ರೋಹಿಣಿ ಸಿಂಧೂರಿಗೆ ತಾಯಿ ಹೃದಯವಿದ್ದರೆ ತಮ್ಮ ಮನಸ್ಸಾಕ್ಷಿ ಪ್ರಶ್ನಿಸಿಕೊಳ್ಳಲಿ: ಜೆಡಿಎಸ್ ಶಾಸಕ ಸಾ.ರಾ.ಮಹೇಶ್
ಹಲಸೂರು ಕೆರೆಗೆ ಮಾತ್ರ 60 ಮೀಟರ್ ಬಫರ್ ಝೋನ್ ಇದ್ದು, ಉಳಿದ ಎಲ್ಲೆಡೆ 30 ಮೀಟರ್ ಬಫರ್ ಝೋನ್ ಅನ್ವಯವಾಗುತ್ತದೆ. ಈ ಬಗ್ಗೆ ನ್ಯಾಯಾಲಯವೇ ತೀರ್ಪು ನೀಡಿದೆ. ನ್ಯಾಯಾಲಯದ ತೀರ್ಪನ್ನು ಈ ಹಿಂದಿನ ಡಿಸಿ ರೋಹಿಣಿ ಸಿಂಧೂರಿ ಓದಿಲ್ಲವೇ?: ಶಾಸಕ ಸಾ.ರಾ.ಮಹೇಶ್
ಮೈಸೂರು: ಮೈಸೂರು ನಗರದ ಲಿಂಗಾಬುದಿ ಕೆರೆ ಬಳಿ ಅಕ್ರಮ ಮಾಡಿದ ಆರೋಪ ವಿಚಾರವಾಗಿ ಇಂದು ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಸುದ್ದಿಗೋಷ್ಠಿ ಕರೆದು ತಮ್ಮ ಮೇಲೆ ಕೇಳಿಬಂದಿದ್ದ ಆರೋಪಗಳನ್ನು ಅಲ್ಲಗಳೆದಿದ್ದಾರೆ. ನನ್ನ ಪತ್ನಿ ಹೆಸರಲ್ಲಿ ಎರಡು ಎಕರೆ ಅಲ್ಲ, ನಾಲ್ಕು ಎಕರೆ ಭೂಮಿ ಇದೆ. ಆದರೆ, ಈ ಭೂಮಿಯನ್ನು 30 ವರ್ಷದ ಹಿಂದೆಯೇ ಖರೀದಿ ಮಾಡಿದ್ದೆ. ನಾನು ರಾಜಕಾಲುವೆ ಅಥವಾ ಹಳ್ಳದ ಮೇಲೆ ಕಟ್ಟಡ ಕಟ್ಟಿದ್ದರೆ ರಾಜ್ಯಪಾಲರಿಗೆ ನೀಡುವೆ. ಸಾರ್ವಜನಿಕ ಜೀವನದಿಂದ ನಿವೃತ್ತಿಯಾಗುವೆ. ನೀವು ಐಎಎಸ್ ಹುದ್ದೆಗೆ ರಾಜೀನಾಮೆ ಕೊಡ್ತೀರಾ? ಎಂದು ಶಾಸಕ ಸಾ.ರಾ.ಮಹೇಶ್ ಪ್ರಶ್ನಿಸಿದ್ದಾರೆ.
ಈ ರೀತಿಯ ಅಧಿಕಾರಿಯನ್ನು ನಾನು ಜೀವನದಲ್ಲಿ ನೋಡಿಲ್ಲ. ಕೆಲವು ಸಾಮಾಜಿಕ ಜಾಲತಾಣ ಬಳಸಿಕೊಂಡು ಕಮ್ ಬ್ಯಾಕ್ ಅಂತಾ ಶೇರ್ ಟ್ರೆಂಡ್ ಮಾಡುತ್ತಿದ್ದಾರೆ ಎಂದು ರೋಹಿಣಿ ಕಮ್ ಬ್ಯಾಕ್‌ಗೆ ಅಭಿಯಾನವನ್ನು ಶಾಸಕ ಸಾ.ರಾ.ಮಹೇಶ್ ವ್ಯಂಗ್ಯ ಮಾಡಿದ್ದಾರೆ. ರೋಹಿಣಿ ಸಿಂಧೂರಿ ಅವರಿಗೆ ಮನಸಾಕ್ಷಿ, ಆತ್ಮಸಾಕ್ಷಿ ಅಥವಾ ತಾಯಿ ಹೃದಯ ಇದ್ದರೆ ಒಮ್ಮೆ ಕುಳಿತುಕೊಂಡು ಮನಸಾಕ್ಷಿಯನ್ನು ಕೇಳಿಕೊಳ್ಳಬೇಕು ಎಂದು ಅವರು ರೋಹಿಣಿ ಸಿಂಧೂರಿ ಅವರ ಮೇಲೆ ಹರಿಹಾಯ್ದಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ ಕೊರೊನಾದಿಂದ 5 ಸಾವಿರ ಜನ ಸಾವನ್ನಪ್ಪಿದ್ದಾರೆ. ಆದರೆ ಮೈಸೂರಿನಲ್ಲಿ 2 ಸಾವಿರಕ್ಕೂ ಹೆಚ್ಚು ಕೊವಿಡ್ ಸಾವನ್ನು ಮುಚ್ಚಿಡಲಾಗಿದೆ ಎಂದು ಅವರು ಆರೋಪಿಸಿದರು.
ನಾನು ಖರೀದಿಸಿರುವ ಭೂಮಿಗೆ ಅರಣ್ಯ ಇಲಾಖೆಯವರೇ ಗಡಿ ನಿಗದಿ ಮಾಡಿದ್ದಾರೆ. ಉಳಿಕೆ ಜಾಗದಲ್ಲಿ ತೆಂಗು ಮತ್ತು ಅಡಿಕೆ ಬೆಳೆದಿದ್ದೇನೆ. ಇದನ್ನು ಕಮರ್ಷಿಯಲ್ ಬದಲಾವಣೆಗೆ ಶುಲ್ಕ ಕಟ್ಟಿದ್ದೇನೆ. ಅಲ್ಲಿ ಯಾವುದೇ ಕಟ್ಟಡ ಕಟ್ಟಿಲ್ಲ, ಅಲ್ಲಿ ಖಾಲಿ ಜಾಗ ಇದೆ. 2018ರ ಕಾಯ್ದೆ ಪ್ರಕಾರ 30 ಮೀಟರ್ ಬಫರ್ ಝೋನ್ ಇದ್ದು, ಅದರಲ್ಲಿ ಮನೆ, ವಾಣಿಜ್ಯ ಚಟುವಟಿಕೆಗೆ ಅವಕಾಶವಿಲ್ಲ. ಹಲಸೂರು ಕೆರೆಗೆ ಮಾತ್ರ 60 ಮೀಟರ್ ಬಫರ್ ಝೋನ್ ಇದ್ದು, ಉಳಿದ ಎಲ್ಲೆಡೆ 30 ಮೀಟರ್ ಬಫರ್ ಝೋನ್ ಅನ್ವಯವಾಗುತ್ತದೆ. ಈ ಬಗ್ಗೆ ನ್ಯಾಯಾಲಯವೇ ತೀರ್ಪು ನೀಡಿದೆ. ನ್ಯಾಯಾಲಯದ ತೀರ್ಪನ್ನು ಈ ಹಿಂದಿನ ಡಿಸಿ ರೋಹಿಣಿ ಸಿಂಧೂರಿ ಓದಿಲ್ಲವೇ? ಮೈಸೂರಿನ ಈ ಹಿಂದಿನ ಜಿಲ್ಲಾಧಿಕಾರಿ ಐಎಎಸ್ ಓದಿಲ್ವಾ? ಅಥವಾ ನ್ಯಾಯಾಲಯದ ಈ ಆದೇಶ ಗೊತ್ತಿದ್ದೂ ಕೊಡಲು ಮಾಡಿದ್ರಾ? ಎಂದು ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಪ್ರಶ್ನಿಸಿದ್ದಾರೆ.
ಸಾಮಾಜಿಕ ಕಾರ್ಯಕರ್ತನನ್ನ ಮನೆಗೆ ಕರೆಸಿಕೊಂಡು ರೋಹಿಣಿ ಸಿಂಧೂರಿ ಕೆಲ ದಾಖಲೆ ಪತ್ರ ಪಡೆದಿದ್ದಾರೆ. 4 ಆರೋಪಗಳ ಪೈಕಿ ಎರಡು ನೇರವಾಗಿ ನನಗೆ ಸಂಬಂಧಿಸಿದ್ದಾಗಿದ್ದು, ಪ್ರಾದೇಶಿಕ ಆಯುಕ್ತರಿಗೆ ಜೂನ್ 5ರಂದು ಪತ್ರ ಬರೆದಿದ್ದಾರೆ. ಪತ್ರ ಹೋಗಬೇಕಾದರೆ ಎಡಿಸಿ ಟಪಾಲಿನಲ್ಲಿ ಸಹಿ ಆಗಬೇಕು. ಆದರೆ ಇದಲ್ಲಿ ಕಡತವನ್ನು ಮನೆಗೆ ತರಿಸಿಕೊಂಡು ಸಹಿ ಮಾಡಿದ್ದಾರೆ ಎಂದು ಮೈಸೂರಿನಲ್ಲಿ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಆರೋಪಿಸಿದ್ದಾರೆ.
ಇದನ್ನೂ ಓದಿ: ಮಂಡ್ಯದಲ್ಲಿನ ಹಾಲಿಗೆ ನೀರು ಬೆರೆಸಿ ವಂಚನೆ ಪ್ರಕರಣ ಸಿಐಡಿ ತನಿಖೆಗೆ : ಸಿಎಂ ಯಡಿಯೂರಪ್ಪ ಘೋಷಣೆ
ರೋಹಿಣಿ ಮರು ನೇಮಕಕ್ಕೆ ‘ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ’ ಕ್ಯಾಂಪೇನ್, ಲಕ್ಷಕ್ಕೂ ಅಧಿಕ ಸಹಿ ಸಂಗ್ರಹ
(JDS MLA Sa Ra Mahesh questions IAS Rohini Sindhuri in land acquisition case in Mysuru)
Published On - 9:04 pm, Mon, 14 June 21