AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ಕ್ಷೇತ್ರಗಳಲ್ಲಿ ಉಪಚುನಾವಣೆ: ಜೆಡಿಎಸ್​ ಸ್ವತಂತ್ರವಾಗಿ ಕಣಕ್ಕೆ

ಮೈಸೂರು: ರಾಜ್ಯದಲ್ಲಿ ಅ.21ರಂದು ನಡೆಯುವ ಉಪಚುನಾವಣೆಯಲ್ಲಿ ಜೆಡಿಎಸ್​ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.  ಉಪಚುನಾವಣೆ ನಡೆಯುವ 15 ಕ್ಷೇತ್ರಗಳಲ್ಲೂ ಜೆಡಿಎಸ್​ ಸ್ಪರ್ಧಿಸಲಿದೆ. ಅಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿಗಿಂತ ಮೊದಲ ಶತ್ರು ಜೆಡಿಎಸ್ ಪಕ್ಷ ಎಂದು ನೇರವಾಗಿ ಹೆಚ್​ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್​-ಜೆಡಿಎಸ್​ ಜಗಳದಿಂದ ಬಿಜೆಪಿಗೆ ಸಹಕಾರಿಯಾಗುವುದಿಲ್ಲ. ಜೆಡಿಎಸ್‌ ಪಕ್ಷ ಹೋಗಲಿ ಅಂತ ತುಂಬಾ ಜನ ಕಾಯ್ತಿದ್ದಾರೆ ಎಂದು ಹೆಚ್​ಡಿಕೆ ವಾಗ್ದಾಳಿ […]

15 ಕ್ಷೇತ್ರಗಳಲ್ಲಿ ಉಪಚುನಾವಣೆ: ಜೆಡಿಎಸ್​ ಸ್ವತಂತ್ರವಾಗಿ ಕಣಕ್ಕೆ
ಸಾಧು ಶ್ರೀನಾಥ್​
|

Updated on:Sep 21, 2019 | 2:04 PM

Share

ಮೈಸೂರು: ರಾಜ್ಯದಲ್ಲಿ ಅ.21ರಂದು ನಡೆಯುವ ಉಪಚುನಾವಣೆಯಲ್ಲಿ ಜೆಡಿಎಸ್​ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

 ಉಪಚುನಾವಣೆ ನಡೆಯುವ 15 ಕ್ಷೇತ್ರಗಳಲ್ಲೂ ಜೆಡಿಎಸ್​ ಸ್ಪರ್ಧಿಸಲಿದೆ. ಅಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿಗಿಂತ ಮೊದಲ ಶತ್ರು ಜೆಡಿಎಸ್ ಪಕ್ಷ ಎಂದು ನೇರವಾಗಿ ಹೆಚ್​ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್​-ಜೆಡಿಎಸ್​ ಜಗಳದಿಂದ ಬಿಜೆಪಿಗೆ ಸಹಕಾರಿಯಾಗುವುದಿಲ್ಲ. ಜೆಡಿಎಸ್‌ ಪಕ್ಷ ಹೋಗಲಿ ಅಂತ ತುಂಬಾ ಜನ ಕಾಯ್ತಿದ್ದಾರೆ ಎಂದು ಹೆಚ್​ಡಿಕೆ ವಾಗ್ದಾಳಿ ನಡೆಸಿದರು.

ನನ್ನದು ಅತ್ಯಂತ ಕೆಟ್ಟ ಸರ್ಕಾರ: ನಾನು ನೇರವಾಗಿ ಹೇಳ್ತಿದ್ದೇನೆ ನನ್ನದು ಅತ್ಯಂತ ಕೆಟ್ಟ ಸರ್ಕಾರ, ಮೈತ್ರಿ ಸರ್ಕಾರದಲ್ಲಿ ನನಗೆ ಯಾವುದೇ ಬೆಂಬಲ ಇರಲಿಲ್ಲ. ಇದರ ನಡುವೆಯೂ ನಾನು ರೈತರ ಪರ ಕೆಲಸ ಮಾಡಿದ್ದೇನೆ, ನಾನು ಯಾವುದೇ ಮೋಸ ಮಾಡಿಲ್ಲ ಎಂದು ಕಾಂಗ್ರೆಸ್​ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕುಮಾರಸ್ವಾಮಿ ಸಿಎಂ ಆಗಲ್ಲ, ಹೀಗಾಗಿ ಮೈಸೂರು ಭಾಗದ ನಾಯಕರೇ ಸಾಲಮನ್ನಾ ಹೇಳಿಕೆ ನೀಡಿದ್ರು. ಆದ್ರೆ ನಾನು ರೈತರ ಸಾಲ ಮನ್ನಾ ಮಾಡಿ ತೋರಿಸಿದ್ದೇನೆ. ನಾನು ಕಾಂಗ್ರೆಸ್​ ಜೊತೆ ಸರ್ಕಾರ ಮಾಡಿದ ಮೊದಲ ದಿನವೇ ನನ್ನಿಂದ ಕಾರ್ಯಕರ್ತರು ದೂರ ಆಗ್ತಾರೆಂದು ಗೊತ್ತಿತ್ತು. ಆದ್ರೂ ರೈತರ ಕಾರಣದಿಂದ ಕಾಂಗ್ರೆಸ್​ ಜೊತೆ ಸರ್ಕಾರವನ್ನು ಮುಂದುವರಿಸಿದೆ ಎಂದರು.

 ಕಾಂಗ್ರೆಸ್​-ಜೆಡಿಎಸ್​ನ ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನದಿಂದ ಒಟ್ಟು 17 ಶಾಸಕರು ರಾಜೀನಾಮೆ ನೀಡಿದ್ದರು. ಈಗ 15 ಕ್ಷೇತ್ರಗಳಲ್ಲಿ ಉಪಚುನಾವಣೆಯ ದಿನಾಂಕ ನಿಗದಿಯಾಗಿದೆ.

Published On - 1:32 pm, Sat, 21 September 19

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ