಲೆಗಳಿಗೆ ಪ್ರಸಿದ್ಧರಾಗಿದ್ದಾರೆ. ಅದರ ಮೂಲಕ ಅವರು ಸಾಮಾಜಿಕ-ರಾಜಕೀಯ ಮತ್ತು ಸಾಂಸ್ಕೃತಿಕ ಸಮಸ್ಯೆಗಳನ್ನು ವಿವಿಧ ಸಮಸ್ಯೆಗಳನ್ನು ಚಿತ್ರಿಸುತ್ತಾರೆ. ಇದರಲ್ಲಿ ನೀರಿನ ಸಂರಕ್ಷಣೆ, ಕೃಷಿ, ಯೋಗ ಮತ್ತು ಆಯುರ್ವೇದದಂತಹ ವಿಷಯಗಳು ಒಳಗೊಂಡಿವೆ. ಈ ಬಗ್ಗೆ ನರೇಂದ್ರ ಮೋದಿಯವರು ಮನ್ ಕಿ ಬಾತ್‌ನಲ್ಲಿ ಪ್ರಸ್ತಾಪಿಸಿದ್ದರು.

ಕಲಾವಿದೆ ಮಾಧವಿ ಪಾರೇಖ್, ಅತುಲ್ ದೋಡಿಯಾ, ಪದ್ಮಶ್ರೀ ಪುರಸ್ಕೃತ ಪರೇಶ್ ಮೈತಿ, ಸಮಕಾಲೀನ ಕಲಾವಿದ ಈರಣ್ಣ ಜಿಆರ್ ಮತ್ತು ಜಗನ್ನಾಥ ಪಾಂಡಾ ಸೇರಿದಂತೆ ಹಲವಾರು ಕಲಾವಿದರ ಕಲಾಕೃತಿಗಳನ್ನು ಪ್ರದರ್ಶನ ಮಾಡಲಾಯಿತು. ಪ್ರದರ್ಶನವನ್ನು ತಮ್ಮ ಸೃಜನಶೀಲತೆಯಿಂದ ಶ್ರೀಮಂತಗೊಳಿಸಿದ ಎಲ್ಲಾ ಕಲಾವಿದರನ್ನು ಮೋದಿಯವರು ಅಭಿನಂದಿಸಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ