ರಾಜ್ಯದಲ್ಲಿ ಈಗಿರುವುದು ನಮ್ಮದೇ ಸರ್ಕಾರ; ಜೆಡಿಎಸ್ ವರಿಷ್ಠ ಎಚ್ ಡಿ ಕುಮಾರಸ್ವಾಮಿ ವ್ಯಾಖ್ಯಾನ

TV9 Digital Desk

| Edited By: guruganesh bhat

Updated on: Jul 29, 2021 | 5:20 PM

ಕರ್ನಾಟಕದಲ್ಲಿ ಜೆಡಿಎಸ್​​ ಶಕ್ತಿಯುತವಾಗಿದೆ ಎಂದು ಹಿರಿಯ ಬಿಜೆಪಿ ನಾಯಕರಾಗಿದ್ದ ಅನಂತಕುಮಾರ್ ಅವರ ಪುತ್ರಿ ವಿಜೇತಾ ಹೇಳಿರುವುದಕ್ಕೆ ಲಕ್ಷಾಂತರ ಜೆಡಿಎಸ್ ಕಾರ್ಯಕರ್ತರ ಪರವಾಗಿ ಧನ್ಯವಾದ ಅರ್ಪಿಸುತ್ತೇನೆ ಎಂದು ಜಿಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ರಾಜ್ಯದಲ್ಲಿ ಈಗಿರುವುದು ನಮ್ಮದೇ ಸರ್ಕಾರ; ಜೆಡಿಎಸ್ ವರಿಷ್ಠ ಎಚ್ ಡಿ ಕುಮಾರಸ್ವಾಮಿ ವ್ಯಾಖ್ಯಾನ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಈಗಿರುವ ಸರ್ಕಾರ ಜನತಾ ಪರಿವಾರದ (Janata Parivara) ಸರ್ಕಾರ. ಹೀಗಾಗಿ ಅದು ನಮ್ಮದೇ ಸರ್ಕಾರ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮತ್ತು ನಾನು ಸ್ನೇಹಿತರು. ಅವರು ನಮ್ಮದೇ ಪರಿವಾರದಿಂದ ಬಂದಿರುವವರು. ನಾನು ಸರ್ಕಾರವನ್ನ ಅಸ್ಥಿರಗೊಳಿಸುವುದಿಲ್ಲ. ಬಿ.ಎಸ್. ಯಡಿಯೂರಪ್ಪರಿಗೂ (BS Yediyurappa) ನಾವು ಎಲ್ಲ ಸಹಕಾರ ನೀಡಿದ್ದೆವು. ಕಾನೂನು ವಿರೋಧಿ ಚಟುವಟಿಕೆಗಳನ್ನು ಹೊರತುಪಡಿಸಿ ಸರ್ಕಾರದ ಒಳ್ಳೆಯ ಕೆಲಸಗಳಿಗೆ ಸಹಕಾರ ನೀಡುತ್ತೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ, ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ (HD Kumaraswamy) ತಿಳಿಸಿದರು.

ಇದೇ ವೇಳೆ ಹಿರಿಯ ಬಿಜೆಪಿ ನಾಯಕರಾಗಿದ್ದ ದಿವಂಗತ ಅನಂತಕುಮಾರ್ ಅವರ ಪುತ್ರಿ ವಿಜೇತಾ ಅವರು ರಾಜ್ಯದಲ್ಲಿ ಜೆಡಿಎಸ್ ಇನ್ನೂ ಬಲಿಷ್ಠವಾಗಿದೆ ಎಂದು ಟ್ವೀಟ್ ಮಾಡಿರುವ ಕುರಿತೂ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿ ಧನ್ಯವಾದ ಅರ್ಪಿಸಿದ್ದಾರೆ. ರಾಜ್ಯ ರಾಜಕಾರಣದ ಈ ಪರಿಸ್ಥಿತಿಯಲ್ಲಿ ಜೆಡಿಎಸ್​ ಬಗ್ಗೆ ಇಂತಹ ಹೇಳಿಕೆಗೆ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರ ಹೇಳಿಕೆ ಪಕ್ಷಕ್ಕೆ ಒಂದು ರೀತಿಯಲ್ಲಿ ಉತ್ಸಾಹ ತುಂಬಿದೆ. ಕರ್ನಾಟಕದಲ್ಲಿ ಜೆಡಿಎಸ್​​ ಶಕ್ತಿಯುತವಾಗಿದೆ ಎಂದು ಅವರು ಹೇಳಿರುವುದಕ್ಕೆ ಲಕ್ಷಾಂತರ ಜೆಡಿಎಸ್ ಕಾರ್ಯಕರ್ತರ ಪರವಾಗಿ ಧನ್ಯವಾದ ಅರ್ಪಿಸುತ್ತೇನೆ ಎಂದು ಜಿಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಧನ್ಯವಾದ ಅರ್ಪಿಸಿದ್ದಾರೆ.

ರಾಜ್ಯ ರಾಜಕೀಯ ನಿಜವಾಗಿ ಏಕೆ ಆಸಕ್ತಿದಾಯಕವಾಗಿದೆ ಎಂದು ಪ್ರಶ್ನಿಸಿದ್ದ ಬಿಜೆಪಿ ಹಿರಿಯ ನಾಯಕ ಅನಂತಕುಮಾರ್ ಅವರ ಮಗಳು ವಿಜೇತಾ ಅವರು, ರಾಜ್ಯದಲ್ಲಿ ಜೆಡಿಎಸ್ ಇನ್ನೂ ಪ್ರಾಬಲ್ಯ ಹೊಂದಿದೆ ಎಂದು ಟ್ವೀಟ್ ಮಾಡಿದ್ದರು. ಅವರ ಟ್ವೀಟ್ ಕುತೂಹಲ ಹುಟ್ಟಿಸಿದ್ದಲ್ಲದ್ದೇ, ವಿಜೇತಾ ಅನಂತಕುಮಾರ್ ಜೆಡಿಎಸ್​ನತ್ತ ಆಸಕ್ತಿ ಹೊಂದಿದ್ದಾರೆಯೇ ಎಂಬ ಪ್ರಶ್ನೆ ಸಹ ಕೆಲವರ ಹುಟ್ಟಿತ್ತು.

ಇದನ್ನೂ ಓದಿ: JDS: ರಾಜ್ಯದಲ್ಲಿ ಜೆಡಿಎಸ್ ಇನ್ನೂ ಬಲಿಷ್ಠವಾಗಿದೆ; ಬಿಜೆಪಿ ನಾಯಕ ಅನಂತಕುಮಾರ್ ಪುತ್ರಿ ವಿಜೇತಾ ಟ್ವೀಟ್

Siddaramaiah: ಗಾಂಧೀಜಿ ಮಗ ಕುಡುಕನಾಗಲಿಲ್ವ?; ಬಸವರಾಜ​ ಬೊಮ್ಮಾಯಿಗೂ ಅಪ್ಪನ ಗುಣ ಇರುತ್ತದೆ ಎನ್ನಲಾಗದು ಎಂದ ಸಿದ್ದರಾಮಯ್ಯ

(JDS leader HD Kumaraswamy says CM Basavaraj Bommai govt is our own government now and thanks to Vijetha Ananth Kumar for her tweet)

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada