ಶಿವಮೊಗ್ಗ: ಗ್ಯಾರಂಟಿ ಫಲಾಮಿಭವಿಗಳ ಸಮಾವೇಶದಲ್ಲಿ ಜೆಡಿಎಸ್ ಶಾಸಕಿ ಕಾಂಗ್ರೆಸ್ ನಾಯಕರೊಂದಿಗೆ ಆತ್ಮೀಯವಾಗಿ ಹರಟಿದರು!

ಅರುಣ್​ ಕುಮಾರ್​ ಬೆಳ್ಳಿ

Updated on: Feb 24, 2024 | 4:39 PM

ನಗರದ ಅಲ್ಲಮ ಪ್ರಭು ಫ್ರೀಡಂ ಪಾರ್ಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ, ಶಿವಮೊಗ್ಗ ಗ್ರಾಮೀಣ ಕ್ಷೇತ್ರದ ಜೆಡಿಎಸ್ ಶಾಸಕಿ ಶಾರದ ಪೂರ್ಯನಾಯ್ಕ್ ಮತ್ತು ಜಿಲ್ಲಾ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.

ಶಿವಮೊಗ್ಗ: ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ಮಾಧ್ಯಮಗಳೊಂದಿಎಗ ಮಾತಾಡುವಾಗ ಸ್ವಲ್ಪ ಜೋರು ಎಂದೆನಿಸದರೂ ಜಿಲ್ಲೆಯಲ್ಲಿ ಓಡಾಡಿಕೊಂಡು ಕೆಲಸ ಮಾಡುತ್ತಿದ್ದಾರೆ. ಅವರ ಮತ್ತು ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ (BY Raghavendra) ಕಾರ್ಯವಿಧಾನ ಭಿನ್ನವಾಗಿರುವುದರಿಂದ ವೈಮನಸ್ಸುಗಳು ಏಳುತ್ತಿರುತ್ತವೆ ಅದು ಬೇರೆ ವಿಚಾರ. ಅದನ್ನು ಮತ್ತಿನ್ಯಾವತ್ತಾದರು ಚರ್ಚೆ ಮಾಡೋಣ; ಇಬ್ಬರ ತಂದೆಗಳು ರಾಜ್ಯದ ಮುಖ್ಯಮಂತ್ರಿಯಾಗಿದ್ದವರು, ಹಾಗಾಗಿ ಅದೆಲ್ಲ ಇದ್ದಿದ್ದೇ! ಓಕೆ ಮಧು ಬಂಗಾರಪ್ಪ ಇಂದು ತಮ್ಮ ಸರ್ಕಾರದ 5 ಗ್ಯಾರಂಟಿ ಯೋಜನೆ ಫಲಾನುಭವಿಗಳ (guarantee scheme beneficiaries) ಸಮಾವೇಶ ಏರ್ಪಡಿಸಿದ್ದರು. ನಗರದ ಅಲ್ಲಮ ಪ್ರಭು ಫ್ರೀಡಂ ಪಾರ್ಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ, ಶಿವಮೊಗ್ಗ ಗ್ರಾಮೀಣ ಕ್ಷೇತ್ರದ ಜೆಡಿಎಸ್ ಶಾಸಕಿ ಶಾರದ ಪೂರ್ಯನಾಯ್ಕ್ ಮತ್ತು ಜಿಲ್ಲಾ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು. ಶಿವಕುಮಾರ್ ಮತ್ತು ಮಧು ಬಂಗಾರಪ್ಪ ಅವರ ನಡುವೆ ಕೂತಿದ್ದ ಶಾರದಾ ಅವರ ಜೊತೆ ಇಬ್ಬರು ಕಾಂಗ್ರೆಸ್ ನಾಯಕರು ಏನನ್ನೋ ಮಾತಾಡುತ್ತಾರೆ. ಮಧು ಅವರಂತೂ ತಮ್ಮ ಸ್ಥಳದಿಂದ ಎದ್ದು ಶಿವಕುಮಾರ್ ಅವರಿಗೆ ಏನೋ ಹೇಳಿದಾಗ ಶಾಸಕಿ ಮುಗಳ್ನಗುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.