ಬೆಂಗಳೂರು, (ಸೆಪ್ಟೆಂಬರ್ 26): ಮಳೆ ಇಲ್ಲದೇ ರೈತರು ಪರದಾಡುತ್ತಿದ್ದಾರೆ. ಇದರ ಮಧ್ಯೆ ಕಾವೇರಿ ನದಿ ನೀರು ಪ್ರಾಧಿಕಾರ ಹಾಗೂ ಸುಪ್ರೀಂಕೋರ್ಟ್ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿದೆ. ಇದರಿಂದ ಕಾವೇರಿ ಭಾಗದ ಜನ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಕಾವೇರಿ ಕಿಚ್ಚು ಜೋರಾಗಿದೆ. ಇನ್ನು ಈ ಬಗ್ಗೆ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ(HD Devegowda) ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಕಾವೇರಿ ನದಿ ನೀರು ವಿವಾದದ(Cauvery water dispute )ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಅವರಿಗೆ ಮನವಿ ಮಾಡಿದ್ದಾರೆ.
ಕರ್ನಾಟಕದ ರೈತರಿಗೆ ನೀರಿನ ಕೊರತೆ ಇದೆ. ಹೀಗಾಗಿ ಶೀಘ್ರವಾಗಿ ಈ ವಿವಾದ ಬಗೆಹರಿಸಬೇಕು ಎಂದು ಹೆಚ್ಡಿ ದೇವೇಗೌಡ ಅವರು, ನರೇಂದ್ರ ಮೋದಿಗೆ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈಗಾಗಲೇ ಜೆಡಿಎಸ್, ಎನ್ಡಿಎ ಮೈತ್ರಿಕೂಟಕ್ಕೆ ಸೇರಿದ್ದು, ಇದರ ಬೆನ್ನಲ್ಲೇ ಇದೀಗ ದೇವೇಗೌಡ್ರು ಮೋದಿಗೆ ವಿಶೇಷ ಮನವಿಯೊಂದನ್ನು ಮಾಡಿದ್ದಾರೆ. ಆದ್ರೆ, ದೇವೇಗೌಡ್ರ ಪತ್ರಕ್ಕೆ ನರೇಂದ್ರ ಮೋದಿ ಸ್ಪಂದಿಸುತ್ತಾರಾ? ಮಧ್ಯೆ ಪ್ರವೇಶಿಸಿ ವಿವಾದ ಬಗೆಹರಿಸುತ್ತಾರಾ? ಎನ್ನುವುದನ್ನು ಕಾದುನೋಡಬೇಕಿದೆ.
ಇದನ್ನೂ ಓದಿ: ಸೆ.26ಕ್ಕೆ ಬೆಂಗಳೂರು ಬಂದ್, ಹೋರಾಟಗಾರರಿಗೆ ಡಿಕೆ ಶಿವಕುಮಾರ್ ವಿಶೇಷ ಮನವಿ..ಏನದು?
ಮತ್ತೊಂದೆಡೆ ಣ್ಣ ನೀರಾವರಿ ಸಚಿವ ಬೋಸರಾಜು ಅವರು ಮಡಿಕೇರಿಯಲ್ಲಿ ಇಂದು ಮಾತನಾಡಿ, ಕಾವೇರಿ ನದಿ ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ. ಕಾವೇರಿ ನದಿ ನೀರು ವಿಚಾರವಾಗಿ ರಾಜ್ಯದ ಸಂಸದರು ಮಾತಾಡಲಿ. ಕಾವೇರಿ ನದಿ ಸಂಬಂಧ ಪ್ರಧಾನಿ ಮೋದಿ ಸರ್ವಪಕ್ಷ ಸಭೆ ಕರೆಯಲಿ. ಕಾವೇರಿ ನೀರು ವಿಚಾರದಲ್ಲಿ ಎಲ್ಲರೂ ಪಕ್ಷಾತೀತವಾಗಿ ಹೋರಾಡಬೇಕು ಎಂದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:15 pm, Mon, 25 September 23