AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರನ ಹೆಸರಿನ ಟ್ರಸ್ಟ್​ಗೆ ನಿವೇಶನ ಮಂಜೂರು ಮಾಡುವಂತೆ ಗದಗ ಜಿಲ್ಲಾಧಿಕಾರಿಗೆ ಸಿದ್ದರಾಮಯ್ಯ ತಾಕೀತು

CM Siddaramaiah Janata Darshan: ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಸೋಮವಾರ ಜನತಾ ದರ್ನಶ ನಡೆಸಿದ ಸಿಎಂ ಸಿದ್ದರಾಮಯ್ಯ, ತಮ್ಮ ಪುತ್ರ ರಾಕೇಶ್ ಸಿದ್ದರಾಮಯ್ಯ ಹೆಸರಿನ ಟ್ರಸ್ಟ್​ಗೆ ನಿವೇಶನ ಮಂಜೂರು ಮಾಡುವಂತೆ ಗದಗ ಜಿಲ್ಲಾಧಿಕಾರಿಗೆ ತಾಕೀತು ಮಾಡಿದ್ದಾರೆ.

ಪುತ್ರನ ಹೆಸರಿನ ಟ್ರಸ್ಟ್​ಗೆ ನಿವೇಶನ ಮಂಜೂರು ಮಾಡುವಂತೆ ಗದಗ ಜಿಲ್ಲಾಧಿಕಾರಿಗೆ ಸಿದ್ದರಾಮಯ್ಯ ತಾಕೀತು
ಸಿದ್ದರಾಮಯ್ಯ ಜನತಾ ದರ್ಶನ
ಪ್ರಸನ್ನ ಗಾಂವ್ಕರ್​
| Updated By: Ganapathi Sharma|

Updated on: Nov 27, 2023 | 3:57 PM

Share

ಬೆಂಗಳೂರು, ನವೆಂಬರ್ 27: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸೋಮವಾರ ಬೆಳಿಗ್ಗೆಯಿಂದ ಜನತಾ ದರ್ಶನ (Janata Darshan) ನಡೆಸುತ್ತಿದ್ದು, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಕೆಲವಕ್ಕೆ ಸ್ಥಳದಲ್ಲೇ ಪರಿಹಾರ ಸೂಚಿಸುತ್ತಿದ್ದಾರೆ. ಇದೇ ವೇಳೆ, ತಮ್ಮ ಪುತ್ರ ರಾಕೇಶ್ ಸಿದ್ದರಾಮಯ್ಯ (Rakesh Siddaramaiah) ಹೆಸರಿನ ಟ್ರಸ್ಟ್​ಗೆ ನಿವೇಶನ ಮಂಜೂರು ಮಾಡಿಸಿದ್ದಾರೆ. ನಿವೇಶನ ವಿಚಾರವಾಗಿ ಟ್ರಸ್ಟ್​​ ಮುಖ್ಯಸ್ಥ ರಾಮಕೃಷ್ಣ ರೊಳ್ಳಿ ಸಿಎಂಗೆ ಅಹವಾಲು ಸಲ್ಲಿಸಿದ್ದರು.

ಗದಗ ನಗರದಲ್ಲಿ ರಾಕೇಶ್​ ಸಿದ್ದರಾಮಯ್ಯ ಹೆಸರಿನಲ್ಲಿ ಟ್ರಸ್ಟ್​ ಟ್ರಸ್ಟ್​​​ಗೆ 22 ಗುಂಟೆ ಜಮೀನು ಮಂಜೂರಾತಿಗೆ ಕೋರಿ ಈ ಹಿಂದೆ ಡಿಸಿಗೆ ಪತ್ರ ಬರೆಯಲಾಗಿತ್ತು. ಆದರೆ, ಈ ಭೂಮಿಯನ್ನು ಕಿತ್ತೂರು ಚನ್ನಮ್ಮ ಸಮುದಾಯ ಭವನಕ್ಕೆ ನೀಡಬೇಕೆಂದು ಸಚಿವ ಹೆಚ್​​.ಕೆ.ಪಾಟೀಲ್​​ ಗದಗ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದರು. ಈ ವಿಚಾರವಾಗಿ ಜನತಾ ದರ್ಶನದಲ್ಲಿ ಸಿಎಂ ಸಿದ್ದರಾಮಯ್ಯಗೆ ರಾಮಕೃಷ್ಣ ರೊಳ್ಳಿ ದೂರು ಸಲ್ಲಿಕೆ ಮಾಡಿದ್ದಾರೆ.

ದೂರು ಸಲ್ಲಿಕೆಯಾದ ಕೂಡಲೇ ಗದಗ ಜಿಲ್ಲಾಧಿಕಾರಿಗೆ ಕರೆ ಮಾಡಿ ಮಾತನಾಡಿದ ಸಿಎಂ, ಭೂಮಿಯನ್ನು ರಾಕೇಶ್​ ಟ್ರಸ್ಟ್​ಗೆ ನೀಡುವಂತೆ ಸಿಎಂ ತಾಕೀತು ಮಾಡಿದ್ದಾರೆ.

ದೇಗುಲದಲ್ಲಿ ಪೂಜೆ ಮಾಡಲು ಕುರುಬರಿಗೆ ಅವಕಾಶ ಕೊಡಿ: ಸಿದ್ದರಾಮಯ್ಯಗೆ ಮನವಿ

ದೇಗುಲದಲ್ಲಿ ಕುರುಬರಿಗೆ ಪೂಜೆ ಮಾಡಲು ಅವಕಾಶ ಕೊಡಿಸಲು ಜನತಾ ದರ್ಶನದ ವೇಳೆ ಮನವಿ ಸಲ್ಲಿಸಲಾಯಿತು. ಕಲಬುರಗಿ ತಾಲೂಕಿನ ಮೇಳಕುಂದಾ ಗ್ರಾಮದಲ್ಲಿರುವ ಮಾಳಿಂಗರಾಯ ದೇವಸ್ಥಾನ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಹಾದೇವಪ್ಪ ಮಹಾದೇವಪ್ಪ ಅವರು ಸಿಎಂಗೆ ಮನವಿ ಸಲ್ಲಿಸಿದರು.

ದೇಗುಲದಲ್ಲಿ ತಲೆ ತಲಾಂತರದಿಂದ ಕುರುಬ ಸಮುದಾಯದವರು ಪೂಜೆ ಮಾಡುತ್ತಿದ್ದರು. ಇತ್ತೀಚೆಗೆ ಪೂಜಾರಿಗಳ ಮೇಲೆ ಅನ್ಯ ಸಮುದಾಯದವರು ಹಲ್ಲೆ ನಡೆಸಿದ್ದಾರೆ. ಮೊದಲಿನಂತೆ ಪೂಜೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಅವರು ಮನವಿ ಸಲ್ಲಿಸಿದರು.

ಇದನ್ನೂ ಓದಿ: ಸಿಎಂ ಮುಂದೆ ಸಮಸ್ಯೆಗಳ ಮಹಾಪುರ; ಜನತಾ ದರ್ಶನ ವೇಳೆ ಸಿಎಂ ಬಳಿ ಸಮಸ್ಯೆ ಹೇಳಿಕೊಂಡ ಜನರಿಗೆ ಕೂತಲ್ಲೆ ಪರಿಹಾರ

ಮನವಿ ಸಂಬಂಧ ಪರಿಶೀಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಕಚೇರಿಯಿಂದ ಕಲಬುರಗಿ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ