AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಲೆ ಏರಿಕೆ ವಿರೋಧಿಸಿ ಜೆಡಿಎಸ್ ಪ್ರತಿಭಟನೆ ಘೋಷಣೆ; ಕಾಂಗ್ರೆಸ್, ಬಿಜೆಪಿ ವಿರುದ್ಧ ವಾಗ್ದಾಳಿ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಬೆಂಗಳೂರಿನಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲೂ ಜೆಡಿಎಸ್​ನಿಂದ ಪ್ರತಿಭಟನೆ ನಡೆಯಲಿದೆ. ಸೋಮವಾರ ಪಕ್ಷದಿಂದ ಬೃಹತ್ ಪಾದಯಾತ್ರೆ ನಡೆಸುತ್ತೇವೆ ಎಂದಿದ್ದಾರೆ.

ಬೆಲೆ ಏರಿಕೆ ವಿರೋಧಿಸಿ ಜೆಡಿಎಸ್ ಪ್ರತಿಭಟನೆ ಘೋಷಣೆ; ಕಾಂಗ್ರೆಸ್, ಬಿಜೆಪಿ ವಿರುದ್ಧ ವಾಗ್ದಾಳಿ
ಕಾಂಗ್ರೆಸ್​, ಜೆಡಿಎಸ್ ಮತ್ತು ಬಿಜೆಪಿ
TV9 Web
| Edited By: |

Updated on: Jun 26, 2021 | 5:11 PM

Share

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ, ತೈಲ ಬೆಲೆ ಗಗನಕ್ಕೇರಿದೆ. ಇದರ ವಿರುದ್ಧ ಜೆಡಿಎಸ್‌ ಪಕ್ಷ ಹೋರಾಟ ನಡೆಸಲಿದೆ ಎಂದು ಬೆಂಗಳೂರಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಬೆಲೆ ಏರಿಕೆ ವಿರುದ್ಧ ಸೋಮವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳುತ್ತೇವೆ. ಬೆಳಗ್ಗೆ 11 ಗಂಟೆಗೆ ಜೆ.ಪಿ. ಭವನದಿಂದ ಪಾದಯಾತ್ರೆ ನಡೆಸುತ್ತೇವೆ. ಮೌರ್ಯ ವೃತ್ತದ ಗಾಂಧಿ ಪ್ರತಿಮೆವರೆಗೆ ಱಲಿ ನಡೆಸುತ್ತೇವೆ. ಬಳಿಕ ಡಿಸಿಗೆ ಮನವಿ ಕೊಡುತ್ತೇವೆ ಎಂದು ಹೆಚ್.ಕೆ. ಕುಮಾರಸ್ವಾಮಿ ತಿಳಿಸಿದ್ದಾರೆ.

ಕೊವಿಡ್ ಸಂಕಷ್ಟದ ವೇಳೆ ಅನಗತ್ಯ ರಾಜಕೀಯ ಬಯಸುವುದಿಲ್ಲ. ಇದನ್ನೇ ಬಿಜೆಪಿ ಬಗ್ಗೆ ಮೃದು ಧೋರಣೆ ಎಂಬುದು ಸರಿಯಲ್ಲ. ಆಡಳಿತ ಪಕ್ಷಕ್ಕೆ ಸಲಹೆ ನೀಡುವುದಕ್ಕೆ ನಾವು ಸೀಮಿತವಾಗಿದ್ದೆವು. ಇನ್ನು ಸುಮ್ಮನಿರಲು ಆಗಲ್ಲ, ಹೋರಾಟ ಅನಿವಾರ್ಯವಾಗಿದೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತೊಂದೆಡೆ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಬೆಂಗಳೂರಿನಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲೂ ಜೆಡಿಎಸ್​ನಿಂದ ಪ್ರತಿಭಟನೆ ನಡೆಯಲಿದೆ. ಸೋಮವಾರ ಪಕ್ಷದಿಂದ ಬೃಹತ್ ಪಾದಯಾತ್ರೆ ನಡೆಸುತ್ತೇವೆ. ಕಾಂಗ್ರೆಸ್, ಬಿಜೆಪಿ ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ಕಿತ್ತಾಟ ನಡೆಯುತ್ತಿದೆ.

ಕಾಂಗ್ರೆಸ್​ನಲ್ಲಿ ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದಂತಾಗಿದೆ. ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇದೆ. ಬಿಜೆಪಿ ಬಗ್ಗೆ ನಮಗೆ ಯಾವುದೇ ಸಾಫ್ಟ್ ಕಾರ್ನರ್ ಇಲ್ಲ. ನಾವು ಕ್ವಾರಂಟೈನ್​ನಲ್ಲಿಲ್ಲ, ಬೀದಿಗಿಳಿದು ಹೋರಾಡುತ್ತೇವೆ ಎಂದು ಜೆಡಿಎಸ್​ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಜಿಲ್ಲಾ ಘಟಕಗಳ ಅಧ್ಯಕ್ಷರ ಬದಲಾವಣೆ ಚರ್ಚೆ; ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸಂಘಟನೆಗೆ ಹೊಸ ಸೂತ್ರ?

ಬಿಜೆಪಿ ರಾಜ್ಯ ಕಾರ್ಯಕಾರಿಣಿ: ಕೊರೊನಾ ನಿರ್ವಹಣೆ, ಪಶ್ಚಿಮ ಬಂಗಾಳ ಹಿಂಸಾಚಾರ, ರಾಜಕೀಯ ನಿರ್ಣಯಗಳ ಬಗ್ಗೆ ಚರ್ಚೆ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್