AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಷತ್‌ ಚುನಾವಣೆ : ಕಾಂಗ್ರೆಸ್‌‍ ಅಭ್ಯರ್ಥಿ ಮಳವಳ್ಳಿ ಶಿವಣ್ಣ ನಾಮಪತ್ರ ತಿರಸ್ಕರಿಸುವಂತೆ ದೂರು

ಕರ್ನಾಟಕದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ. ಕಾಂಗ್ರೆಸ್​​​ನ ಮೂವರು ಹಾಗೂ ಬಿಜೆಪಿ ಓರ್ವ ಅಭ್ಯರ್ಥಿ ಆವಿರೋಧವಾಗಿ ಆಯ್ಯೆಯಾಗಿದ್ದಾರೆ. ಇನ್ನೊಂದೆಡೆ ಕರ್ನಾಟಕ ವಿಧಾನಪರಿಷತ್ಗೆ ಚುನಾವಣೆ ಎದುರಾಗಿದ್ದು, ಕಾಂಗ್ರೆಸ್​​​ನಿಂದ ನಾಪತ್ರ ಸಲ್ಲಿಸಿರುವ ಸಿದ್ದರಾಮ್ಯಯನವರ ಆಪ್ತ ಮಳವಳ್ಳಿ ಶಿವಣ್ಣ ವಿರುದ್ಧ ಮಾಹಿತಿ ಮುಚ್ಚಿಟ್ಟ ಆರೋಪ ಕೇಳಿಬಂದಿದೆ. ಇದಕ್ಕೆ ಸ್ವತಃ ಮಳವಳ್ಳಿ ಶಿವಣ್ಣ ಸ್ಪಷ್ಟನೆ ಸಹ ನೀಡಿದ್ದಾರೆ. ಏನಿದು ಪ್ರಕರಣ ಎನ್ನುವ ಡಿಟೇಲ್ಸ್ ಇಲ್ಲಿದೆ.

ಪರಿಷತ್‌ ಚುನಾವಣೆ : ಕಾಂಗ್ರೆಸ್‌‍ ಅಭ್ಯರ್ಥಿ ಮಳವಳ್ಳಿ ಶಿವಣ್ಣ ನಾಮಪತ್ರ ತಿರಸ್ಕರಿಸುವಂತೆ ದೂರು
Malavalli Shivanna
ರಮೇಶ್ ಬಿ. ಜವಳಗೇರಾ
|

Updated on: Jun 11, 2026 | 5:17 PM

Share

ಬೆಂಗಳೂರು, (ಜೂನ್.11): ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಯಲ್ಲಿ (Karnataka legislative council Election) ಕಾಂಗ್ರೆಸ್‌‍ (Congress) ಅಭ್ಯರ್ಥಿ ಮಳವಳ್ಳಿ ಶಿವಣ್ಣ (Malavalli Shivanna) ಅವರು ಕ್ರಿಮಿನಲ್‌ ಪ್ರಕರಣಗಳನ್ನು ಮುಚ್ಚಿ ಹಾಕಿದ್ದಾರೆ ಎಂದು ಜೆಡಿಎಸ್‌‍ ದೂರು ನೀಡಿದೆ. ತಮ ಮೇಲೆ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣಗಳನ್ನು ಅಫಿಡವಿಟ್‌ನಲ್ಲಿ ಮಳವಳ್ಳಿ ಶಿವಣ್ಣ ಮುಚ್ಚಿಹಾಕಿದ್ದಾರೆ. ಹೀಗಾಗಿ ಅವರ ನಾಮಪತ್ರವನ್ನು ತಿರಸ್ಕರಿಸಬೇಕೆಂದು ಬಿಜೆಪಿ, ಜೆಡಿಎಸ್‌‍ ಬೆಂಬಲಿತ ಅಭ್ಯರ್ಥಿ ಗೋವಿಂದರಾಜು ಚುನಾವಣಾಧಿಕಾರಿ ಹಾಗೂ ವಿಧಾನಸಭಾ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ದೂರು ನೀಡಿದ್ದಾರೆ.

ಮುಖ್ಯಾಂಶಗಳು

  • ಪರಿಷತ್ ಚುನಾವಣೆ ‘ಕೈ’ ಅಭ್ಯರ್ಥಿ ಮಳವಳ್ಳಿ ಶಿವಣ್ಣ ವಿರುದ್ಧ ಮಾಹಿತಿ ಮುಚ್ಚಿಟ್ಟ ಆರೋಪ
  • ಚುನಾವಣಾಧಿಕಾರಿಗೆ ದೂರು ನೀಡಿದ JDS ಅಭ್ಯರ್ಥಿ ಗೋವಿಂದರಾಜು
  • ಮಳವಳ್ಳಿ ಶಿವಣ್ಣ ನಾಮಪತ್ರ ತಿರಸ್ಕೃತ ಮಾಡುವಂತೆ ಚುನಾವಣಾಧಿಕಾರಿಗೆ ದೂರು
  • ತಮ್ಮ ಮೇಲಿನ ಆರೋಪಕ್ಕೆ ಸ್ಪಷ್ಟನೆ ನೀಡಿದ ಮಳವಳ್ಳಿ ಶಿವಣ್ಣ
  • ತಮ್ಮ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳಿಲ್ಲ ಎಂದು ಸ್ಪಷ್ಟನೆ

ಆರೋಪದಲ್ಲೇನಿದೆ?

ಮಳವಳ್ಳಿ ಶಿವಣ್ಣ ವಿರುದ್ಧ ಒಟ್ಟು ನಾಲ್ಕು ಕ್ರಿಮಿನಲ್‌ ಮೊಕದ್ದಮೆಗಳು ದಾಖಲಾಗಿವೆ. ಇದು ಅಫಿಡವಿಟ್‌ನಲ್ಲಿ ಹಾಕಬೇಕೆಂಬ ನಿಯಮವಿಲ್ಲ ಎಂದು ಮುಚ್ಚಿಹಾಕಿದ್ದಾರೆ. ಅಫಿಡವಿಟ್‌ನಲ್ಲಿ ಯಾವುದೇ ಅಭ್ಯರ್ಥಿಗಳು ತಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣಗಳನ್ನು ಕಡ್ಡಾಯವಾಗಿ ನಮೂದಿಸಬೇಕು. ಆದ್ರೆ, ಇಲ್ಲಿ ಅಭ್ಯರ್ಥಿಯು ಮುಚ್ಚಿ ಹಾಕಿರುವುದರಿಂದ ಇದೊಂದು ಗಂಭೀರ ಸ್ವರೂಪದ ಪ್ರಕರಣವಾಗಿರುವುದ್ದು, ಅವರ ನಾಮಪತ್ರವನ್ನು ತಿರಸ್ಕರಿಸಬೇಕು ಎಂದು ಆಗ್ರಹಿಸಿದ್ದಾರೆ. ಇನ್ನು ದೂರು ಸ್ವೀಕರಿಸಿರುವ ಚುನಾವಣಾಧಿಕಾರಿ ಈ ಬಗ್ಗೆ ಪರಿಶೀಲಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಇದನ್ನೂ ನೋಡಿ: ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ

ಆರೋಪಕ್ಕೆ ಮಳವಳ್ಳಿ ಶಿವಣ್ಣ ಸ್ಪಷ್ಟನೆ

ಇನ್ನು ಈ ಆರೋಪ ಕೇಳಿಬರುತ್ತಿದ್ದಂತೆಯೇ ಕಾಂಗ್ರೆಸ್ ಅಭ್ಯರ್ಥಿ ಮಳವಳ್ಳಿ ಶಿವಣ್ಣ ಪ್ರತಿಕ್ರಿಯಿಸಿದ್ದು, ಸೋಲಿನ ಭೀತಿಯಿಂದ ಗೋವಿಂದರಾಜು ಹುನ್ನಾರ ಮಾಡುತ್ತಿದ್ದಾರೆ. ನನ್ನ ವಿರುದ್ಧ ಯಾವುದೇ ಕೇಸ್​ಗಳು ಇಲ್ಲ. ನಾಲ್ಕು ಕೇಸ್​ಗಳ ಬಗ್ಗೆ ನಾನು ದೂರು ಕೊಟ್ಟಿರುವುದು. ಎಂಎಲ್​ಸಿ ಹೆಚ್.ವಿಶ್ವನಾಥ್ ವಿರುದ್ಧ ನಾನು ದೂರು ನೀಡಿದ್ದೆ. ವೋಟ್ ಚೋರಿ ಹೋಗಿ ಈಗ ಸೀಟ್ ಚೋರಿ ಮಾಡಲು ಹೋಗುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಎಂಎಲ್​ಸಿ ಹೆಚ್​.ವಿಶ್ವನಾಥ್​ ನನ್ನ ವಿರುದ್ಧ ಹುನ್ನಾರ ಮಾಡಿದ್ದು, ಗೋವಿಂದರಾಜುಗೆ ಎಂಎಲ್​ಸಿ ಹೆಚ್​.ವಿಶ್ವನಾಥ್​ ಹೇಳಿ ಕಳುಹಿಸಿದ್ದಾರೆ. ನನ್ನ ವಿರುದ್ಧ ಒಂದು ಎಫ್​ಐಆರ್ ಸಹ ದಾಖಲಾಗಿಲ್ಲ. ಹುನ್ನಾರಕ್ಕೆ ಸೊಪ್ಪು ಹಾಕಲ್ಲ, ಪರಿಷತ್​ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಸ್ಪಷ್ಟಪಡಿಸಿರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ