ರಾಯಚೂರು: ಚಿಕನ್ ಊಟ ಸೇವಿಸಿ ಜವಾಹರ್ ನವೋದಯ ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಚಿಕನ್ ಊಟ ಸೇವಿಸಿ ನವೋದಯ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಆಂಧ್ರದ ಪಶ್ಚಿಮ ಗೋದಾವರಿ ಜಿಲ್ಲೆಯ ಪೆದವೇಗಿಯಲ್ಲಿ ನಡೆದಿದೆ.

ರಾಯಚೂರು: ಚಿಕನ್ ಊಟ ಸೇವಿಸಿ ಜವಾಹರ್ ನವೋದಯ ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ರಾಯಚೂರು: ಚಿಕನ್ ಊಟ ಸೇವಿಸಿ ನವೋದಯ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
Follow us
ಭೀಮೇಶ್​​ ಪೂಜಾರ್
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 06, 2023 | 12:33 PM

ರಾಯಚೂರು, ಆ.6: ಚಿಕನ್ ಊಟ ಸೇವಿಸಿ ಜವಾಹರ್ ನವೋದಯ ಶಾಲೆಯ (Jawahar Navodaya Vidyalaya) ವಿದ್ಯಾರ್ಥಿಗಳು(Students) ಅಸ್ವಸ್ಥರಾದ ಘಟನೆ ಆಂಧ್ರದ ಪಶ್ಚಿಮ ಗೋದಾವರಿ ಜಿಲ್ಲೆಯ ಪೆದವೇಗಿಯಲ್ಲಿ ನಡೆದಿದೆ. ಶಾಲಾ ವತಿಯಿಂದ ಕ್ರಿಕೆಟ್ ಪಂದ್ಯವಾಡಲು ರಾಯಚೂರು, ಕೊಪ್ಪಳ, ಬೆಳಗಾವಿ, ವಿಜಯಪುರ, ಬೆಂಗಳೂರು ಕೊಡಗು ಸೇರಿ ವಿವಿಧ ಜಿಲ್ಲೆಯ ಮಕ್ಕಳು ಪೆದವೇಗಿಗೆ ತೆರಳಿದ್ದರು. ನಿನ್ನೆ(ಆ.5) ರಾತ್ರಿ ಊಟ ಸೇವಿಸಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ವಿದ್ಯಾರ್ಥಿಗಳಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕ್ರಿಕೆಟ್​ ಆಡಲು ಆಂಧ್ರಕ್ಕೆ ತೆರಳಿದ್ದ ವಿದ್ಯಾರ್ಥಿಗಳು

ಆಂಧ್ರದ ವೆಸ್ಟ್ ಗೋದಾವರಿ ಜಿಲ್ಲೆಯ ಪೆದವೇಗಿಯಲ್ಲಿ ಆಯೋಜಿಸಲಾಗಿದ್ದ ಅಂಡರ್​-14, 17, 19 ಮಾದರಿಯ ಕ್ರಿಕೆಟ್ ಪಂದ್ಯಾವಳಿಗೆ ವಿದ್ಯಾರ್ಥಿಗಳು ಹೋಗಿದ್ದರು. ಇದೇ ಅಲ್ಲಿನ ಸಿಬ್ಬಂದಿ ಶನಿವಾರ ರಾತ್ರಿ ಎಲ್ಲಾ ವಿದ್ಯಾರ್ಥಿಗಳಿಗೆ ಚಿಕನ್ ಊಟ ನೀಡಿದ್ದರು. ಚಿಕನ್‌ ಸೇವಿಸಿದ ಬಳಿಕ ಫುಡ್ ಪಾಯ್ಸನ್ ಆಗಿ ರಾಜ್ಯದ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿ ಒಟ್ಟು‌ 80 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.

ಇದನ್ನೂ ಓದಿ:Chamarajanagar News: ಚಾಮರಾಜನಗರ ಗರಗನಹಳ್ಳಿಯ ಶಾಲೆಯಲ್ಲಿ ಊಟ ಸೇವಿಸಿದ ಬಳಿಕ 7 ಮಕ್ಕಳು ಅಸ್ವಸ್ಥ

ದೇವಸ್ಥಾನದ ಬೀಗ ಮುರಿದು ಹುಂಡಿ ಕದ್ದ ಕಳ್ಳರು

ದಾವಣಗೆರೆ: ಜಗಳೂರಿನಲ್ಲಿ ಮತ್ತೆ ಕಳ್ಳರ ಕೈಚಳಕ ಹೆಚ್ಚಾಗಿದೆ. ದೇವಸ್ಥಾನದ ಬೀಗ ಮುರಿದು ಹುಂಡಿ ಕಳ್ಳತನ ಮಾಡಿದ ಘಟನೆ ನಡೆದಿದೆ. ಹೌದು, ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ಅಂಬೇಡ್ಕರ ಸರ್ಕಲ್ ಬಳಿಯ ಗಣೇಶ್ ದೇವಸ್ಥಾನದಲ್ಲಿ. ನಿನ್ನೆ(ಆ.5) ಸಂಜೆ ಪೂಜೆ ಮುಗಿಸಿ ದೇವಸ್ಥಾನಕ್ಕೆ ಬೀಗ ಹಾಕಿ ಹೋಗಿದ್ದರು. ಬೆಳಿಗ್ಗೆ ಬರುತ್ತಿದ್ದಂತೆ ಬೀಗ ಒಡೆದು ಹಾಕಲಾಗಿದ್ದು, ಜೊತೆಗೆ ಹುಂಡಿ ಕೂಡ ಕಳ್ಳತನವಾಗಿತ್ತು. ಸ್ಥಳಕ್ಕೆ ಜಗಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ನಿರಂತರವಾಗಿ ನಡೆದ ದೇವಸ್ಥಾನದ ಹುಂಡಿ ಕಳ್ಳತನಕ್ಕೆ ಸೂಕ್ತ ಕ್ರಮ‌ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:22 pm, Sun, 6 August 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ