ಬೆಂಗಳೂರು, (ಆಗಸ್ಟ್ 31): ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ(HD Kumaraswamy) ಅವರನ್ನು ಐಸಿಯುನಿಂದ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ. ಅನಾರೋಗ್ಯ ಕಾರಣದಿಂದ ನಿನ್ನೆ (ಆಗಸ್ಟ್ 30) ಬೆಂಗಳೂರಿನ ಜಯನಗರ ಅಪೋಲೊ ಆಸ್ಪತ್ರೆ ದಾಖಲಾಗಿದ್ದ ಕುಮಾರಸ್ವಾಮಿ ಅವರನ್ನು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದ್ರೆ, ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಕುಮಾರಸ್ವಾಮಿಯವರನ್ನು ಇಂದು (ಆಗಸ್ಟ್ 31) ಐಸಿಯುನಿಂದ ವಾರ್ಡ್ಗೆ ಸ್ಥಳಾಂತರ ಮಾಡಲಾಗಿದೆ. ಮೂರು ದಿನಗಳ ಕಾಲ ವಾರ್ಡ್ನಲ್ಲೇ ಚಿಕಿತ್ಸೆ ಮುಂದುವರೆಯಲಿದ್ದು, ಯಾರನ್ನೂ ಭೇಟಿ ಮಾಡದಂತೆವೈದರು ಕುಮಾರಸ್ವಾಮಿಗೆ ಸಲಹೆ ನೀಡಿದ್ದಾರೆ.
ಇನ್ನು ತಂದೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ವಿಷಯ ಕೇಳಿ ವಿದೇಶ ಪ್ರವಾಸದಲ್ಲಿದ್ದ ನಿಖಿಲ್ ಕುಮಾರಸ್ವಾಮಿ, ಇಂದು ಬೆಂಗಳೂರಿಗೆ ವಾಪಸ್ ಆಗಿದ್ದು, ಅಪೋಲೊ ಆಸ್ಪತ್ರೆಗೆ ಭೇಟಿ ನೀಡಿ ತಂದೆಯ ಆರೋಗ್ಯ ವಿಚಾರಿಸಿದರು. ಇನ್ನು ನಿರ್ಮಲಾನಂದ ಸ್ವಾಮಿಗಳು ಸಹ ಆಸ್ಪತ್ರೆಗೆ ಭೇಟಿ ನೀಡಿ ಕುಮಾರಸ್ವಾಮಿಯವರ ಆರೋಗ್ಯ ವಿಚಾರಿಸಿದರು.
ಇದನ್ನೂ ಓದಿ: ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿಯವರಿಗೆ ಬಲಭಾಗಕ್ಕೆ ಮೈಲ್ಡ್ ಸ್ಟ್ರೋಕ್ ಆಗಿತ್ತು: ವೈದ್ಯ ಡಾ ಸತೀಶ್
ಕುಮಾರಸ್ವಾಮಿ ಅವರನ್ನು ನಿನ್ನೆ (ಆ.30) ನಸುಕಿನ 3.40ರ ಸುಮಾರಿಗೆ ಜಯನಗರದ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಾ.ಸತೀಶ್ ಚಂದ್ರ ಮತ್ತು ಅವರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಕುಮಾರಸ್ವಾಮಿ ಅವರಿಗೆ ಲಘುವಾದ ಸ್ಟ್ರೋಕ್ ಆಗಿದ್ದು, ಮಿದುಳಿನ ಎಡಭಾಗದಲ್ಲಿ ತೊಂದರೆ ಉಂಟಾಗಿ ಶರೀರದ ಬಲಭಾಗಕ್ಕೆ ಸಮಸ್ಯೆ ಆಗಿತ್ತು. ಈಗ ಎಲ್ಲ ಸರಿಯಾಗಿದೆ. ಚಿಕಿತ್ಸೆ ಮುಂದುವರಿದಿದ್ದು, ಚೆನ್ನಾಗಿ ಮಾತು ಕೂಡ ಆಡುತ್ತಿದ್ದಾರೆ. ಹೃದಯ ಬಡಿತ, ರಕ್ತದೊತ್ತಡ ಎಲ್ಲವೂ ಉತ್ತಮವಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಡಾ.ಸತೀಶ್ಚಂದ್ರ ಸಂಜೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು.
ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ