ಜೆಡಿಎಸ್​ನ ಬರ ಅಧ್ಯಯನಕ್ಕೆ ಸಿದ್ದರಾಮಯ್ಯ ಸ್ವಾಗತ, ಬಿಜೆಪಿಗೆ ಟಾಂಗ್​​

ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ರೈತ ಸಾಂತ್ವನ ಯಾತ್ರೆ ಮೂಲಕ ರಾಜ್ಯದಲ್ಲಿ ಬರ ಅಧ್ಯಯನ ನಡೆಸಲು ನಿರ್ಧರಿಸಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್​ ಮಾಡಿ ತಮ್ಮ ಬರ ಅಧ್ಯಯನದ ಅನುಭವವನ್ನು ರಾಜ್ಯ ಸರ್ಕಾರದ ಜೊತೆಯಲ್ಲಿ ಮಾತ್ರವಲ್ಲ, ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಹಂಚಿಕೊಂಡರೆ ರಾಜ್ಯಕ್ಕೆ ಅನುಕೂಲವಾಗಬಹುದು ಹೇಳಿದ್ದಾರೆ.

ಜೆಡಿಎಸ್​ನ ಬರ ಅಧ್ಯಯನಕ್ಕೆ ಸಿದ್ದರಾಮಯ್ಯ ಸ್ವಾಗತ, ಬಿಜೆಪಿಗೆ ಟಾಂಗ್​​
ಸಿಎಂ ಸಿದ್ದರಾಮಯ್ಯ
Follow us
| Updated By: ವಿವೇಕ ಬಿರಾದಾರ

Updated on: Nov 05, 2023 | 1:24 PM

ಬೆಂಗಳೂರು ನ.05: ಬಿಜೆಪಿ (BJP) ಬೆನ್ನಲ್ಲೇ ಜೆಡಿಎಸ್ (JDS) ನಾಯಕರು ಬರ ಅಧ್ಯಯನ ನಡೆಸಲು ನಿರ್ಧರಿಸಿದ್ದು ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಪ್ರತಿಕ್ರಿಯಿಸಿ” ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ರೈತ ಸಾಂತ್ವನ ಯಾತ್ರೆ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ” ಎಂದು ಹೇಳಿದ್ದಾರೆ. “ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸ. ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ” ಎಂದರು.

“ಸಾಮಾಜಿಕ ಜಾಲತಾಣ ಎಕ್ಸ್​ (ಹಿಂದಿನ ಟ್ವಿಟರ್​) ನಲ್ಲಿ “ರೈತ ಸಾಂತ್ವನ ಯಾತ್ರೆಯ ನಂತರ ತಮ್ಮ ಅನುಭವವನ್ನು ರಾಜ್ಯ ಸರ್ಕಾರದ ಜೊತೆಯಲ್ಲಿ ಮಾತ್ರವಲ್ಲ, ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಹಂಚಿಕೊಂಡರೆ ರಾಜ್ಯಕ್ಕೆ ಅನುಕೂಲವಾಗಬಹುದು. ಒಂದು ಪ್ರಾದೇಶಿಕ ಪಕ್ಷದ ಮುಖ್ಯಸ್ಥರಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಬರ ಪರಿಹಾರದ ವಿಷಯದಲ್ಲಿ ನಿರಂತರವಾಗಿ ಕರ್ನಾಟಕ ರಾಜ್ಯಕ್ಕೆ ಕೆಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿವರ ಖಂಡಿತ ತಿಳಿದಿದೆ ಎಂದು ಭಾವಿಸುವೆ” ಎಂದು ಟ್ವೀಟ್​ ಮಾಡಿದರು.

“ಹೊಸ ಬೆಳವಣಿಗೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ಈಗ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಭಾರತೀಯ ಜನತಾ ಪಕ್ಷದ ಜೊತೆ ತಮ್ಮ ಪಕ್ಷದ ಮೈತ್ರಿಗೆ ಮುಂದಾಗಿದ್ದಾರೆ. ರಾಜ್ಯದ ಬಿಜೆಪಿ ನಾಯಕರನ್ನು ದೂರ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಕುಟುಂಬದ ಸದಸ್ಯರ ಜೊತೆ ಆತ್ಮೀಯವಾಗಿ ಸಂಬಂಧ ಇಟ್ಟುಕೊಂಡಿದ್ದಾರೆ. ಈ ಸೌಹಾರ್ದ ಸಂಬಂಧವನ್ನು ಬಳಸಿಕೊಂಡು ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ. ನ್ಯಾಯ ದೊರಕಿಸಿಕೊಟ್ಟರೆ ಕನ್ನಡಿಗರು ಋಣಿಯಾಗಿರುತ್ತಾರೆ” ಎಂದರು.

ಇದನ್ನೂ ಓದಿ: ಬರಪೀಡಿತ ತಾಲೂಕುಗಳ ಪಟ್ಟಿಗೆ ಮತ್ತೆ 7 ತಾಲೂಕುಗಳ ಸೇರ್ಪಡೆ: ಸರ್ಕಾರ ಆದೇಶ

“ರಾಜ್ಯದ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಒಟ್ಟು ರೂ.33,710 ಕೋಟಿ ಮೌಲ್ಯದ ಬೆಳೆಹಾನಿಯಾಗಿದೆ. ಕೇಂದ್ರದಿಂದ 17,901 ಕೋಟಿ ರೂ. ಪರಿಹಾರಕ್ಕೆ ಮನವಿ ನೀಡಲಾಗಿದೆ. ರಾಜ್ಯಕ್ಕೆ ಕೇಂದ್ರದ ಬರ ಅಧ್ಯಯನ ತಂಡ ಆಗಮಿಸಿದ್ದ ಸಂದರ್ಭದಲ್ಲಿ ಹಸಿರು ಬರವ ಸೇರಿದಂತೆ ಬರ ಪರಿಸ್ಥಿತಿಯ ಕುರಿತು ಮನವರಿಕೆ ಮಾಡಿಕೊಡಲಾಗಿದೆ. ಹೀಗಿದ್ದರೂ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆಯೂ ಇಲ್ಲ, ಅನುದಾನವೂ ಇಲ್ಲ”.

“ಬರಪರಿಹಾರಕ್ಕಾಗಿ ಪ್ರಧಾನಮಂತ್ರಿ ಅವರಿಗೆ ಮನವಿ ಮಾಡಲು ನಮ್ಮ ಸರ್ಕಾರ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲು ಸಿದ್ಧವಿದೆ. ತಮ್ಮದೇ ಪಕ್ಷಕ್ಕೆ ಸೇರಿರುವ ಪ್ರಧಾನಮಂತ್ರಿಯವರನ್ನು ಭೇಟಿ ಮಾಡುವ ಧೈರ್ಯ ರಾಜ್ಯದ ಬಿಜೆಪಿ ನಾಯಕರಲ್ಲಿ ಇಲ್ಲ. ಕೇಂದ್ರದ ಬಿಜೆಪಿ ನಾಯಕರು ಕೂಡಾ ರಾಜ್ಯದ ಬಿಜೆಪಿ ನಾಯಕರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಈ ವಿಷಯದಲ್ಲಿ ಹೆಚ್.ಡಿ.ದೇವೇಗೌಡರು ಮತ್ತು ಅವರ ಪಕ್ಷ ಹೆಚ್ಚಿನ ಮುತುವರ್ಜಿ ವಹಿಸಿದರೆ ಇದು ಸಾಧ್ಯವಾಗಬಹುದು” ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ