ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಕನಿಷ್ಠ ತಾಪಮಾನ, ದಟ್ಟ ಮಂಜು ಆವರಿಸುವ ಸಾಧ್ಯತೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಿದ್ದು, ಮಂಜು ದಟ್ಟವಾಗಿದೆ. ಬೆಳಗ್ಗೆ ಮತ್ತು ಸಂಜೆ ತೀವ್ರ ಚಳಿಯಿಂದ ಜನರು ಮನೆಯಿಂದ ಹೊರಗೆ ಬರುತ್ತಿಲ್ಲ. ಹವಾಮಾನ ಇಲಾಖೆಯ ಪ್ರಕಾರ, ಮುಂದಿನ ದಿನಗಳಲ್ಲಿ ಚಳಿ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಕನಿಷ್ಠ ತಾಪಮಾನ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಕನಿಷ್ಠ ತಾಪಮಾನ, ದಟ್ಟ ಮಂಜು ಆವರಿಸುವ ಸಾಧ್ಯತೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Jan 03, 2025 | 7:32 AM

ಕರ್ನಾಟಕದ (Karnataka Weather Updates) ಬಹುತೇಕ ಜಿಲ್ಲೆಗಳಲ್ಲಿ ಮುಂಜಾನೆ ಮತ್ತು ಸಂಜೆ ಚಳಿ ಹೆಚ್ಚಾಗಿದೆ. ಕೆಲವು ಜಿಲ್ಲೆಗಳಲ್ಲಿ ಮಂಜಿನಿಂದ ಕೂಡಿದ ವಾತಾವರಣ ಇದೆ. ಬೆಳ್ಳಂ ಬೆಳಗ್ಗೆ ಜನರು ಯಾವುದೇ ಕೆಲಸ-ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಜನರು ಮನೆಯಿಂದ ಹೊರಬಾರದಂತಹ ಸ್ಥಿತಿ ನಿರ್ಮಾಣವಾಗಿದೆ. ಮುಂದಿನ ಹಲವು ದಿನಗಳವರೆಗೂ ಇದೇ ವಾತಾವರಣ ಇರಲಿದ್ದು, ಮಂಜಿನಿಂದ ಕೂಡಿದ ವಾತಾವರಣ ಕೂಡಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಂಗಳವಾರ (ಜ.07) ತಾರೀಕಿನವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಶನಿವಾರ (ಜ.04)ರವರೆಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು ಅಥವಾ ದಟ್ಟ ಮಂಜು ಇರುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳವರೆಗೆ ಕನಿಷ್ಠ ತಾಪಮಾನವು 2 ಡಿಗ್ರಿ ಸೆಲ್ಸಿಯಸ್​​ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ರವಿವಾರದವರೆಗೆ (ಜ.5) ಮಂಜು ಅಥವಾ ದಟ್ಟ ಂಜು ಇರುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳವರಗೆ ಕನಿಷ್ಠ ತಾಪಮಾನವು 2 ಡಿಗ್ರಿ ಸೆಲ್ಸಿಯಸ್​ ಕಡಿಮೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ. ಮೈಸೂರಿನಲ್ಲಿ ಗರಿಷ್ಠ ತಾಪಮಾನ 28 ಮತ್ತು ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್​, ಮಂಗಳೂರಿನಲ್ಲಿ ಗರಿಷ್ಠ 32 ಮತ್ತು ಕನಿಷ್ಠ 22, ಶಿವಮೊಗ್ಗದಲ್ಲಿ ಗರಿಷ್ಠ 28 ಮತ್ತು ಕನಿಷ್ಠ 14, ಬೆಳಗಾವಿಯಲ್ಲಿ ಗರಿಷ್ಠ 28 ಮತ್ತು ಕನಿಷ್ಠ 16, ಕೋಲಾರದಲ್ಲಿ ಗರಿಷ್ಠ 24 ಮತ್ತು ಕನಿಷ್ಠ 13, ತುಮಕೂರಿನಲ್ಲಿ ಗರಿಷ್ಠ 26 ಮತ್ತು ಕನಿಷ್ಠ 13 ಡಿಗ್ರಿ ಸೆಲ್ಸಿಯಸ್ ತಾಪಮಾನ​ ದಾಖಲಾಗಿದೆ.

ಉಡುಪಿಯಲ್ಲಿ ಗರಿಷ್ಠ 31 ಮತ್ತು ಕನಿಷ್ಠ 20, ಉತ್ತರ ಕನ್ನಡದಲ್ಲಿ ಗರಿಷ್ಠ 33 ಮತ್ತು ಕನಿಷ್ಠ 22, ಚಿಕ್ಕಮಗಳೂರಿನಲ್ಲಿ ಗರಿಷ್ಠ 25 ಮತ್ತು ಕನಿಷ್ಠ 12, ಹುಬ್ಬಳ್ಳಿಯಲ್ಲಿ ಗರಿಷ್ಠ 29 ಮತ್ತು ಕನಿಷ್ಠ 15 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ.

ಯಾದಗಿರಿ, ಕೊಪ್ಪಳ, ರಾಯಚೂರು, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಚಳಿಯ ವಾತಾವರಣವಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:31 am, Fri, 3 January 25

Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ