ಪಂಚಮಸಾಲಿ ಮೀಸಲಾತಿ ಸಭೆ ವಿಫಲ: ಸುವರ್ಣ ಸೌಧ ಮುತ್ತಿಗೆ, ಟ್ರ್ಯಾಕ್ಟರ್ ರ್ಯಾಲಿಗೆ ಕರೆ ಕೊಟ್ಟ ಸ್ವಾಮೀಜಿ

| Updated By: ರಮೇಶ್ ಬಿ. ಜವಳಗೇರಾ

Updated on: Oct 18, 2024 | 5:28 PM

2ಎ ಮೀಸಲಾತಿ ಸಂಬಂಧ ಪಂಚಮಸಾಲಿ ಲಿಂಗಾಯತ ನಿಯೋಗ ಸಿಎಂ ಸಿದ್ದರಾಮಯ್ಯನೊಂದಿಗೆ ನಡೆಸಿದ ಸಭೆ ವಿಫಲವಾಗಿದೆ. ಈಗಲೇ ಏನು ತೀರ್ಮಾನ ಕೈಗೊಳ್ಳಲಾಗುವುದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಲಿಂಗಾಯತ ಮತ್ತೆ ಹೋರಾಟಕ್ಕೆ ರಣಕಹಳೆ ಊದಿದೆ.

ಪಂಚಮಸಾಲಿ ಮೀಸಲಾತಿ ಸಭೆ ವಿಫಲ: ಸುವರ್ಣ ಸೌಧ ಮುತ್ತಿಗೆ, ಟ್ರ್ಯಾಕ್ಟರ್ ರ್ಯಾಲಿಗೆ ಕರೆ ಕೊಟ್ಟ ಸ್ವಾಮೀಜಿ
ಜಯ ಮೃತ್ಯುಂಜಯ ಸ್ವಾಮೀಜಿ, ಮುಖ್ಯಮಂತ್ರಿ ಸಿದ್ದರಾಮಯ್ಯ
Follow us on

ಬೆಂಗಳೂರು, (ಅಕ್ಟೋಬರ್ 18): ಪಂಚಮಸಾಲಿ ಲಿಂಗಾಯತ 2ಎ ಮೀಸಲಾತಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು (ಅಕ್ಟೋಬರ್ 18) ಸಭೆ ನಡೆಸಿದರು. ಸಭೆಯಲ್ಲಿ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯಶ್ರೀ ಸೇರಿದಂತೆ ಸಮುದಾಯದ ಘಟನಾನುಘಟಿ ನಾಯಕರು ಭಾಗಿಯಾಗಿದ್ದರು. ಆದ್ರೆ, ಸಿಎಂ ಸಿದ್ದರಾಮಯ್ಯನವರು ಈಗಲೇ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರಿಂದ ಪಂಚಮಸಾಲಿ ಮೀಸಲು ಹೋರಾಟ ಸಮಿತಿ ಅಸಮಾಧನಗೊಂಡಿದ್ದು, ಡಿಸೆಂಬರ್ 9ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಗೂ ಟ್ರಾಕ್ಟರ್ ರ್ಯಾಲಿ ನಡೆಸಲು ತೀರ್ಮಾನಿಸಿದೆ.

ಸಿಎಂ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಬಸವ ಜಯಮೃತ್ಯುಂಜಯ ಶ್ರೀ, ಚಳಿಗಾಲದ ಅಧಿವೇಶನಕ್ಕೂ ಮುನ್ನ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೇ ಡಿಸೆಂಬರ್ 9ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಗೂ ಟ್ರಾಕ್ಟರ್ ರ್ಯಾಲಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಪಂಚಮಸಾಲಿ ಮೀಸಲಾತಿ ಬೇಡಿಕೆ: ತಮ್ಮ ಸರ್ಕಾರದ ನಿಲುವು ಸ್ಪಷ್ಟಪಡಿಸಿದ ಸಿಎಂ

ಪ್ರತಿಭಟನೆಗೆ ಮುನ್ನವೇ ಮುನ್ನವೇ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು. ಇಲ್ಲದಿದ್ರೆ ನಮ್ಮ ಹೋರಾಟ ಮುಂದುವರಿಯಲಿದೆ. ಸುವರ್ಣಸೌಧ ಗೇಟ್ ಮುಂದೆ ನಮ್ಮ ಟ್ರ್ಯಾಕ್ಟರ್ ನಿಲ್ಲಲಿವೆ. ಎಲ್ಲ ಲಿಂಗಾಯತ ಸಮುದಾಯವೂ ಹೋರಾಟ ಮಾಡುತ್ತೆ ಎಂದು ಸ್ಪಷ್ಟಪಡಿಸಿದರು.

ನಮ್ಮ ಯಾವುದೇ ಬೇಡಿಕೆಗೆ ಸಮಯ ನಿಗದಿ ಮಾಡಿಲ್ಲ. ಬೇಡಿಕೆಗೆ ಯಾವುದೇ ಸಕಾರಾತ್ಮಕ ವಾಗಿ ಉತ್ತರ ನೀಡಿಲ್ಲ. ಚರ್ಚೆ ಚೆನ್ನಾಗಿಯೇ ಆಗಿತ್ತು, ಎರಡೂ ತಾಸು ಸಭೆ ನಡೆಸಿದರು. ಆದ್ರೆ ನಾವು ಅಂದುಕೊಂಡ ಹಾಗೆ ಸಮಯ ನಿಗದಿ ಮಾಡಲಿಲ್ಲ. ಕಳೆದ ಬಿಜೆಪಿ‌ ಸರ್ಕಾರ ಇದ್ದಾಗಲೇ ಸಾಕಷ್ಟು ಹೋರಾಟ ಮಾಡಿದ್ವಿ. ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಇದ್ದಾಗ ಹೋರಾಟ ನಡೀತು. ಈಗ ಅದೇ ರೀತಿ ಈಗಲೂ ಮಾಡುತ್ತಿದ್ದೇವೆ. ಆದ್ರೆ ನಮ್ಮ ಬೇಡಿಕೆ ಯಾವುದೇ ರೀತಿ ಸ್ಪಂದಿಸಿಲ್ಲ. ಹೀಗಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ