ನೆಲಮಂಗಲ: ರಸ್ತೆಯನ್ನು ಜೆಸಿಬಿಯಿಂದ ಅಗೆದು ಸಾರ್ವಜನಿಕರ ಸಂಚಾರಕ್ಕೆ ಅಡಚಣೆ, ದೂರು ದಾಖಲು
ಸರ್ಕಾರಿ ರಸ್ತೆಯನ್ನು ಜೆಸಿಬಿ ಮೂಲಕ ಅಗೆದು ಸರ್ಕಾರಕ್ಕೆ ನಷ್ಟ ಉಂಟು ಮಾಡುವುದರ ಜೊತೆತೆ ಸಾರ್ವಜನಿಕರ ಓಡಾಟಕ್ಕೆ ಅಡಚಣೆ ಉಂಟು ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ಈ ಬಗ್ಗೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಪಿಡಿಓ ಅವರು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ನೆಲಮಂಗಲ, ಅ.5: ಸರ್ಕಾರಿ ರಸ್ತೆಯನ್ನು ಜೆಸಿಬಿ ಮೂಲಕ ಅಗೆದು ಸರ್ಕಾರಕ್ಕೆ ನಷ್ಟ ಉಂಟು ಮಾಡುವುದರ ಜೊತೆಗೆ ಸಾರ್ವಜನಿಕರ ಓಡಾಟಕ್ಕೆ ಅಡಚಣೆ ಉಂಟು ಮಾಡಿದ ಘಟನೆ ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ಈ ಬಗ್ಗೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಪಿಡಿಓ ಅವರು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಹ್ಯಾಡಾಳು ಮಂಜುನಾಥ್ ಹಾಗೂ ಕುಟುಂಬಸ್ಥರು ಮತ್ತು ಜೆಸಿಬಿ ಚಾಲಕ ಸುನೀಲ್ ವಿರುದ್ಧ ಪ್ರಕರಣ ದಾಖಲಾಗಿದೆ. ಹ್ಯಾಡಾಳು ಗ್ರಾಮದಿಂದ ಕೋಡಿಪಾಳ್ಯದವರೆಗೂ ರಸ್ತೆ ನಿರ್ಮಾಣ ಮಾಡಲಾಗಿತ್ತು. ಈ ರಸ್ತೆ ನಮ್ಮ ಜಮೀನಿಗೆ ಸೇರುತ್ತದೆ ಎಂದು ಟಾರ್ ಹಾಕಿದ ರಸ್ತೆಯನ್ನೇ ರಾತ್ರೋರಾತ್ರಿ ಹಾಳು ಮಾಡಿದ ಆರೋಪ ಕೇಳಿಬಂದಿದೆ.
ಇದನ್ನೂ ಓದಿ: Burglary: ಬಿಜೆಪಿ ಮುಖಂಡನ ಮನೆ ಬೀಗ ಒಡೆದು ಕಳ್ಳತನ, ಕಳ್ಳರ ಖತರ್ನಾಕ್ ಐಡಿಯಾ ಕಂಡು ಪೊಲೀಸರಿಗೇ ಶಾಕ್
ರಸ್ತೆ ಹದಗೆಡಿಸದ ಬಗ್ಗೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿಯ ಪಿಡಿಓ ಪ್ರಶಾಂತ್ ಅವರು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದರ ಅನ್ವಯ ಪೊಲೀಸರು IPC 1860, ಕಲಂ 427, 283 ಜೋತೆ 34 ರೀತ್ಯಾ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:00 am, Thu, 5 October 23