ರಾಜ್ಯಸಭಾ ಚುನಾವಣೆಯಲ್ಲಿ ಒಗ್ಗಟ್ಟು ಪ್ರದರ್ಶಿಸುವ ಮೂಲಕ ಕಾಂಗ್ರೆಸ್ ವಿರುದ್ಧ ನೈತಿಕ ಜಯ ಸಾಧಿಸಿದ್ದೇವೆ: ಪ್ರಜ್ವಲ್ ರೇವಣ್ಣ
ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ 4-5 ಸದಸ್ಯರು ಕಾಂಗ್ರೆಸ್ ಅಭ್ಯರ್ಥಿಯ ಪರ ಮತ ಚಲಾಯಿಸುತ್ತಾರೆ ಅಂತ ಆವರು ಅಂದುಕೊಂಡಿದ್ದರು, ಅದರೆ ಪಕ್ಷದ ಎಲ್ಲ 19 ಶಾಸಕರು ತಮ್ಮ ಅಭ್ಯರ್ಥಿಗೆ ವೋಟು ಮಾಡಿ ಪಕ್ಷದಲ್ಲಿರುವ ಒಗ್ಗಟ್ಟು ಮತ್ತು ಶಿಸ್ತನ್ನು ಪ್ರದರ್ಶಿಸಿದ್ದಾರೆ ಎಂದು ಪ್ರಜ್ವಲ್ ಹೇಳಿದರು. ಆದಾಗ್ಯೂ ಚುನಾವಣೆ ಸಮಯದಲ್ಲಿ ಚಿಕ್ಕಪುಟ್ಟ ಪ್ರಮಾದಗಳಾಗಿವೆ, ಮುಂಬರುವ ದಿನಗಳಲ್ಲಿ ಅದನ್ನು ಸರಿಪಡಿಸಲಾಗುವುದು ಎಂದು ಪ್ರಜ್ವಲ್ ಹೇಳಿದರು.
ಹಾಸನ: ನಗರದಲ್ಲಿ ಮಾಧ್ಯಮ ಗೋಷ್ಟಿಯೊಂದನ್ನು ನಡೆಸಿ ಮಾತಾಡಿದ ಜೆಡಿಎಸ್ ಪಕ್ಷದ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ರಾಜ್ಯಸಭಾ ಚುನಾವಣೆಯಲ್ಲಿ (Rajya Sabha polls) ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ (Kupendra Reddy) ಸೋಲಿಗೆ ಕಾರಣಗಳನ್ನು ವಿವರಿಸಿದರು. ಪಕ್ಷೇತರ ಶಾಸಕರು ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಮತ ಚಲಾಯಿಸಬಹುದೆನ್ನುವ ನಿರೀಕ್ಷೆಯಿಂದ ಎನ್ ಡಿಎ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿಯವರನ್ನು ಕಣಕ್ಕಿಳಿಸಲಾಗಿತ್ತು, ಎಣಿಕೆ ತಪ್ಪಾಗಿದ್ದರಿಂದ ರೆಡ್ಡಿಗೆ ಸೋಲಾಯಿತು ಎಂದು ಪ್ರಜ್ವಲ್ ಹೇಳಿದರು. ಆದರೆ, ಜೆಡಿಎಸ್ ಪಕ್ಷ ಕಾಂಗ್ರೆಸ್ ಸರಕಾರದ ವಿರುದ್ಧ ನೈತಿಕ ಗೆಲುವು ಸಾಧಿಸಿರುವ ತೃಪ್ತಿ ತಮಗಿದೆ ಎಂದ ಪ್ರಜ್ವಲ್, ತಮ್ಮ ಪಕ್ಷ ಒಡೆದ ಮನೆಯಾಗಿದೆ ಎಂದು ಅವರು ಭಾವಿಸಿದ್ದರು. ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ 4-5 ಸದಸ್ಯರು ಕಾಂಗ್ರೆಸ್ ಅಭ್ಯರ್ಥಿಯ ಪರ ಮತ ಚಲಾಯಿಸುತ್ತಾರೆ ಅಂತ ಆವರು ಅಂದುಕೊಂಡಿದ್ದರು, ಅದರೆ ಪಕ್ಷದ ಎಲ್ಲ 19 ಶಾಸಕರು ತಮ್ಮ ಅಭ್ಯರ್ಥಿಗೆ ವೋಟು ಮಾಡಿ ಪಕ್ಷದಲ್ಲಿರುವ ಒಗ್ಗಟ್ಟು ಮತ್ತು ಶಿಸ್ತನ್ನು ಪ್ರದರ್ಶಿಸಿದ್ದಾರೆ ಎಂದು ಪ್ರಜ್ವಲ್ ಹೇಳಿದರು. ಆದಾಗ್ಯೂ ಚುನಾವಣೆ ಸಮಯದಲ್ಲಿ ಚಿಕ್ಕಪುಟ್ಟ ಪ್ರಮಾದಗಳಾಗಿವೆ, ಮುಂಬರುವ ದಿನಗಳಲ್ಲಿ ಅದನ್ನು ಸರಿಪಡಿಸಲಾಗುವುದು ಎಂದು ಪ್ರಜ್ವಲ್ ಹೇಳಿದರು.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರು ನನ್ನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ, ಯಾವುದೇ ಗೊಂದಲವಿಲ್ಲ: ಪ್ರಜ್ವಲ್ ರೇವಣ್ಣ