AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಕೊವಿಡ್‌ ಸ್ಥಿತಿಗತಿ ಬಗ್ಗೆ ಎಚ್​.ಡಿ.ಕುಮಾರಸ್ವಾಮಿ ಆನ್‌ಲೈನ್‌ ಸಮಾಲೋಚನೆ; 2ಡಿಜಿ ಔ‍ಷಧ ಜೆಡಿಎಸ್‌ನಿಂದ ಉಚಿತವಾಗಿ ಹಂಚಲು ಚಿಂತನೆ

ಪಡಿತರ ತೆಗೆದುಕೊಳ್ಳಲು ಥಂಬ್‌ ಇಂಪ್ರೆಶನ್‌ ರದ್ದು ಮಾಡಿ, ಆಧಾರ್‌ ಕಡ್ಡಾಯಗೊಳಿಸಿರುವುದನ್ನು ಬಹುತೇಕ ಶಾಸಕರು ವಿರೋಧಿಸಿದರು. ಆಧಾರ್‌ ಲಿಂಕ್‌ ಆಗದೇ, ಪಡಿತರ ಸಿಗದೇ ಜನ ಪರದಾಡುತ್ತಿದ್ದಾರೆ ಎಂದು ಶಾಸಕರು, ಮುಖಂಡರು ದೂರಿದರು.

ರಾಜ್ಯದ ಕೊವಿಡ್‌ ಸ್ಥಿತಿಗತಿ ಬಗ್ಗೆ ಎಚ್​.ಡಿ.ಕುಮಾರಸ್ವಾಮಿ ಆನ್‌ಲೈನ್‌ ಸಮಾಲೋಚನೆ; 2ಡಿಜಿ ಔ‍ಷಧ ಜೆಡಿಎಸ್‌ನಿಂದ ಉಚಿತವಾಗಿ ಹಂಚಲು ಚಿಂತನೆ
ಎಚ್.ಡಿ. ಕುಮಾರಸ್ವಾಮಿ ಆನ್​ಲೈನ್ ಸಭೆ
TV9 Web
| Edited By: |

Updated on:Aug 21, 2021 | 10:16 AM

Share

ಬೆಂಗಳೂರು: ರಾಜ್ಯದ ಕೊವಿಡ್‌ ಸ್ಥಿತಿಗತಿ ಮತ್ತು ಜೆಡಿಎಸ್‌ ವತಿಯಿಂದ ಜನರಿಗೆ ನೀಡಲಾಗುತ್ತಿರುವ ಪರಿಹಾರ ಕಾರ್ಯಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಪಕ್ಷದ ಶಾಸಕರು, ಮುಖಂಡರೊಂದಿಗೆ ಸೋಮವಾರ ಆನ್‌ಲೈನ್‌ ಸಮಾಲೋಚನೆ ನಡೆಸಿದರು.

ಕೊರೊನಾ ವೈರಸ್‌ ಸೋಂಕು ಪತ್ತೆ ಪರೀಕ್ಷೆ ಕಡಿಮೆ ಪ್ರಮಾಣದಲ್ಲಿ ನಡೆಯುತ್ತಿರುವುದು, ಪರೀಕ್ಷಾ ವರದಿಗಳು ವಿಳಂಬವಾಗಿ ಬರುತ್ತಿರುವುದು ಮತ್ತು ವರದಿ ವಿಳಂಬವಾಗುತ್ತಿರುವುದರಿಂದ ಆಗುತ್ತಿರುವ ಅನಾಹುತಗಳು, ಲಸಿಕೆ ಅಭಿಯಾನ ಅವ್ಯವಸ್ಥೆ, ಆಕ್ಸಿಜನ್‌ ಪೂರೈಕೆಯಲ್ಲಿ ಅಗುತ್ತಿರುವ ಸಮಸ್ಯೆ, ತಾರತಮ್ಯ, ಆಸ್ಪತ್ರೆಗಳು ರೋಗಿಗಳಿಂದ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡುತ್ತಿರುವುದನ್ನು ಶಾಸಕರು ಕುಮಾರಸ್ವಾಮಿ ಅವರ ಗಮನಕ್ಕೆ ತಂದರು. ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಕುಮಾರಸ್ವಾಮಿ ಅವರು ಭರವಸೆ ನೀಡಿದರು.

ಹಳ್ಳಿಗಳಲ್ಲಿ ಸೋಂಕಿಗೆ ಒಳಗಾಗಿರುವವರಿಗೆ ಮಾಹಿತಿ, ಜಾಗೃತಿ ನೀಡಲು ಆಶಾ ಕಾರ್ಯಕರ್ತೆಯರು ಶ್ರಮ ವಹಿಸುತ್ತಿರುವುದಾಗಿ ಶಾಸಕರು ಮಾಹಿತಿ ನೀಡಿದರು. ಆಶಾ ಕಾರ್ಯಕರ್ತರ ಕಾರ್ಯಕ್ಕೆ ಕುಮಾರಸ್ವಾಮಿ ಹರ್ಷ ವ್ಯಕ್ತಪಡಿಸಿದರು. ಕಾರ್ಯಕರ್ತೆಯರು ಸೋಂಕಿತರಿಗೆ ಔಷಧ ತಲುಪಿಸಲು ಉತ್ಸಕರಾಗಿದ್ದರೂ ಸರ್ಕಾರ ಔಷಧ ಪೂರೈಸದೇ ಇರುವುದನ್ನು ಶಾಸಕ ಆಶ್ವಿನ್‌ ಸಭೆಯಲ್ಲಿ ಗಮನಕ್ಕೆ ತಂದರು. ಕೊವಿಡ್‌ ಚಿಕಿತ್ಸೆಗೆ ನೆರವಾಗುತ್ತಿರುವ, ವೈಯಕ್ತಿಕ ಸಹಾಯ ನೀಡುತ್ತಿರುವ ಪಕ್ಷದ ಶಾಸಕರ ನಡೆಗೆ ಕುಮಾರಸ್ವಾಮಿ ಪ್ರಶಂಸೆ ವ್ಯಕ್ತಪಡಿಸಿದರು.

2ಡಿಜಿ ಔ‍ಷಧ ಖರೀದಿಸಿ ಹಂಚಲು ಚಿಂತನೆ ಡಿಆರ್‌ಡಿಒ ಅಭಿವೃದ್ಧಪಡಿಸಿರುವ 2ಡಿಜಿ ಔ‍ಷಧದ ಪೊಟ್ಟಣಗಳನ್ನು ಖರೀದಿ ಮಾಡಿ ರಾಜ್ಯದಾದ್ಯಂತ ಜೆಡಿಎಸ್‌ ವತಿಯಿಂದ ಉಚಿತವಾಗಿ ವಿತರಿಸುವ ಬಗ್ಗೆ ಆನ್‌ಲೈನ್‌ ಸಭೆಯಲ್ಲಿ ಸಮಾಲೋಚನೆ ನಡೆಯಿತು. ಔ‍ಷಧ ಪರಿಣಾಮಕಾರಿ ಎಂದು ಕಂಡು ಬಂದರೆ ಅದನ್ನು ಖರೀದಿಸಿ ಹಂಚಲು ನಿರ್ಧರಿಸಲಾಯಿತು. ಎಚ್‌.ಡಿ ಕುಮಾರಸ್ವಾಮಿ ಅವರ ಈ ನಿರ್ಧಾರಕ್ಕೆ ಶಾಸಕರು, ಮುಖಂಡರು ಹರ್ಷ ವ್ಯಕ್ತಪಡಿಸಿದರು.

ಪಡಿತರ ಸಮಸ್ಯೆಗೆ ಶಾಸಕರ ಆಕ್ರೋಶ ಪಡಿತರ ತೆಗೆದುಕೊಳ್ಳಲು ಥಂಬ್‌ ಇಂಪ್ರೆಶನ್‌ ರದ್ದು ಮಾಡಿ, ಆಧಾರ್‌ ಕಡ್ಡಾಯಗೊಳಿಸಿರುವುದನ್ನು ಬಹುತೇಕ ಶಾಸಕರು ವಿರೋಧಿಸಿದರು. ಆಧಾರ್‌ ಲಿಂಕ್‌ ಆಗದೇ, ಪಡಿತರ ಸಿಗದೇ ಜನ ಪರದಾಡುತ್ತಿದ್ದಾರೆ ಎಂದು ಶಾಸಕರು, ಮುಖಂಡರು ದೂರಿದರು. ಚೆಕ್‌ ಲೀಸ್ಟ್‌ ಮೂಲಕ ಪಡಿತರ ವಿತರಿಸಬೇಕು. ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತಾರಬೇಕಾಗಿ ಬಹುತೇಕ ಶಾಸಕರು ಎಚ್‌ಡಿಕೆ ಅವರಿಗೆ ಮನವಿ ಮಾಡಿದರು. ಸರ್ಕಾರಕ್ಕೆ ಈ ವಿಷಯ ತಲುಪಿಸಿ ಸಮಸ್ಯೆ ಪರಿಹರಿಸುವದಾಗಿ ಎಚ್‌ಡಿಕೆ ಹೇಳಿದರು

ದಂಪತಿ ಸಾವಿಗೆ ಎಚ್‌ಡಿಕೆ ತೀವ್ರ ಬೇಸರ ನಾಗಮಂಗಲದಲ್ಲಿ ದಂಪತಿ ಕೋವಿಡ್‌ನಿಂದ ಸಾವಿಗೀಡಾಗಿದ್ದು, ಮಗು ಅನಾಥವಾದ ಬಗ್ಗೆ ಶಾಸಕ ಸುರೇಶ್‌ಗೌಡ ಅವರಿಂದ ಎಚ್‌ಡಿಕೆ ಮಾಹಿತಿ ಪಡೆದರು. ಸಾವಿಗೆ ತೀವ್ರ ಬೇಸರ ವ್ಯಕ್ತಪಡಿಸಿದರು.

ದಂಪತಿಗೆ ಆಸ್ಪತ್ರೆ ವ್ಯವಸ್ಥೆ ಮಾಡಿದ್ದು, ಚಿಕಿತ್ಸೆ ಕಲ್ಪಿಸಿದ ಪ್ರಯತ್ನಗಳ ಬಗ್ಗೆ ಶಾಸಕ ಸುರೇಶ್‌ಗೌಡ ವಿವರಿಸಿದರು. ಅವರ ಪ್ರಾಣ ಉಳಿಸಲು ಸಾಧ್ಯವಾಗದ್ದಕ್ಕೆ ಶಾಸಕ ಸುರೇಶ್‌ಗೌಡ ಮರುಗಿದರು.

ಕೊವಿಡ್‌ಗೆ ಯುವಕರೇ ಸಾವು: ಸಭೆಯಲ್ಲಿ ತೀವ್ರ ಆತಂಕ ರಾಜ್ಯದಾದ್ಯಂತ ಯುವಕರೇ ಹೆಚ್ಚಾಗಿ ಕೊವಿಡ್‌ಗೆ ಬಲಿಯಾಗುತ್ತಿರುವ ಗಂಭೀರ ವಿಚಾರವನ್ನು ಶಾಸಕರು ಕುಮಾರಸ್ವಾಮಿ ಅವರ ಗಮನಕ್ಕೆ ತಂದರು. ಯುವಕರೇ ಸಾವಿಗೀಡಾಗುತ್ತಿರುವುದು ಏಕೆ ಎಂಬುದರ ಕುರಿತು ಸರ್ಕಾರ ಅಧ್ಯಯನ ನಡೆಸುವ ಅಗತ್ಯವಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾದವು. ಅಲ್ಲದೆ, ಈ ಬಗ್ಗೆ ಯುವ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕಾದ ಅಗತ್ಯವಿರುವುದಾಗಿ ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಡಿಸೆಂಬರ್ ಅಂತ್ಯದೊಳಗೆ ದೇಶದ ಎಲ್ಲರಿಗೂ ಲಸಿಕೆ; ಕ್ಯಾಲೆಂಡರ್ ಆಫ್ ಇವೆಂಟ್ಸ್ ಸಿದ್ಧಪಡಿಸುತ್ತಿರುವ ಕೇಂದ್ರ

ಸೋಶಿಯಲ್​ ಮಿಡಿಯಾದಲ್ಲಿ ಕೊರೊನಾ ಬಗ್ಗೆ ತಪ್ಪು ಸಂದೇಶ ಆರೋಪ; ಡಾ.ರಾಜು ಕ್ಲಿನಿಕ್​ ಲೈಸೆನ್ಸ್​ ರದ್ದುಗೊಳಿಸಲು ನಿರ್ಧಾರ

Published On - 3:41 pm, Mon, 17 May 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು