ಇದು ಕನ್ನಡಿಗರ ಜೀವ, ಜೀವನದ ಪ್ರಶ್ನೆ: ಕರ್ನಾಟಕಕ್ಕೆ ಆಕ್ಸಿಜನ್ ಮಿತಿ ಹೆಚ್ಚಳಕ್ಕೆ ಕೇಂದ್ರದ ಹಿಂದೇಟು, ಎಚ್.ಡಿ.ಕುಮಾರಸ್ವಾಮಿ ಆಕ್ರೋಶ
HD Kumaraswamy: ಉಸಿರನ್ನೇ ಕಿತ್ತುಕೊಳ್ಳುವ ಕೇಂದ್ರದ ಈ ಮಾರಕ ತಾರತಮ್ಯವನ್ನು ಸಹಿಸುವುದಾದರೂ ಹೇಗೆ. ಇದು ಕನ್ನಡಿಗರ ಜೀವ, ಜೀವನದ ಪ್ರಶ್ನೆ ಎಂಬುದನ್ನು ಕೇಂದ್ರ ಸರ್ಕಾರ ಅರಿಯುತ್ತಿಲ್ಲ ಏಕೆ ಎಂದು ಕುಮಾರಸ್ವಾಮಿ ದೂರಿದ್ದಾರೆ.
ಬೆಂಗಳೂರು: ಕರ್ನಾಟಕಕ್ಕೆ ವಿಧಿಸಿರುವ ಆಮ್ಲಜನಕ ಮೀಸಲು ಮಿತಿ ಹೆಚ್ಚಿಸುವಂತೆ ಹೈಕೋರ್ಟ್ ನೀಡಿದ್ದ ತೀರ್ಪನ್ನು ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿ ಪ್ರಶ್ನಿಸಿರುವುದನ್ನು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಆಕ್ಷೇಪಿಸಿದ್ದಾರೆ. ‘ಕರ್ನಾಟಕಕ್ಕೆ ನಿತ್ಯ 1200 ಟನ್ ಆಮ್ಲಜನಕ ಪೂರೈಸುವಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಕರ್ನಾಟಕಕ್ಕೆ ಆಮ್ಲಜನಕ ಪೂರೈಕೆ ಹೆಚ್ಚಿಸಿದರೆ ಆರೋಗ್ಯ ವ್ಯವಸ್ಥೆ ಕುಸಿಯಲಿದೆ’ ಎಂದು ಕೇಂದ್ರ ಸರ್ಕಾರವು ವಾದಿಸಿದೆ. ಕರ್ನಾಟಕದಿಂದ ಎಲ್ಲವನ್ನೂ ಪಡೆದ ಕೇಂದ್ರ ಕರ್ನಾಟಕವನ್ನು ಇನ್ನೆಷ್ಟು ವಂಚಿಸಬೇಕೆಂದಿದೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ರಾಜ್ಯಕ್ಕೆ ನಿತ್ಯ 1700 ಟನ್ ಆಮ್ಲಜನಕದ ಅಗತ್ಯವಿದೆ. ಕನಿಷ್ಠ 1200 ಟನ್ ಆಮ್ಲಜನಕ ಸಿಕ್ಕರೆ ಪರಿಸ್ಥಿತಿ ಹೇಗೋ ನಿಭಾಯಿಸಬಹುದು. ಕರ್ನಾಟಕದಲ್ಲಿ ಹೆಚ್ಚು ಕಡಿಮೆ 1200 ಟನ್‌ಗೂ ಅಧಿಕ ಪ್ರಮಾಣದ ಆಮ್ಲಜನಕ ಉತ್ಪಾದನೆಯಾಗುತ್ತಿದೆ. ಆದರೆ, ನಮ್ಮಿಂದ ಆಮ್ಲಜನಕ ಕಿತ್ತುಕೊಳ್ಳುತ್ತಿರುವ ಕೇಂದ್ರ ಪೂರೈಸುತ್ತಿರುವುದು 865-965 ಟನ್ ಮಾತ್ರ ಎಂದು ಅವರು ಆಕ್ಷೇಪಿಸಿದ್ದಾರೆ.
ಅನುದಾನದಲ್ಲಿ ತಾರತಮ್ಯ, ಜಿಎಸ್‌ಟಿ ಬಾಕಿಯಲ್ಲಿ ತಾರತಮ್ಯ, ನೆರೆ-ಬರ ಪರಿಹಾರದಲ್ಲಿ ಮಾಡಲಾದ ತಾರತಮ್ಯವನ್ನು ಕರ್ನಾಟಕ, ಕನ್ನಡಿಗರು ಹೇಗೋ ಸಹಿಸಿದ್ದಾರೆ. ಆದರೆ, ಉಸಿರನ್ನೇ ಕಿತ್ತುಕೊಳ್ಳುವ ಕೇಂದ್ರದ ಈ ಮಾರಕ ತಾರತಮ್ಯವನ್ನು ಸಹಿಸುವುದಾದರೂ ಹೇಗೆ. ಇದು ಕನ್ನಡಿಗರ ಜೀವ, ಜೀವನದ ಪ್ರಶ್ನೆ ಎಂಬುದನ್ನು ಕೇಂದ್ರ ಸರ್ಕಾರ ಅರಿಯುತ್ತಿಲ್ಲ ಏಕೆ ಎಂದು ಕುಮಾರಸ್ವಾಮಿ ದೂರಿದ್ದಾರೆ.
ಅಷ್ಟಕ್ಕೂ ನಾವು ಅಧಿಕವಾಗಿ ಏನೂ ಕೇಳುತ್ತಿಲ್ಲ. ನಮ್ಮಲ್ಲಿ ಉತ್ಪಾದನೆಯಾಗುತ್ತಿರುವ ಆಮ್ಲಜನಕವನ್ನು ನಮಗೇ ನೀಡಿ ಎಂಬುದು ನಮ್ಮ ಬೇಡಿಕೆ. ನಮ್ಮವರ ಜೀವವನ್ನೇ ಕಿತ್ತು ಗುಜರಾತ್ ಮತ್ತಿತರ ರಾಜ್ಯಗಳ ಜನರ ಜೀವ ಉಳಿಸಬೇಕಾದ ಅನಿವಾರ್ಯತೆ, ತ್ಯಾಗ ಮಾಡಬೇಕಾದ ಸಂದಿಗ್ಧತೆಯಲ್ಲಿ ನಮ್ಮನ್ನು ಸಿಲುಕಿಸಬಾರದು. ಕೇಂದ್ರ ನಮ್ಮ ಪಾಲನ್ನು ನಮಗೆ ನೀಡಲಿ.. 4/5
— H D Kumaraswamy (@hd_kumaraswamy) May 6, 2021
ಅಷ್ಟಕ್ಕೂ ನಾವು ಅಧಿಕವಾಗಿ ಏನೂ ಕೇಳುತ್ತಿಲ್ಲ. ನಮ್ಮಲ್ಲಿ ಉತ್ಪಾದನೆಯಾಗುತ್ತಿರುವ ಆಮ್ಲಜನಕವನ್ನು ನಮಗೇ ನೀಡಿ ಎಂಬುದು ನಮ್ಮ ಬೇಡಿಕೆ. ನಮ್ಮವರ ಜೀವವನ್ನೇ ಕಿತ್ತು ಗುಜರಾತ್ ಮತ್ತಿತರ ರಾಜ್ಯಗಳ ಜನರ ಜೀವ ಉಳಿಸಬೇಕಾದ ಅನಿವಾರ್ಯತೆ, ತ್ಯಾಗ ಮಾಡಬೇಕಾದ ಸಂದಿಗ್ಧತೆಯಲ್ಲಿ ನಮ್ಮನ್ನು ಸಿಲುಕಿಸಬಾರದು. ಕೇಂದ್ರ ನಮ್ಮ ಪಾಲನ್ನು ನಮಗೆ ನೀಡಲಿ ಎಂದು ಕುಮಾರಸ್ವಾಮಿ ರಾಜ್ಯದ ಜನರ ಪರಿಸ್ಥಿತಿಯನ್ನು ವಿವರಿಸಿದ್ದಾರೆ.
ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ಕೇಂದ್ರದ ಇಂಥ ತಾರತಮ್ಯವನ್ನು ಪ್ರಶ್ನಿಸಬೇಕು. ಇಲ್ಲಿವರೆಗೆ ಬಾಯಿಗೆ ಬೀಗ ಹಾಕಿಕೊಂಡಿರುವ ಬಿಜೆಪಿ ಸಂಸದರು ಈಗ ಜನರ ಜೀವ ಉಳಿಸುವುದಕ್ಕಾದರೂ ಬಾಯಿ ಬಿಡಲಿ. ರಾಜ್ಯದಿಂದ ಶಕ್ತಿ ಪಡೆದಿರುವ ಕೇಂದ್ರ ಅದೇ ಶಕ್ತಿಯನ್ನು ಬಳಸಿಕೊಂಡು ರಾಜ್ಯದ ಮೇಲೆ ಗದಾಪ್ರಹಾರ ನಡೆಸುತ್ತಿರುವುದನ್ನು ಜನ ಗಮನಿಸಲಿ.
(JDS Leader HD Kumaraswamy questions Indian govt move to question Karnataka high court order in supreme court)
ಇದನ್ನೂ ಓದಿ: ಕರ್ನಾಟಕದಲ್ಲಿ ಅಮೂಲ್ಯ ಆಕ್ಸಿಜನ್ಗಾಗಿ ಹಾಹಾಕಾರ.. ಜೀವವಾಯು ಇಲ್ಲದೆ ಉಸಿರು ಚೆಲ್ಲುತ್ತಿರುವ ಸೋಂಕಿತರು
Published On - 10:38 pm, Thu, 6 May 21