AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janata Darshan: ಜನತಾ ದರ್ಶನದಲ್ಲಿ ಸ್ವೀಕರಿಸಿದ ಅರ್ಜಿಗಳ ಇತ್ಯರ್ಥಕ್ಕೆ ಗಡುವು ನೀಡಿದ ಸಿದ್ದರಾಮಯ್ಯ

ಜನತಾ ದರ್ಶನ ಕಾರ್ಯಕ್ರಮದಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇಡೀ ದಿನವನ್ನು ಸಾರ್ವಜನಿಕರ ಅಹವಾಲುಗಳನ್ನು ಆಲಿಸಲೆಂದೇ ಮೀಸಲಿಟ್ಟರು. ಅದರಂತೆ, ತಮ್ಮ ಬಳಿ ಬಂದ ಸಾವಿರಾರು ಜನರಿಗೆ ಸಿದ್ದರಾಮಯ್ಯ ಅವರು ಪರಿಹಾರದ ಭರವಸೆಯನ್ನು ನೀಡಿದರು. ಕೆಲವರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಿದರು. ಅಲ್ಲದೆ, ಸಾರ್ವಜನಿಕರ ಅರ್ಜಿಗಳ ಇತ್ಯರ್ಥಕ್ಕೆ ಗಡುವು ಕೂಡ ನೀಡಿದರು.

Janata Darshan: ಜನತಾ ದರ್ಶನದಲ್ಲಿ ಸ್ವೀಕರಿಸಿದ ಅರ್ಜಿಗಳ ಇತ್ಯರ್ಥಕ್ಕೆ ಗಡುವು ನೀಡಿದ ಸಿದ್ದರಾಮಯ್ಯ
ಜನತಾ ದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರಸನ್ನ ಗಾಂವ್ಕರ್​
| Edited By: |

Updated on: Nov 27, 2023 | 5:52 PM

Share

ಬೆಂಗಳೂರು, ನ.27: ಜನರ ಸಮಸ್ಯೆಗಳನ್ನು ಆಲಿಸಲೆಂದೇ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಆಯೋಜಿಸಿದ್ದ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಜನತಾ ದರ್ಶನ (Janata Darshana) ಕಾರ್ಯಕ್ರಮ ಮುಕ್ತಾಯಗೊಂಡಿದೆ. ಇಡೀ ದಿನ ನಡೆದ ಈ ಕಾರ್ಯಕ್ರಮದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು, ಇವುಗಳ ಇತ್ಯರ್ಥಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಗಡುವು ನೀಡಿದ್ದಾರೆ.

ಇಂದು ಜನತಾ ದರ್ಶನದಲ್ಲಿ 3,500 ಅರ್ಜಿಗಳು ಬಂದಿವೆ. ಇನ್ನೂ ಜನರು ಬರುತ್ತಿದ್ದಾರೆ. ಎಲ್ಲಾ ಅರ್ಜಿಗಳನ್ನು ಸ್ವೀಕರಿಸಿ ತಕ್ಷಣ ಪರಿಹಾರ ಕೊಡಬೇಕು. ಮುಂದಿನ 15 ದಿನಗಳಲ್ಲಿ ಈ ಎಲ್ಲಾ ಅರ್ಜಿಗಳ ಇತ್ಯರ್ಥ ಆಗಬೇಕು. ಮತ್ತೆ ಜನಸ್ಪಂದನ ಮಾಡಿದಾಗ ಇಷ್ಟು ಅರ್ಜಿ ಬರಬಾರದು ಎಂದರು.

ಕನಿಷ್ಠ ಮೂರು ತಿಂಗಳಿಗೊಮ್ಮೆ ಜನಸ್ಪಂದನ ಕಾರ್ಯಕ್ರಮ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು. ಜನರ ಎಲ್ಲಾ ಅಹವಾಲುಗಳಿಗೂ ಅಧಿಕಾರಿಗಳು ಸ್ಪಂದಿಸಬೇಕು. ಒಂದು ವಾರದೊಳಗಾಗಿ ಉತ್ತರ ನೀಡಬೇಕು. ಜನರ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ: ಪುತ್ರನ ಹೆಸರಿನ ಟ್ರಸ್ಟ್​ಗೆ ನಿವೇಶನ ಮಂಜೂರು ಮಾಡುವಂತೆ ಗದಗ ಜಿಲ್ಲಾಧಿಕಾರಿಗೆ ಸಿದ್ದರಾಮಯ್ಯ ತಾಕೀತು

ಇದು ಜನತಾದರ್ಶನ ಅಲ್ಲ, ಜನಸ್ಪಂದನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ನಂತರ ಮಾತನಾಡಿದ ಅವರು, ಜನತಾ ದರ್ಶನ ಬೇರೆ, ಜನಸ್ಪಂದನ ಬೇರೆ. ಅನೇಕ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸಾಧ್ಯವಾಗುತ್ತದೆ. ಕೆಲವು ಸಮಸ್ಯೆಗಳನ್ನು ಕೂಡಲೇ ಬಗೆಹರಿಸಲು ಆಗುವುದಿಲ್ಲ. ಕಾನೂನಿನ ಅವಕಾಶ ನೋಡಿಕೊಂಡು ಬಗೆಹರಿಸಬೇಕಾಗುತ್ತದೆ ಎಂದರು.

ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಬೇಕು. ಸಮಸ್ಯೆ ಬಗೆಹರಿಸದೆ ಇದ್ದರೆ ದೊಡ್ಡದಾಗುತ್ತಲೇ ಹೋಗುತ್ತದೆ. ಬಹುತೇಕ ಸಮಸ್ಯೆಗಳು ಕಂದಾಯ ಇಲಾಖೆಗೆ ಸಂಬಂಧಿಸಿದ್ದಾಗಿದೆ. ಅನೇಕ ಜನರು ಕೆಲಸ ಕೊಡಿಸಿ ಅಂತಾ ಕೇಳಿದ್ದಾರೆ. ವಿಕಲಚೇತನರಿಗೆ 4 ಸಾವಿರ ತ್ರಿಚಕ್ರ ವಾಹನ ನೀಡಲು ಸೂಚಿಸಿದ್ದೇನೆ ಎಂದರು.

ವಿಶೇಷವಾಗಿ ತಹಶೀಲ್ದಾರರು, ಜಿಲ್ಲಾಧಿಕಾರಿಗಳು ಅಲ್ಲೇ ಪಹಣಿ ಮಾಡಬೇಕು. ಪೋಡಿ, ಪಹಣಿ, ಖಾತೆಗಾಗಿ ಜನರು ನನ್ನ ಹತ್ತಿರ ಬರಬೇಕಾ? ತಹಶೀಲ್ದಾರ್​ ಕಚೇರಿಗೆ ಡಿಸಿಗಳು ಸರ್​ಪ್ರೈಸ್ ವಿಸಿಟ್ ಮಾಡಬೇಕು. ಪೊಲೀಸ್​ ಠಾಣೆಗಳಿಗೆ ಎಸ್​ಪಿ ಭೇಟಿ ನೀಡಬೇಕು. ಅಧಿಕಾರಿಗಳು ಜನರ ಸಮಸ್ಯೆಗೆ ಪರಿಹಾರ ಕೊಟ್ಟು ಸ್ಪಂದಿಸಬೇಕು ಎಂದರು.

ಇದನ್ನೂ ಓದಿ: Siddaramaiah: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿಗೆ ಸ್ಥಳದಲ್ಲೇ 1 ಲಕ್ಷ ಪರಿಹಾರ ಘೋಷಿಸಿದ ಸಿದ್ದರಾಮಯ್ಯ

ಸಣ್ಣಪುಟ್ಟ ಸಮಸ್ಯೆಗಳಿಗೆ ಜನರು ಬೆಂಗಳೂರಿಗೆ ಖರ್ಚು ಮಾಡಿಕೊಂಡು ಅಲೆದಾಡಬೇಕಿಲ್ಲ. ಜನರನ್ನು ಅಲೆದಾಡಿಸಿದರೆ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ. ಕೂಡಲೇ ಅಧಿಕಾರಿಗಳು ಜನರ ಸಮಸ್ಯೆಗೆ ಪರಿಹಾರ ಕೊಟ್ಟು ಸ್ಪಂದಿಸಬೇಕು. ಕಾನೂನು ರೀತಿ ಇಲ್ಲದಿದ್ದರೆ ಅದನ್ನೂ ಜನರಿಗೆ ಎಂಡಾರ್ಸಮೆಂಟ್ ಮಾಡಿ ಕಳಿಸಿ ಎಂದರು.

ಜನರ ಕೆಲಸ ಮಾಡಲಿ ಅಂತಾನೇ ನಮಗೆ ಸಂಬಳ ಕೊಡುವುದು. ಜನರ ತೆರಿಗೆ ಹಣದಿಂದಲೇ ನಾವೆಲ್ಲ ಸಂಬಳ ತೆಗೆದುಕೊಳ್ಳುವುದು. ಸೂಚ್ಯವಾಗಿ ಎಲ್ಲಾ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ. ಲಘುವಾಗಿ ತೆಗೆದುಕೊಳ್ಳುವ ಕೆಲಸ ಮಾಡಬೇಡಿ ಎಂದು ಅಧಿಕಾರಿಗಳನ್ನು ಎಚ್ಚರಿಸಿದರು.

ಹೆಣ್ಣು ಭ್ರೂಣ ಹತ್ಯೆ: ಆರೋಪಿಗಳ ವಿರುದ್ಧ ಕಠಿಣ ಕ್ರಮ

ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ನಾನೇ ಅಧಿಕಾರಿಗಳ ಸಭೆ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದರು. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಗಳಲ್ಲಿ ಹಲವು ಸಚಿವರು ಜನತಾ ದರ್ಶನ ಮಾಡುತ್ತಿಲ್ಲ ಎಂಬ ಆರೋಪವನ್ನು ನಿರಾಕರಿಸಿದ ಸಿದ್ದರಾಮಯ್ಯ, ಎಲ್ಲ ಸಚಿವರೂ ಜಿಲ್ಲಾ ಜನತಾ ದರ್ಶನ ಮಾಡುತ್ತಿದ್ದಾರೆ. ಆದರೆ ಅವರು ಇನ್ನೂ ನನಗೆ ವರದಿ ಕೊಟ್ಟಿಲ್ಲ. ಯಾವ ಸಚಿವರು ಜನತಾ ದರ್ಶನ ಮಾಡುತ್ತಿಲ್ಲ ಅಂತ ಗೊತ್ತಾ ನಿಮಗೆ ಎಂದು ಕೇಳಿದರು.

ಕೇಂದ್ರದಿಂದ ಬರ ಪರಿಹಾರ ಬಿಡುಗಡೆಯಾಗಿಲ್ಲ

ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಿಡುಗಡೆಯಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಕೇಂದ್ರದಿಂದ ಪರಿಹಾರ ಬಂದಿಲ್ಲ. ಎನ್‌ಡಿಆರ್‌ಎಫ್ ಹಣ ಯಾರದ್ದು? ಅದು ನಮ್ಮದು. ನಮ್ಮ ಹಣ ಯಾಕೆ ಕೊಡುತ್ತಿಲ್ಲ. ನಾಲ್ಕು ಲಕ್ಷ ಕೋಟಿ ನಮ್ಮ ರಾಜ್ಯದಿಂದ ಕೇಂದ್ರಕ್ಕೆ ತೆರಿಗೆ ಹಣ ಹೋಗುತ್ತಿದೆ. ಆದರೆ ನಮಗೆ 50-60 ಸಾವಿರ ಕೋಟಿ ಅಷ್ಟೇ ಬರುತ್ತಿದೆ. ನಮ್ಮ ಪಾಲಿನ ಹಣ ನಮಗೆ ಕೊಡುವಲ್ಲಿ ಕೇಂದ್ರ ನಿರ್ಲಕ್ಷ್ಯ ಮಾಡುತ್ತಿದೆ ಎಂದರು.

ಇದನ್ನೂ ಓದಿ: ಜನತಾ ದರ್ಶನ: ಸಿದ್ದರಾಮಯ್ಯನವರೇ ಈ 9 ಪ್ರಶ್ನೆಗಳಲ್ಲಿ ಒಂದಕ್ಕಾದರೂ ಉತ್ತರಿಸಿ: ಬಿಜೆಪಿ ಟ್ವೀಟ್​

ನೂಕುನುಗ್ಗಲು, ಪೊಲೀಸರ ವಿರುದ್ಧ ಸಿಎಂ ಗರಂ

ಜನರ ಬಳಿ ಅಹವಾಲು ಸ್ವೀಕರಿಸಲು ಸಿಎಂ ಸಿದ್ದರಾಮಯ್ಯ ಮುಂದಾದಾಗ ಸಾರ್ವಜನಿಕರು ಪತ್ರಗಳನ್ನ ಹಿಡಿದು ಒಟ್ಟಿಗೆ ನುಗ್ಗಿದ ಪರಿಣಾಮ ಸ್ಥಳದಲ್ಲಿ ನೂಕುನುಗ್ಗಲು ಉಂಟಾಯಿತು. ಇದರಿಂದ ಆಕ್ರೋಶಗೊಂಡ ಸಿದ್ದರಾಮಯ್ಯ, ಹೇಯ್ ಪೊಲೀಸ್​ನವರು ಏನ್ ಮಾಡುತ್ತಿದ್ದೀರಿ ಅಂತ ಗರಂ ಆದರು. ಕೂಡಲೇ ಪೊಲೀಸರು ಸಿದ್ದರಾಮಯ್ಯ ಅವರು ಜನರ ಬಳಿ ತೆರಳಲು ದಾರಿ ಮಾಡಿಕೊಟ್ಟರು.

ಜನತಾ ದರ್ಶನದ ವೇಳೆ ಕಣ್ಣೀರಿಟ್ಟ ಮಹಿಳೆ

ದೈಹಿಕ ಶಿಕ್ಷಕ ಹುದ್ದೆಯ ಆಕಾಂಕ್ಷಿಯಾಗಿರುವ ಗದಗ ಜಿಲ್ಲೆಯ ಭೂಮಿಕಾ ಎಂಬವರು ನೇಮಕಾತಿ ಕೋರಿ ಸಿದ್ದರಾಮಯ್ಯ ಅವರಿಗೆ ಮನವಿಪತ್ರ ಸಲ್ಲಿಸಲು ಬೆಳಗ್ಗೆ 10 ಗಂಟೆಗೆ ಜನತಾ ದರ್ಶನ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಆದರೆ, ಸಿಎಂ ಅರ್ಜಿ ಸ್ವೀಕಾರ ಮಾಡಿಲ್ಲ ಎಂದು ದುಃಖಿತರಾದ ಭೂಮಿಕಾ ಟಿವಿ9 ಜೊತೆ ಅಳಲು ತೋಡಿಕೊಂಡು ಕಣ್ಣೀರು ಹಾಕಿದರು. ಕಳೆದ 17 ವರ್ಷಗಳಿಂದ ನೇಮಕಾತಿಯೇ ಆಗಿಲ್ಲ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?