AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರವನ್ನು ಚೀನಾಕ್ಕೆ ಹೋಲಿಸಿದ ಹೆಚ್​ಡಿಕೆ; ಅನ್ನಕ್ಕೆ ಮಣ್ಣು ಹುಯ್ಯುವ ಹೀನ ಕೆಲಸ ಎಂದು ಕಿಡಿ

ಬೆಳಗಾವಿ ಗಡಿ ಪ್ರದೇಶದ ಗ್ರಾಮಗಳಲ್ಲಿ ಮರಾಠಿ ಮಾತನಾಡುವ ಜನರಿಗಾಗಿ ಹಮ್ಮಿಕೊಂಡಿರುವ ಆರೋಗ್ಯ ವಿಮೆ ಯೋಜನೆಯನ್ನು ಮಹಾರಾಷ್ಟ್ರ ಸರ್ಕಾರ 865 ಗ್ರಾಮಗಳಿಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿರುವುದಕ್ಕೆ ಜೆಡಿಎಸ್ ನಾಯಕ ಹೆಚ್​​ಡಿ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರವನ್ನು ಚೀನಾಕ್ಕೆ ಹೋಲಿಸಿದ ಹೆಚ್​ಡಿಕೆ; ಅನ್ನಕ್ಕೆ ಮಣ್ಣು ಹುಯ್ಯುವ ಹೀನ ಕೆಲಸ ಎಂದು ಕಿಡಿ
ಹೆಚ್​​ಡಿ ಕುಮಾರಸ್ವಾಮಿ
Ganapathi Sharma
|

Updated on: Apr 05, 2023 | 4:44 PM

Share

ಬೆಂಗಳೂರು: ಬೆಳಗಾವಿ (Belagavi) ಗಡಿ ಪ್ರದೇಶದ ಗ್ರಾಮಗಳಲ್ಲಿ ಮರಾಠಿ ಮಾತನಾಡುವ ಜನರಿಗಾಗಿ ಹಮ್ಮಿಕೊಂಡಿರುವ ಆರೋಗ್ಯ ವಿಮೆ ಯೋಜನೆಯನ್ನು ಮಹಾರಾಷ್ಟ್ರ (Maharashtra) ಸರ್ಕಾರ 865 ಗ್ರಾಮಗಳಿಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿರುವುದಕ್ಕೆ ಜೆಡಿಎಸ್ ನಾಯಕ ಹೆಚ್​​ಡಿ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರವನ್ನು ಚೀನಾಕ್ಕೆ ಹೋಲಿಸಿ ಸರಣಿ ಟ್ವೀಟ್ ಮಾಡಿರುವ ಅವರು, ನೆರೆ ರಾಜ್ಯವು ಅನ್ನಕ್ಕೆ ಮಣ್ಣು ಹುಯ್ಯುವ ಹೀನ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜತೆಗೆ, ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿದ್ದಾರೆ. ಬೆಳಗಾವಿ ಗಡಿ ಪ್ರದೇಶಗಳಲ್ಲಿನ ಆರೋಗ್ಯ ವಿಮೆ ಯೋಜನೆ ವಿಸ್ತರಣೆ ಬಗ್ಗೆ ಮಹಾರಾಷ್ಟ್ರ ಸರ್ಕಾರ ಏಪ್ರಿಲ್ 3ರಂದು ನಿರ್ಣಯ ಕೈಗೊಂಡಿತ್ತಲ್ಲದೆ, ಆದೇಶ ಹೊರಡಿಸಿತ್ತು.

ಮಹಾರಾಷ್ಟ್ರದಲ್ಲಿರುವ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರ ಪದೇಪದೆ ಕಾಲುಕೆರೆದು ಕಿತಾಪತಿ ಮಾಡುತ್ತಿದೆ. ಚೀನಾ ಮನಸ್ಥಿತಿಯ ಆ ರಾಜ್ಯವು ಕರ್ನಾಟಕವನ್ನು ಶತ್ರುವಿನಂತೆ ನೋಡುತ್ತಿದೆ. ಕೇಂದ್ರ ಬಿಜೆಪಿ ಸರ್ಕಾರ ಇದನ್ನೆಲ್ಲಾ ನೋಡಿಕೊಂಡು ಮೌನವಾಗಿದೆ. ಒಕ್ಕೂಟ ವ್ಯವಸ್ಥೆಯ ಅವಸಾನಕ್ಕೆ ಇದೇ ಕಾರಣವಾಗಬಹುದು. ಒಂದಲ್ಲ ಎರಡಲ್ಲ, ಪ್ರತಿಯೊಂದು ವಿಷಯದಲ್ಲೂ ಮಹಾರಾಷ್ಟ್ರವು ಕರ್ನಾಟಕವನ್ನು ಕೆರಳಿಸುತ್ತದೆ. ರಾಜ್ಯದ ಗಡಿ ಒಳಗಿರುವ 865 ಗ್ರಾಮಗಳ ಜನರಿಗೆ ಆರೋಗ್ಯ ವಿಮೆ ಜಾರಿ ಮಾಡಿದ ಆ ರಾಜ್ಯ ಸರ್ಕಾರದ ನಡೆ ಒಕ್ಕೂಟ ವ್ಯವಸ್ಥೆಯನ್ನು ಒಡೆಯುವ ನೇರ, ಧೂರ್ತ ಪ್ರಯತ್ನ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಮಹಾರಾಷ್ಟ್ರವು ಒಕ್ಕೂಟ ವ್ಯವಸ್ಥೆಯ ಎಲ್ಲಾ ಎಲ್ಲೆಗಳನ್ನು ಮೀರಿ ಅಹಂಕಾರದಿಂದ ವರ್ತಿಸುತ್ತಿದೆ. ಬಿಜೆಪಿಯ ಕೇಂದ್ರ ಸ್ರಾಕರವು ‘ಶಿಂಧೆ ಸೂತ್ರದ ಗೊಂಬೆ’ಯಾಗಿ ಅಂತಹ ರಾಜಕಾರಣಕ್ಕೆ ಕರ್ನಾಟಕವನ್ನು ಬಲಿ ಕೊಡಲು ಹೊರಟಿದೆಯಾ ಎನ್ನುವ ಅನುಮಾನ ನನ್ನದು. ಇಲ್ಲವಾದರೆ, ಮಹಾರಾಷ್ಟ್ರ ಈ ಪರಿಯ ಉದ್ಧಟತನ ತೋರುತ್ತಿದ್ದರೂ ಮೋದಿ ಸರ್ಕಾರದ ಮೌನವೇಕೆ? ಕರ್ನಾಟಕದಲ್ಲಿ ಇಡೀ ಭಾರತವೇ ಅಡಗಿದೆ. ಕಾಶ್ಮೀರದಿಂದ ಕನ್ಯಾಕಮಾರಿಯವರೆಗೆ, ಗುಜರಾತಿನಿಂದ ಒಡಿಶಾವರೆಗೆ ಎಲ್ಲ ಕಡೆಯಿಂದಲೂ ಅನ್ನ ಅರಸಿಕೊಂಡು ಬಂದವರಿಗೆ ಆಶ್ರಯ ನೀಡಿದೆ. ಆ ಅನ್ನಕ್ಕೆ ಮಣ್ಣು ಹುಯ್ಯುವ ಹೀನ ಕೆಲಸವನ್ನು ಮಹಾರಾಷ್ಟ್ರ ಎಗ್ಗಿಲ್ಲದೆ ಮಾಡುತ್ತಿದೆ. ಕನ್ನಡಿಗರು ಸುಮ್ಮನಿರುವ ಕಾಲ ಮುಗಿದಿದೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Belagavi News: ಬೆಳಗಾವಿ ಗಡಿ ಪ್ರದೇಶದ 865 ಗ್ರಾಮಗಳಿಗೆ ಆರೋಗ್ಯ ಯೋಜನೆ ವಿಸ್ತರಿಸಿದ ಮಹಾರಾಷ್ಟ್ರ

ಭಾರತ ಸ್ವತಂತ್ರ್ಯಗೊಂಡಾಗ ಎಲ್ಲರಿಗಿಂತ ಮೊದಲೇ ಒಕ್ಕೂಟ ವ್ಯವಸ್ಥೆಗೆ ಒಳಪಟ್ಟವರು ನಾವು. ನಮ್ಮ ಉದಾರತೆಯೇ ನಮಗೆ ಇಂದು ಮುಳುವಾಗಿದೆಯಾ? ನೆಲ, ಜಲ, ಭಾಷೆ, ಅನುದಾನ ಸೇರಿ ಪ್ರತಿ ವಿಷಯದಲ್ಲೂ ಕನ್ನಡಿಗರು ಮಲತಾಯಿ ಮಕ್ಕಳಾಗಿದ್ದಾರೆ! ಇನ್ನೆಷ್ಟು ದಿನ ಈ ಅನ್ಯಾಯ ಎಂದು ಹೆಚ್​​ಡಿಕೆ ಪ್ರಶ್ನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ