ಬೆಂಗಳೂರು, (ಮೇ 28): ತಮ್ಮ ವಿರುದ್ಧ ದಾಖಲಾಗಿರುವ ಎರಡು ಎಫ್ಐಆರ್ ರದ್ದುಪಡಿಸುವಂತೆ ಕೋರಿ ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ (HD Revanna) ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹೊಳೆನರಸೀಪುರದಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ (Prajwal Revanna Case), ಕೆ.ಆರ್.ನಗರದ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣವನ್ನು ರದ್ದು ಕೋರಿ ರೇವಣ್ಣ ಪರ ವಕೀಲರು ಇಂದು (ಮೇ 28) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಹಾಸನದ ಹೊಳೆನರಸೀಪುರದಲ್ಲಿ ಲೈಂಗಿಕ ದೌರ್ಜನ್ಯ ಕೇಸ್ ಹಾಗೂ ಮೈಸೂರಿನ ಕೆಆರ್ ಪೇಟೆ ಸಂತ್ರಸ್ತೆ ಅಪಹರಣ ಪ್ರಕರಣ ದಾಖಲಾಗಿವೆ. ಇದೀಗ ತಮ್ಮ ವಿರುದ್ಧ ದಾಖಲಾದ ಈ ಎರಡೂ ಎಫ್‌ಐಆರ್‌ಗಳನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ಗೆ ಮಾಜಿ ಸಚಿವ ಎಚ್.ಡಿ ರೇವಣ್ಣ ಪ್ರಕರಣಗಳಲ್ಲಿ ಹುರುಳಿಲ್ಲ, ಇದು ರಾಜಕೀಯ ಪ್ರೇರಿತವಾಗಿದೆ. ಹೀಗಾಗಿ ಎಫ್‌ಐಆರ್‌ಗಳನ್ನು ರದ್ದು ಮಾಡಬೇಕು ಎಂದು ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ: 1 ತಿಂಗ್ಳು ಬಳಿಕ ಪ್ರಜ್ವಲ್ ಪ್ರತ್ಯಕ್ಷ, ಏ.21ರಿಂದ ಮೇ 27ರ ವರೆಗಿನ ಕೇಸ್ ಡಿಟೇಲ್ಸ್ ಇಲ್ಲಿದೆ
ಇತ್ತೀಚೆಗೆ ಕೆ.ಆರ್.ನಗರದ ಸಂತ್ರಸ್ತೆಯ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿ ರೇವಣ್ಣ ಅವರನ್ನು ಎಸ್ಐಟಿ ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿತ್ತು. ಆರು ದಿನಗಳ ನಿರಂತರ ಕಾನೂನು ಹೋರಾಟ ಮಾಡಿ ಮೇ 13ರಂದು ಜಾಮೀನು ಪಡೆದುಕೊಂಡು ಜೈಲಿನಿಂದ ಆಚೆ ಬಂದಿದ್ದರು. ನಂತರ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರಿಗೆ ಮೇ 20ರಂದು ಜಾಮೀನು ಮಂಜೂರಾಗಿತ್ತು. ಇದೀಗ ಎರಡು ಎಫ್‌ಐಆರ್ ರದ್ದು ಮಾಡುವಂತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಹೊಳೆನರಸೀಪುರದಲ್ಲಿ ದಾಖಲಾಗಿರುವ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್‌ಡಿ ರೇವಣ್ಣ ಎ1 ಆರೋಪಿಯಾಗಿದ್ದರೆ, ಅವರ ಪುತ್ರ ಪ್ರಜ್ವಲ್ ರೇವಣ್ಣ ಎರಡನೇ ಆರೋಪಿಯಾಗಿದ್ದಾರೆ. ಇನ್ನು ಕೆಆರ್ಪೇಟೆಯಲ್ಲಿ ದಾಖಲಾಗಿರುವ ,ಮಹಿಳೆಯ ಅಪಹರಣ ಪ್ರಕರಣದಲ್ಲಿ ರೇವಣ್ಣ ಸಹ ಆರೋಪಿಯಾಗಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:00 pm, Tue, 28 May 24