Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿಗೆ ಹಂದಿ ಎಂದ ಐಪಿಎಸ್ ಅಧಿಕಾರಿಯ ಮತ್ತಷ್ಟು ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಜೆಡಿಎಸ್

ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ತಮ್ಮ ವಿರುದ್ಧ ಹೆಚ್‌.ಡಿ.ಕುಮಾರಸ್ವಾಮಿ ಮಾಡಿರೋ ಆರೋಪಗಳಿಗೆ ಕೌಂಟರ್ ಕೊಟ್ಟಿದ್ದಾರೆ. ಅದರಲ್ಲೂ ಪರೋಕ್ಷವಾಗಿ ಕುಮಾರಸ್ವಾಮಿಯನ್ನು ಹಂದಿಗೆ ಹೋಲಿಕೆ ಮಾಡಿ ಹೊಸ ಸಂಘರ್ಷಕ್ಕೆ ನಾಂದಿ ಹಾಡಿದೆ.

ಕುಮಾರಸ್ವಾಮಿಗೆ ಹಂದಿ ಎಂದ ಐಪಿಎಸ್ ಅಧಿಕಾರಿಯ ಮತ್ತಷ್ಟು ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಜೆಡಿಎಸ್
ಕುಮಾರಸ್ವಾಮಿ- ಐಪಿಎಸ್​ ಚಂದ್ರಶೇಖರ್
Follow us
ರಮೇಶ್ ಬಿ. ಜವಳಗೇರಾ
|

Updated on:Sep 29, 2024 | 11:49 AM

ಬೆಂಗಳೂರು, (ಸೆಪ್ಟೆಂಬರ್ 29): ಲೋಕಾಯುಕ್ತ ಎಸ್​ಐಟಿ ಎಡಿಜಿಪಿ, ಹಿರಿಯ ಐಪಿಎಸ್ ಅಧಿಕಾರಿ ಚಂದ್ರಶೇಖರ್ ಅವರು (ADGP Chandrashekar) ತಮ್ಮ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ (HD Kumaraswamy) ಪತ್ರದ ಮೂಲಕ ಹಂದಿಗೆ ಹೋಲಿಸಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಜೆಡಿಎಸ್​, ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ. ಅಲ್ಲದೇ ಸ್ವತಃ ಕುಮಾರಸ್ಬಾಮಿ ತಿರುಗೇಟು ನೀಡಿದ್ದಾರೆ. ಅಲ್ಲದೇ ಜೆಡಿಎಸ್ ಘಟಕ ಸಹ ಚಂದ್ರಶೇಖರ್ ವಿರುದ್ಧ ಹೊಸ ಗಂಭೀರ ಆರೋಪವನ್ನು ಮಾಡಿದೆ.

ಕೇಂದ್ರ ಸಚಿವರ ಕುರಿತು ಕೀಳುಮಟ್ಟದ ಪದ ಬಳಸಿರುವುದು ಅಕ್ಷಮ್ಯ. ಎಂ.ಚಂದ್ರಶೇಖರ್ ನೀವೊಬ್ಬ ಐಪಿಎಸ್ ಅಧಿಕಾರಿಯಾಗಿರಲು ಅನರ್ಹ. 20 ಕೋಟಿಗೆ ಬೇಡಿಕೆ ಇಟ್ಟಿದ್ದ ಕಡು ಭ್ರಷ್ಟ ಅಧಿಕಾರಿ ನೀವೇ ಅಲ್ಲವೇ? ಭೂವ್ಯವಹಾರವೊಂದರಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಡು ಭ್ರಷ್ಟ ಅಧಿಕಾರಿ. ಈ ಸಂಬಂಧ ನಿಮ್ಮ ವಿರುದ್ಧ ಇನ್ಸ್​ಪೆಕ್ಟರ್ ಒಬ್ಬರು ದೂರು ನೀಡಿದ್ದಾರೆ. ಬಹುಮಹಡಿ ವಾಣಿಜ್ಯ ಕಟ್ಟಡ ಎಷ್ಟು ಕೋಟಿ ಲಂಚ ಪಡೆದು ಕಟ್ಟುತ್ತಿದ್ದೀರಿ. ಬೆಂಗಳೂರಿನಲ್ಲಿ ನಿಮ್ಮ ಪತ್ನಿ ಹೆಸರಲ್ಲಿ ನಿರ್ಮಿಸುತ್ತಿರುವ ಬಹುಮಹಡಿ ಕಟ್ಟಡ. ರಾಜಕಾಲುವೆ ಮೇಲೆ ನಿರ್ಮಿಸುತ್ತಿರುವ ಬಹು ಮಹಡಿಯ ವಾಣಿಜ್ಯ ಕಟ್ಟಡ. ಕೆರೆ ಒತ್ತುವರಿ ಮಾಡಿಕೊಂಡ ಅಕ್ರಮಗಳ ಬಗ್ಗೆ ತನಿಖೆ ನಡೆಯಬೇಕಲ್ಲವೇ? ಎಂದು ಗಂಭೀರ ಆರೋಪ ಮಾಡಿದೆ.

ಇದನ್ನೂ ಓದಿಳ ಹೆಚ್​ಡಿ ಕುಮಾರಸ್ವಾಮಿ ನನ್ನ ಮೇಲೆ ಸುಳ್ಳು ಆರೋಪದ ಜೊತೆಗೆ ಬೆದರಿಕೆ ಹಾಕಿದ್ದಾರೆ: ಎಡಿಜಿಪಿ ಚಂದ್ರಶೇಖರ್

ಇನ್ನು ಕುಮಾರಸ್ವಾಮಿಯನ್ನು ಹಂದಿಗೆ ಹೋಲಿಕೆ ಮಾಡಿದ್ದಕ್ಕೆ ಐಪಿಎಸ್​ ಅಧಿಕಾರಿ ಎಂ.ಚಂದ್ರಶೇಖರ್ ವಿರುದ್ಧ ಜೆಡಿಎಸ್​ ಕಿಡಿಕಾರಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್, ಕಳ್ಳನ ಮನಸ್ಸು ಹುಳ್ಳಳ್ಳಗೆ . ಎಂ.ಚಂದ್ರಶೇಖರ್​ ನಿಮ್ಮ ಮೇಲಿನ ಆರೋಪಗಳು ನಿಜವಲ್ಲವಾದರೇ. ಕಾನೂನಿನಡಿಯಲ್ಲಿ ನೀವು ಉತ್ತರ ನೀಡಬಹುದಿತ್ತು. ಅದನ್ನು ಬಿಟ್ಟು ನೀವೊಬ್ಬ ಐಪಿಎಸ್ ಅಧಿಕಾರಿ ಎಂಬುದನ್ನು ಮರೆತು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಹತಾಶೆ. ಸಿಟ್ಟು, ಆಕ್ರೋಶದಿಂದ ಕೀಳುಮಟ್ಟದ ಪದಗಳನ್ನು ಬಳಸಿ ಉತ್ತರಿಸಿದ್ದೀರಿ. ನಿಮ್ಮ ಭ್ರಷ್ಟಾಚಾರ ದಾಖಲೆ ಸಮೇತ ಬಯಲು ಮಾಡಿದ್ದು ಅಪರಾಧವೇ? ಎಂದು ಪ್ರಶ್ನಿಸಿದೆ.

ಲೋಕಾಯುಕ್ತ ವಿಶೇಷ ತನಿಖಾ ದಳದ ಎಡಿಜಿಪಿಯಾಗಿರುವ ಎಂ.ಚಂದ್ರಶೇಖರ್ ಓರ್ವ ಭ್ರಷ್ಟ ಅಧಿಕಾರಿ. ಈತನ ವಿರುದ್ಧ ಹಲವು ದೂರುಗಳು ದಾಖಲಾಗಿದ್ದು. ಆರೋಪ ಪಟ್ಟಿ ಕೂಡ ಸಲ್ಲಿಕೆಯಾಗಿವೆ. ಹಲವು ಅಪರಾಧ ಮಾಡಿರುವ ಇಂತಹ ಕಳಂಕಿತ ಅಧಿಕಾರಿಗಳಿಂದ ಮುಕ್ತ, ನ್ಯಾಯ ಸಮ್ಮತ, ಪಾರದರ್ಶಕ ತನಿಖೆ ಅಸಾಧ್ಯ. ಕೀಳುಮಟ್ಟದ ಪದ ಬಳಸಿರುವ ಭ್ರಷ್ಟ ಅಧಿಕಾರಿ ವಿರುದ್ಧ ಕ್ರಮ ಜರುಗಿಸಿ ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಅವರೇ ಅವರ ವಿರುದ್ಧ ಕ್ರಮ ಕೈಗೊಳ್ಳಿ. ಎಂ.ಚಂದ್ರಶೇಖರ್ ಅಕ್ರಮಗಳ ಬಗ್ಗೆಯೂ ಸರ್ಕಾರ ತನಿಖೆ ನಡೆಸಬೇಕು/ ಕೇಂದ್ರ ಗೃಹ ಸಚಿವಾಲಯ ಈ ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳಬೇಕು ಟ್ವೀಟ್ ಮೂಲಕ ಜೆಡಿಎಸ್​ ಘಟಕ ಆಗ್ರಹಿಸಿದೆ.

ಕುಮಾರಸ್ವಾಮಿ ಹೇಳಿದ್ದೇನು?

ಐಪಿಎಸ್ ಅಧಿಕಾರಿ ಚಂದ್ರಶೇಖರ್​ ಹೇಳಿಕೆಗೆ ಇಂದು (ಸೆಪ್ಟೆಂಬರ್ 29) ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದು, ಎಲ್ಲಿ ಉತ್ತರ ಕೊಡಬೇಕೋ ಅಲ್ಲಿ ಉತ್ತರ ಕೊಡಬೇಕು. ವಿಷಯ ಕ್ರೋಡೀಕರಿಸದೇ ಮಾತಾಡಲ್ಲ ನಾನು. ಆ ಲೆಟರ್ ಚೆನ್ನಾಗಿ ಪ್ರಿಪೇರ್ ಮಾಡಿದ್ದಾರೆ. ನಿನ್ನೆ ಸಂಜೆ ಎಲ್ಲಿ ಹೋಗಿದ್ರು ಅವರು ಅದು ಗೊತ್ತಿದೆ. ಯಾವ ರೀತಿ ಲೆಟರ್ ರೆಡಿ ಮಾಡಬೇಕೋ ಆ ರೀತಿ ಮಾಡಿ ಬಿಟ್ಟಿದ್ದಾರೆ ಎಂದರು.

ನಾನು ದಾಖಲೆ ಇಟ್ಕೊಂಡೇ ನಿನ್ನೆ ಮಾತಾಡಿದ್ದೆ. ಹಿಮಾಚಲ ಪ್ರದೇಶ ಕೇಡರ್ ಅಧಿಕಾರಿ 25 ವರ್ಷಗಳಿಂದ ಇಲ್ಲಿದ್ದಾರೆ. ಯಾರ್ಯಾರನ್ನು ಹಿಡಿದು ಇಲ್ಲಿಗೆ ಬಂದ್ರು ಅಂತ ಗೊತ್ತಿದೆ. ಅವರ ಬಗ್ಗೆ ಮಾತಾಡಿ ಅವರನ್ನು ಯಾಕೆ ದೊಡ್ಡವರಾಗಿ ಮಾಡಲಿ. ಈ ತರದ ಭಾಷೆ ಬಳಕೆ ಅವರ ಸಂಸ್ಕೃತಿ ತೋರಿಸುತ್ತೆ. ಯಾರ್ಯಾರ ಜತೆ ಇವರ ಸಂಬಂಧ‌ ಇದೆ ಗೊತ್ತಿಲ್ವಾ? ಒಬ್ಬ ಕೇಂದ್ರದ ಮಂತ್ರಿ ಜತೆ ಹೇಗೆ ಮಾತಾಡಬೇಕು ಇವರು? ಎಂದು ಪ್ರಶ್ನಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:46 am, Sun, 29 September 24

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ