ಕರ್ನಾಟಕದ (Karnataka Weather Updates) ಬಹುತೇಕ ಜಿಲ್ಲೆಗಳಲ್ಲಿ ಮುಂಜಾನೆ ಮತ್ತು ಸಂಜೆ ಚಳಿ ಹೆಚ್ಚಾಗಿದೆ. ಕೆಲವು ಜಿಲ್ಲೆಗಳಲ್ಲಿ ಮಂಜಿನಿಂದ ಕೂಡಿದ ವಾತಾವರಣ ಇದೆ. ಬೆಳ್ಳಂ ಬೆಳಗ್ಗೆ ಜನರು ಯಾವುದೇ ಕೆಲಸ-ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಜನರು ಮನೆಯಿಂದ ಹೊರಬಾರದಂತಹ ಸ್ಥಿತಿ ನಿರ್ಮಾಣವಾಗಿದೆ. ಮುಂದಿನ ಹಲವು ದಿನಗಳವರೆಗೂ ಇದೇ ವಾತಾವರಣ ಇರಲಿದ್ದು, ಮಂಜಿನಿಂದ ಕೂಡಿದ ವಾತಾವರಣ ಕೂಡಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳವಾರ (ಜ.07) ತಾರೀಕಿನವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಶನಿವಾರ (ಜ.04)ರವರೆಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು ಅಥವಾ ದಟ್ಟ ಮಂಜು ಇರುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳವರೆಗೆ ಕನಿಷ್ಠ ತಾಪಮಾನವು 2 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ರವಿವಾರದವರೆಗೆ (ಜ.5) ಮಂಜು ಅಥವಾ ದಟ್ಟ ಂಜು ಇರುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳವರಗೆ ಕನಿಷ್ಠ ತಾಪಮಾನವು 2 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮೈಸೂರಿನಲ್ಲಿ ಗರಿಷ್ಠ ತಾಪಮಾನ 28 ಮತ್ತು ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್, ಮಂಗಳೂರಿನಲ್ಲಿ ಗರಿಷ್ಠ 32 ಮತ್ತು ಕನಿಷ್ಠ 22, ಶಿವಮೊಗ್ಗದಲ್ಲಿ ಗರಿಷ್ಠ 28 ಮತ್ತು ಕನಿಷ್ಠ 14, ಬೆಳಗಾವಿಯಲ್ಲಿ ಗರಿಷ್ಠ 28 ಮತ್ತು ಕನಿಷ್ಠ 16, ಕೋಲಾರದಲ್ಲಿ ಗರಿಷ್ಠ 24 ಮತ್ತು ಕನಿಷ್ಠ 13, ತುಮಕೂರಿನಲ್ಲಿ ಗರಿಷ್ಠ 26 ಮತ್ತು ಕನಿಷ್ಠ 13 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಉಡುಪಿಯಲ್ಲಿ ಗರಿಷ್ಠ 31 ಮತ್ತು ಕನಿಷ್ಠ 20, ಉತ್ತರ ಕನ್ನಡದಲ್ಲಿ ಗರಿಷ್ಠ 33 ಮತ್ತು ಕನಿಷ್ಠ 22, ಚಿಕ್ಕಮಗಳೂರಿನಲ್ಲಿ ಗರಿಷ್ಠ 25 ಮತ್ತು ಕನಿಷ್ಠ 12, ಹುಬ್ಬಳ್ಳಿಯಲ್ಲಿ ಗರಿಷ್ಠ 29 ಮತ್ತು ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಯಾದಗಿರಿ, ಕೊಪ್ಪಳ, ರಾಯಚೂರು, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಚಳಿಯ ವಾತಾವರಣವಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:31 am, Fri, 3 January 25