ಬೈ ಎಲೆಕ್ಷನ್: ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ, ರೇವಣ್ಣಗೆ ಬಿಗ್ ಶಾಕ್ ಕೊಟ್ಟ ಜೆಡಿಎಸ್

ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಕಣ ರಂಗೇರಿದ್ದು, ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಮಿತ್ರ ಪಕ್ಷ ಜೆಡಿಎಸ್ ಕೂಡ ತನ್ನ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ಮಾಡಿದೆ. ಆದರೆ ಈ ಲಿಸ್ಟ್​ನಲ್ಲಿ ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಡಿ ರೇವಣ್ಣರನ್ನ ಕೈ ಬಿಡಲಾಗಿದೆ.

ಬೈ ಎಲೆಕ್ಷನ್: ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ, ರೇವಣ್ಣಗೆ ಬಿಗ್ ಶಾಕ್ ಕೊಟ್ಟ ಜೆಡಿಎಸ್
ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ
Follow us
ರಮೇಶ್ ಬಿ. ಜವಳಗೇರಾ
|

Updated on:Oct 30, 2024 | 3:23 PM

ಬೆಂಗಳೂರು, (ಅಕ್ಟೋಬರ್ 30): ಕರ್ನಾಟಕದ ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಎದುರಾಗಿದ್ದು, ಇದೇ ನವೆಂಬರ್ 13ರಂದು ಮತದಾನ ನಡೆಯಲಿದೆ. ಹೀಗಾಗಿ ಜೆಡಿಎಸ್​, ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಇದೀಗ ಜೆಡಿಎಸ್​​ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 40 ನಾಯಕರನ್ನು ಒಳಗೊಂಡ ಪಟ್ಟಿ ಇದಾಗಿದ್ದು, ಇದರಲ್ಲಿ ದೇವೇಗೌಡ, ಎಚ್​ಡಿ ಕುಮಾರಸ್ವಾಮಿ ಸೇರಿದಂತೆ ಶಾಸಕರು, ಮಾಜಿ ಶಾಸಕ ಒಳಗೊಂಡಿದ್ದಾರೆ. ಆದ್ರೆ, ಅಚ್ಚರಿ ಅಂದರೆ ಈ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೋರ್​ ಕಮಿಟಿ ಅಧ್ಯಕ್ಷರನ್ನೇ ಕೈಬಿಡಲಾಗಿದೆ. ಅಲ್ಲದೇ ಶಾಸಕ ಎಚ್​ಡಿ ರೇವಣ್ಣ ಅವರಿಗೂ ಕೋಕ್ ನೀಡಲಾಗಿದೆ.

ಚನ್ನಪಟ್ಟಣ ಉಪ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಅವರು ಜೆಡಿಎಸ್​ನಿಂದ ಸ್ಪರ್ಧೆ ಮಾಡುತ್ತಿದ್ದು ಈ ಸಂಬಂಧ ಪಕ್ಷ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ಮಾಡಿದೆ. ಆದರೆ ಈ ಪಟ್ಟಿಯಲ್ಲಿ ಜೆಡಿಎಸ್​ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಹಾಗೂ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಹೆಸರನ್ನು ಕೈ ಬಿಡಲಾಗಿದೆ. ಜೆಡಿಎಸ್ ಸ್ಟಾರ್ ಕ್ಯಾಂಪೇನರ್​​ಗಳ ಪಟ್ಟಿಯಲ್ಲಿ ಶಾಸಕರು, ಮಾಜಿ ಶಾಸಕರು, ಮಾಜಿ, ಹಾಲಿ ಸಂಸದರು, ಹಿರಿಯ ನಾಯಕರು, ಮಾಜಿ, ಹಾಲಿ ಎಂಎಲ್​ಸಿಗಳು ಸೇರಿ ಒಟ್ಟು 40 ಪ್ರಚಾರಕರು ಹೆಸರು ಇದೆ. ಆದರೆ ಪಕ್ಷದ ಹಿರಿಯ ನಾಯಕ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಅವರ ಹೆಸರು ಪಟ್ಟಿಯಲ್ಲಿ ಇಲ್ಲ. ಇದಕ್ಕೆ ಬಲವಾದ ಕಾರಣವೂ ಸಹ ಇದೆ. ಇದನ್ನೂ ಓದಿ: ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ ಸ್ಟಾರ್​ ಪ್ರಚಾರಕರ ಪಟ್ಟಿ ಬಿಡುಗಡೆ

ಜಿಟಿಡಿ, ರೇವಣ್ಣರನ್ನು ಕೈಬಿಡಲು ಕಾರಣವೇನು?

ಜೆಡಿಎಸ್​ನಲ್ಲಿ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಸಿಗದಿದ್ದಕ್ಕೆ ಜಿ.ಟಿ ದೇವೇಗೌಡ ಅವರು ಬೇಸರಗೊಂಡಿದ್ದರು. ಅಲ್ಲದೇ ಇತ್ತೀಚಿನ ಮೈಸೂರು ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ಸಿಎಂ ಸಿದ್ದರಾಮಯ್ಯ ಪರ ಮಾತನಾಡಿದ್ದರು. ಇದೇ ವೇಳೆ ಮೈಸೂರು ದಸರಾದಲ್ಲಿ ರಾಜೀನಾಮೆ ವಿಚಾರದ ಬಗ್ಗೆ ಮಾತನಾಡಿ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿ, ಕೇಂದ್ರ ಸಚಿವ ಎಚ್​​.ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಎಚ್​​.ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್​ ಆಗಿದೆ ಅವರು ರಾಜೀನಾಮೆ ನೀಡುತ್ತಾರಾ ಎಂದು ಸಮಾರಂಭದಲ್ಲಿ ವಾಗ್ದಾಳಿ ನಡೆಸಿದ್ದರು. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಅಲ್ಲದೇ ಜಿಟಿಡಿ ಕುಮಾರಸ್ವಾಮಿಯವರ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಕಾರಣಗಳಿಂದ ಜೆಡಿಎಸ್​ನ ಸ್ಟಾರ್ ಕ್ಯಾಂಪೇನರ್​ ಪಟ್ಟಿಯಿಂದ ಜಿ.ಟಿ ದೇವೇಗೌಡರನ್ನ ಕೈಬಿಡಲಾಗಿದೆ ಎನ್ನಲಾಗಿದೆ.

ಇನ್ನು ಮಾಜಿ ಸಚಿವರಾಗಿರುವ ಎಚ್​.ಡಿ ರೇವಣ್ಣ ಕುಟುಂಬದ ಮೇಲೆ ಕೆಲ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಅವರನ್ನು ಸ್ಟಾರ್ ಪ್ರಚಾರಕರನ್ನಾಗಿ ಆಯ್ಕೆ ಮಾಡಿಲ್ಲ ಎಂದು ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:07 pm, Wed, 30 October 24

ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ