AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡ್ನಾಪ್ ಕೇಸ್: ಹೆಚ್​ಡಿ ರೇವಣ್ಣ ನಾಲ್ಕು ದಿನ ಎಸ್ಐಟಿ ಕಸ್ಟಡಿಗೆ!

ಮಾಜಿ ಸಚಿವ ಹೆಚ್​ಡಿ ರೇವಣ್ಣ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಎ1 ಆಗಿದ್ದಾರೆ. ಲೈಂಗಿಕ ದೌರ್ಜನ್ಯ ಒಳಗಾದ ಸಂತ್ರಸ್ತೆಯನ್ನು ಅಪಹರಿಸಲಾಗಿತ್ತು. ಈ ಪ್ರಕರಣದಲ್ಲಿ ಹೆಚ್​ಡಿ ರೇವಣ್ಣ ಅವರ ಕೈವಾಡವಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಎಸ್​ಐಟಿ ಅಧಿಕಾರಿಗಳು ಹೆಚ್​ಡಿ ರೇವಣ್ಣ ಅವರನ್ನು ಬಂಧಿಸಿದ್ದಾರೆ. ಸದ್ಯ ಹೆಚ್​ಡಿ ರೇವಣ್ಣ ಅವರನ್ನು ಅಧಿಕಾರಿಗಳು ನಾಯಾಧೀಶರ ಎದುರು ಹಾಜರುಪಡಿಸಲಾಗಿದ್ದು, ಎಸ್​ಐಟಿ ಕಸ್ಟಡಿಗೆ ನೀಡಲಾಗಿದೆ.

ಕಿಡ್ನಾಪ್ ಕೇಸ್: ಹೆಚ್​ಡಿ ರೇವಣ್ಣ ನಾಲ್ಕು ದಿನ ಎಸ್ಐಟಿ ಕಸ್ಟಡಿಗೆ!
ಎಚ್​ಡಿ ರೇವಣ್ಣ
TV9 Web
| Edited By: |

Updated on:May 05, 2024 | 8:31 PM

Share

ಬೆಂಗಳೂರು, (ಮೇ 05): ಸಂತ್ರಸ್ತೆ ಮಹಿಳೆ ಅಪಹರಣ ಪ್ರಕರಣಕ್ಕೆ (Woman Kidnap Case) ಸಂಬಂಧಿಸಿದಂತೆ ಜೆಡಿಎಸ್​ ಶಾಸಕ ಎಚ್​ಡಿ ರೇವಣ್ಣ (HD Revanna) ಅವರಿಗೆ ಕೋರ್ಟ್ ಐದು ದಿನ ಎಸ್​ಐಟಿ ಕಸ್ಟಡಿಗೆ ನೀಡಿದೆ. ನಿನ್ನೆ (ಮೇ 04) ಜನಪ್ರತಿನಿಧಿ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ತಿರಸ್ಕೃತವಾದ ಬೆನ್ನಲ್ಲೇ ಎಸ್​ಐಟಿ ಅಧಿಕಾರಿಗಳು ಎಚ್​ಡಿ ರೇವಣ್ಣ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು. ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಅವರ ಪದ್ಮನಾಭನಗರ ನಿವಾಸಕ್ಕೆ ತೆರಳಿ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಬಳಿಕ ಎಸ್​ಐಟಿ ಕಚೇರಿಯಲ್ಲಿ ರೇವಣ್ಣ ಅವರನ್ನು ವಿಚಾರಣೆ ಮಾಡಿದ್ದು, ಇದೀಗ ಇಂದು (ಮೇ 05) ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯ್ತು. ಇವತ್ತು ಭಾನುವಾರ ಆಗಿದ್ದರಿಂದ ಕೋರಮಂಗದಲ್ಲಿರುವ ನಿವಾಸದಲ್ಲೇ 17ನೇ ಎಸಿಎಂಎಂ ನ್ಯಾಯಾಧೀಶ ರವೀಂದ್ರ ಕಟ್ಟಿಮನಿ​ ಮುಂದೆ ಹಾಜರುಪಡಿಸಿದರು. ಈ ವೇಳೆ ನ್ಯಾಯಾಧೀಶರು ಆರೋಪ ರೇವಣ್ಣ ಅವರನ್ನು ನಾಲ್ಕು ದಿನ ಎಸ್​​ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು. ಪ್ರತಿ ದಿನ 9.30 ರಿಂದ 10.30 ರ ವರೆಗೂ ಲಾಯರ್ ಬೇಟಿಗೆ ಅವಕಾಶ ನೀಡಲಾಗಿದೆ. ಹಾಗೆ ಉತ್ತಮ ಆಹಾರ ವ್ಯವಸ್ಥೆ ಒದಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಏನಿದು ಕಿಡ್ನಾಪ್ ಕೇಸ್?

ವ್ಯಕ್ತಿಯೊಬ್ಬರು ತನ್ನ ತಾಯಿ ನಾಪತ್ತೆಯಾಗಿದ್ದಾರೆ. ಬಿಡುಗಡೆಯಾದ ಅಶ್ಲೀಲ ವಿಡಿಯೊದಲ್ಲಿ ಅವರ ಚಿತ್ರವೂ ಇತ್ತು, ಬಳಿಕ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್​​ ನಗರ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ಸಂಬಂಧ ರೇವಣ್ಣ ಪತ್ನಿ ಭವಾನಿಯವರ ಸಂಬಂಧಿಯೂ ಆಗಿರುವ ಸತೀಶ್ ಬಾಬು ಎಂಬವರನ್ನು ಈಗಾಗಲೇ ಎಸ್​ಐಟಿ ಬಂಧಿಸಿದೆ. ಇವರನ್ನು ಆರೋಪಿ ಸಂಖ್ಯೆ 2 ಎಂದು ಎಸ್​ಐಟಿ ಗುರುತಿಸಿದೆ. ರೇವಣ್ಣ ಮೊದಲ ಆರೋಪಿಯಾಗಿದ್ದಾರೆ. ಸಂತ್ರಸ್ತೆಯ 20 ವರ್ಷದ ಪುತ್ರ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಸಂತ್ರಸ್ತೆ ಅಪಹರಣ ಪ್ರಕರಣ, ಇದು ರಾಜಕೀಯ ಷಡ್ಯಂತ್ರ, ಬಂಧನ ಬಳಿಕ ಹೆಚ್​ಡಿ ರೇವಣ್ಣ ಫಸ್ಟ್​ ರಿಯಾಕ್ಷನ್

ಮಹಿಳೆಯ ಪತ್ತೆಗಾಗಿ ನಂತರ ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳು ಮತ್ತು ಬೆಂಗಳೂರು ನಗರ ಸೇರಿದಂತೆ ವಿವಿಧಡೆ ಪರಿಶೀಲನೆ ನಡೆಸಲಾಗಿತ್ತು. ಬಳಿಕ ಇಂದು ಸಂಜೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ರೇವಣ್ಣಗೆ ಎಸ್​​ಐಟಿ ಮೂರನೇ ನೋಟಿಸ್ ನೀಡಿತ್ತು. ಇದೀಗ ಅವರನ್ನು ಬಂಧಿಸಲಾಗಿತ್ತು.

ಇನ್ನು ಕಿಡ್ನ್ಯಾಪ್ ಆದ ಮಹಿಳೆ ರೇವಣ್ಣ ಅವರ ಆಪ್ತನ ತೋಟದ ಮನೆಯಲ್ಲಿ ಪತ್ತೆಯಾಗಿದ್ದು. ಬಳಿಕ ಎಸ್​ಐಟಿ ಅಧಿಕಾರಿಗಳು ಮಹಿಳೆಯನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ವಿಚಾರಣೆಗೊಳಪಡಿಸಿದ್ದಾರೆ. ಆದ್ರೆ, ಮಹಿಳೆ ಎಸ್​ಐಟಿ ಅಧಿಕಾರಿಗಳ ಮುಂದೆ ಗೊಂದಲದ ಹೇಳಿಕೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಹೊಳೆನರಸೀಪುರದಲ್ಲಿ ನೀರವ ಮೌನ

ಮಾಜಿ ಸಚಿವ ರೇವಣ್ಣ ಬಂಧನದ ಬಳಿಕ ಹೊಳೆನರಸೀಪುರದಲ್ಲಿ ನೀರವ ಮೌನ ಆವರಿಸಿದೆ. ಸದಾ ಜನರಿಂದ ತುಂಬಿರುತ್ತಿದ್ದ ರೇವಣ್ಣರ ಹೊಳೆನರಸೀಪುರದ ಮನೆ ಖಾಲಿ ಖಾಲಿ ಎನಿಸಿದೆ. ಸದ್ಯ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಮನೆಯಲ್ಲಿಯೇ ಇದ್ದಾರೆ. ಶನಿವಾರ ರೇವಣ್ಣ ಅವರ ಮನೆಯಲ್ಲಿ ಮಹಜರು ನಡೆಸಿದ್ದ ಎಸ್‌ಐಟಿ ತಂಡ ವಶಕ್ಕೆ ಪಡೆದಿತ್ತು. ಹಾಸನ ರಸ್ತೆಯಲ್ಲಿ ರೇವಣ್ಣ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಒಂದು ಕೆಎಸ್ಆರ್‌ಪಿ ತುಕಡಿಯನ್ನ ಮನೆ ಬಳಿ ನಿಯೋಜನೆ ಮಾಡಿ ಭದ್ರತೆ ಖಚಿತಪಡಿಸಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 8:08 pm, Sun, 5 May 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್