AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ, ಐಸಿಯುನಿಂದ ವಾರ್ಡ್​ಗೆ ಶಿಫ್ಟ್, 1 ಕಂಡೀಷನ್ ಹಾಕಿದ ವೈದ್ಯರು

ಬೆಂಗಳೂರಿನ ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಐಸಿಯುನಿಂದ ವಾರ್ಡ್​ಗೆ ಶಿಫ್ಟ್ ಮಾಡಲಾಗಿದೆ. ಆದ್ರೆ, ವೈದ್ಯರು ಕುಮಾರಸ್ವಾಮಿ ಅವರಿಗೆ ಮಹತ್ವದ ಒಂದು ಸಲಹೆ ನೀಡಿದ್ದಾರೆ.

ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ, ಐಸಿಯುನಿಂದ ವಾರ್ಡ್​ಗೆ ಶಿಫ್ಟ್, 1 ಕಂಡೀಷನ್ ಹಾಕಿದ ವೈದ್ಯರು
ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
Sunil MH
| Edited By: |

Updated on: Aug 31, 2023 | 11:13 AM

Share

ಬೆಂಗಳೂರು, (ಆಗಸ್ಟ್ 31): ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ(HD Kumaraswamy) ಅವರನ್ನು ಐಸಿಯುನಿಂದ ವಾರ್ಡ್​ಗೆ ಶಿಫ್ಟ್ ಮಾಡಲಾಗಿದೆ. ಅನಾರೋಗ್ಯ ಕಾರಣದಿಂದ ನಿನ್ನೆ (ಆಗಸ್ಟ್ 30) ಬೆಂಗಳೂರಿನ ಜಯನಗರ ಅಪೋಲೊ ಆಸ್ಪತ್ರೆ ದಾಖಲಾಗಿದ್ದ ಕುಮಾರಸ್ವಾಮಿ ಅವರನ್ನು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದ್ರೆ, ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಕುಮಾರಸ್ವಾಮಿಯವರನ್ನು ಇಂದು (ಆಗಸ್ಟ್ 31) ಐಸಿಯುನಿಂದ ವಾರ್ಡ್​ಗೆ ಸ್ಥಳಾಂತರ ಮಾಡಲಾಗಿದೆ. ಮೂರು ದಿನಗಳ ಕಾಲ ವಾರ್ಡ್​​ನಲ್ಲೇ ಚಿಕಿತ್ಸೆ ಮುಂದುವರೆಯಲಿದ್ದು, ಯಾರನ್ನೂ ಭೇಟಿ ಮಾಡದಂತೆವೈದರು ಕುಮಾರಸ್ವಾಮಿಗೆ ಸಲಹೆ ನೀಡಿದ್ದಾರೆ.

ಇನ್ನು ತಂದೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ವಿಷಯ ಕೇಳಿ ವಿದೇಶ ಪ್ರವಾಸದಲ್ಲಿದ್ದ ನಿಖಿಲ್​ ಕುಮಾರಸ್ವಾಮಿ, ಇಂದು ಬೆಂಗಳೂರಿಗೆ ವಾಪಸ್ ಆಗಿದ್ದು, ಅಪೋಲೊ ಆಸ್ಪತ್ರೆಗೆ ಭೇಟಿ ನೀಡಿ ತಂದೆಯ ಆರೋಗ್ಯ ವಿಚಾರಿಸಿದರು. ಇನ್ನು ನಿರ್ಮಲಾನಂದ ಸ್ವಾಮಿಗಳು ಸಹ ಆಸ್ಪತ್ರೆಗೆ ಭೇಟಿ ನೀಡಿ ಕುಮಾರಸ್ವಾಮಿಯವರ ಆರೋಗ್ಯ ವಿಚಾರಿಸಿದರು.

ಇದನ್ನೂ ಓದಿ: ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿಯವರಿಗೆ ಬಲಭಾಗಕ್ಕೆ ಮೈಲ್ಡ್‌ ಸ್ಟ್ರೋಕ್ ಆಗಿತ್ತು: ವೈದ್ಯ ಡಾ ಸತೀಶ್​

ಕುಮಾರಸ್ವಾಮಿ ಅವರನ್ನು ನಿನ್ನೆ (ಆ.30) ನಸುಕಿನ 3.40ರ ಸುಮಾರಿಗೆ ಜಯನಗರದ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಾ.ಸತೀಶ್‌ ಚಂದ್ರ ಮತ್ತು ಅವರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಕುಮಾರಸ್ವಾಮಿ ಅವರಿಗೆ ಲಘುವಾದ ಸ್ಟ್ರೋಕ್ ಆಗಿದ್ದು, ಮಿದುಳಿನ ಎಡಭಾಗದಲ್ಲಿ ತೊಂದರೆ ಉಂಟಾಗಿ ಶರೀರದ ಬಲಭಾಗಕ್ಕೆ ಸಮಸ್ಯೆ ಆಗಿತ್ತು. ಈಗ ಎಲ್ಲ ಸರಿಯಾಗಿದೆ. ಚಿಕಿತ್ಸೆ ಮುಂದುವರಿದಿದ್ದು, ಚೆನ್ನಾಗಿ ಮಾತು ಕೂಡ ಆಡುತ್ತಿದ್ದಾರೆ. ಹೃದಯ ಬಡಿತ, ರಕ್ತದೊತ್ತಡ ಎಲ್ಲವೂ ಉತ್ತಮವಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಡಾ.ಸತೀಶ್​ಚಂದ್ರ ಸಂಜೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?