ಗಡಿ ವಿವಾದ ಮುಗಿದ ಅಧ್ಯಾಯ, ಉದ್ಧವ್ ಠಾಕ್ರೆ ತಾಳ್ಮೆ ಕಳೆದುಕೊಂಡಿದ್ದಾರೆ: ಹೆಚ್.ಡಿ. ದೇವೇಗೌಡ
ಗಣರಾಜ್ಯೋತ್ಸವ ದಿನ ನಡೆದ ರೈತರ ಗಲಭೆಯ ಹಿಂದೆ ಯಾರಿದ್ದಾರೆಂದು ನೋಡಬೇಕು. ಕೇಂದ್ರ ಗೃಹ ಇಲಾಖೆ ಏನು ಹೇಳುತ್ತದೆಂದು ನೋಡಬೇಕು ಎಂದು ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.
ದೆಹಲಿ: ಮಹಾರಾಷ್ಟ್ರ ಸಿಎಂ ಕೆಟ್ಟ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಮಹಾರಾಷ್ಟ್ರದ ಹೊಸ ನಕ್ಷೆಯನ್ನು ತಯಾರು ಮಾಡಿದ್ದಾರೆ. ಕರ್ನಾಟಕ ಪ್ರದೇಶ ಒಳಗೊಂಡು ನಕ್ಷೆಯನ್ನು ತಯಾರಿಸಿದ್ದಾರೆ. ಉದ್ಧವ್ ಠಾಕ್ರೆ ತಾಳ್ಮೆ ಕಳೆದುಕೊಂಡಿದ್ದಾರೆ ಎಂದು ಅನಿಸುತ್ತೆ ಎಂದು ದೆಹಲಿಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿಕೆ ನೀಡಿದ್ದಾರೆ.
ಗಡಿ ವಿವಾದ ಮುಗಿದ ಅಧ್ಯಾಯ ಎಂದು ಹೇಳಿದ್ದರು. ಹಾಗೆಂದು ಮೊರಾರ್ಜಿ ದೇಸಾಯಿ ಹೇಳಿದ್ದ ಸಂದರ್ಭದಲ್ಲಿ ನಾನೂ ಇದ್ದೆ. ಈ ವಿಚಾರ ಈಗಾಗಲೇ ಮುಕ್ತಾಯವಾಗಿದೆ. ಈಗ ಚುನಾವಣೆಗಾಗಿ ಮಾತ್ರ ಮತ್ತೆ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ: ಬೆಳಗಾವಿಯನ್ನ ಮಹಾರಾಷ್ಟ್ರಕ್ಕೆ ಸೇರಿಸಿಯೇ ತೀರುತ್ತೇನೆ – ಉದ್ಧಟತನ ಮಾತುಗಳನ್ನು ಉದುರಿಸಿದ ಉದ್ಧವ ಠಾಕ್ರೆ
ಮಹದಾಯಿ ವಿಚಾರವಾಗಿ ಗೋವಾ ಸಿಎಂ ಹೇಳಿಕೆಯ ಬಗ್ಗೆ ದೇವೇಗೌಡ ಮಾತನಾಡಿದ್ದಾರೆ. ಪ್ರಮೋದ್ ಸಾವಂತ್ ಭಾವನಾತ್ಮಕ ಹೇಳಿಕೆ ನೀಡಿದ್ದಾರೆ. ಈ ವಿಚಾರದಲ್ಲಿ ಸುಮ್ಮನೆ ಗೊಂದಲ ಸೃಷ್ಟಿ ಮಾಡಬಾರದು. ಜಲವಿವಾದ ಈಗಾಗಲೇ ಸುಪ್ರೀಂಕೋರ್ಟ್‌ನಲ್ಲಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ಗಣರಾಜ್ಯೋತ್ಸವ ದಿನ ನಡೆದ ರೈತರ ಗಲಭೆಯ ಹಿಂದೆ ಯಾರಿದ್ದಾರೆಂದು ನೋಡಬೇಕು. ಗೃಹ ಸಚಿವರು ಹಲವು ವರದಿಗಳನ್ನು ಪಡೆದುಕೊಂಡಿದ್ದಾರೆ. ಕೇಂದ್ರ ಗೃಹ ಇಲಾಖೆ ಏನು ಹೇಳುತ್ತದೆಂದು ನೋಡಬೇಕಿದೆ ಎಂದು ನವದೆಹಲಿಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿಕೆ ನೀಡಿದ್ದಾರೆ. ರಾಕೇಶ್ ಟಿಕಾಯತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಅವರ ಕರೆಗೆ ಓಗೊಟ್ಟು ದೊಡ್ಡ ಪ್ರಮಾಣದಲ್ಲಿ ರೈತರು ಆಗಮಿಸುತ್ತಿದ್ದಾರೆ. ಸಂಸತ್‌ನಲ್ಲಿ ಕೂಡ ಈ ಬಗ್ಗೆ ಪ್ರಸ್ತಾಪವಾಗಲಿದೆ ಎಂದು ದೇವೇಗೌಡ ಮಾತನಾಡಿದ್ದಾರೆ.
ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರಪತಿ ಭಾಷಣ ಬಹಿಷ್ಕರಿಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ
Published On - 4:50 pm, Sun, 31 January 21