JDS: ಹಾನಗಲ್, ಸಿಂಧಗಿ ಅಸೆಂಬ್ಲಿ ಕ್ಷೇತ್ರಗಳಲ್ಲಿ ಜೆಡಿಎಸ್ ಕಣಕ್ಕೆ- ಹೆಚ್.ಡಿ. ಕುಮಾರಸ್ವಾಮಿ ಘೋಷಣೆ

| Updated By: ಸಾಧು ಶ್ರೀನಾಥ್​

Updated on: Sep 28, 2021 | 11:25 AM

Karnataka Assembly by election 2021: ನಿನ್ನೆಯಿಂದ ವಿನೂತನ ಕಾರ್ಯಗಾರ ಮಾಡುತ್ತಿದ್ದೇವೆ. ಈ ಸಮಯದಲ್ಲಿಯೇ ಚುನಾವಣೆ ದಿನಾಂಕ ಘೋಷಣೆ ಮಾಡಿದ್ದಾರೆ. ಇದು ನಮ್ಮ ಪಕ್ಷಕ್ಕೆ ಮುಂದಿನ ವಿಧಾನಸಭೆ ಚುನಾವಣೆಗೆ ಸಿದ್ದತಾ ಪರೀಕ್ಷೆಯಂತೆ ಬಂದಿದೆ. ಈಗಾಗಲೇ ನಯಾಜ್ ಅವರನ್ನು ಹಾನಗಲ್ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದೇವೆ - ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

JDS: ಹಾನಗಲ್, ಸಿಂಧಗಿ ಅಸೆಂಬ್ಲಿ ಕ್ಷೇತ್ರಗಳಲ್ಲಿ ಜೆಡಿಎಸ್ ಕಣಕ್ಕೆ- ಹೆಚ್.ಡಿ. ಕುಮಾರಸ್ವಾಮಿ ಘೋಷಣೆ
ಹೆಚ್.ಡಿ. ಕುಮಾರಸ್ವಾಮಿ
Follow us on

ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆಯಾಗಿದೆ. ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಅಕ್ಟೋಬರ್ 30ರಂದು 2 ಕ್ಷೇತ್ರಗಳಿಗೆ ಮತದಾನವಾಗಲಿದೆ. ನವೆಂಬರ್ 2ರಂದು ಮತ ಎಣಿಕೆ ನಡೆಯಲಿದೆ. ಈ ಮಧ್ಯೆ ರಾಜಕೀಯ ಪಕ್ಷಗಳಲ್ಲಿ ಚುನಾವಣಾ ಚಟುವಟಿಕೆಗಳು ಗರಿಗೆದರಿವೆ. ಜೆಡಿಎಸ್ ಪಕ್ಷವು ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ 123 ಅಸೆಂಬ್ಲಿ ಕ್ಷೇತ್ರಗಳಲ್ಲಿ ಗೆಲ್ಲುವ ರಣ ತಂತ್ರ ರೂಪಿಸಿದ್ದು, ಹಾನಗಲ್ ಮತ್ತು ಸಿಂದಗಿ ಎರಡೂ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಖಚಿತ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಉಪ ಚುನಾವಣೆ ನಮ್ಮ ಪಕ್ಷಕ್ಕೆ ಸಿದ್ಧತಾ ಪರೀಕ್ಷೆ:
ಅಕ್ಟೋಬರ್ 30ರಂದು ನಡೆಯಲಿರುವ ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಸಿದ್ಧವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಕಟಿಸಿದರು. ಎರಡೂ ಕ್ಷೇತ್ರಗಳ ಉಪ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ ಕೂಡಲೇ ಬಿಡದಿಯ ತಮ್ಮ ತೋಟದ ಮಾಧ್ಯಮಗಳ ಜತೆ ಅವರು ಮಾತನಾಡಿದರು.

ರಾಜ್ಯದಲ್ಲಿ ಎರಡು ಉಪ ಚುನಾವಣೆ ದಿನಾಂಕ ಅನೌನ್ಸ್ ಆಗಿದೆ. ಇದನ್ನು ನಮ್ಮ ಪಕ್ಷ ಸ್ವಾಗತಿಸುತ್ತದೆ. ಸಿಂಧಗಿ ಹಾಗೂ ಹಾನಗಲ್ ನಲ್ಲಿ ಶಾಸಕರ ಅಕಾಲಿಕ ಮರಣ ಹೊಂದಿದ್ದರು. ಈ ಕಾರಣಕ್ಕಾಗಿ ಇದೀಗ ಚುನಾವಣೆ ದಿನಾಂಕ ಘೋಷಣೆ ಮಾಡಲಾಗಿದೆ. ಜೆಡಿಎಸ್ ಚುನಾವಣೆಗೆ ಸಿದ್ಧವಾಗಿದೆ ಎಂದು ಅವರು ತಿಳಿಸಿದರು.

ನಿನ್ನೆಯಿಂದ ವಿನೂತನ ಕಾರ್ಯಗಾರ ಮಾಡುತ್ತಿದ್ದೇವೆ. ಈ ಸಮಯದಲ್ಲಿಯೇ ಚುನಾವಣೆ ದಿನಾಂಕ ಘೋಷಣೆ ಮಾಡಿದ್ದಾರೆ. ಇದು ನಮ್ಮ ಪಕ್ಷಕ್ಕೆ ಮುಂದಿನ ವಿಧಾನಸಭೆ ಚುನಾವಣೆಗೆ ಸಿದ್ದತಾ ಪರೀಕ್ಷೆಯಂತೆ ಬಂದಿದೆ. ಈಗಾಗಲೇ ನಯಾಜ್ ಅವರನ್ನು ಹಾನಗಲ್ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದೇವೆ. ಅವರು ಸಕ್ರಿಯವಾಗಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ಸಿಂದಗಿ ಸಿಂಧಗಿ ಕ್ಷೇತ್ರದಲ್ಲಿ ಐವರು ಟಿಕೆಟ್ ಕೇಳುತ್ತಿದ್ದಾರೆ. ಈಗಾಗಲೇ ಚರ್ಚೆಗಳು ಕೂಡ ಮಾಡುತ್ತಿದ್ದೇವೆ. ಎರಡೂ ಕ್ಷೇತ್ರದಲ್ಲೂ ಅಭ್ಯರ್ಥಿಗಳನ್ನು ಹಾಕುತ್ತೇವೆ ಹಾಗೂ ಚುನಾವಣೆಗೆ ಸಾಮೂಹಿಕ ನಾಯಕತ್ವದಲ್ಲಿ ಹೋಗುತ್ತೇವೆ. ಇಂದಿನ ಸಭೆಯಲ್ಲಿ ಈ  ಬಗ್ಗೆಯೂ ಚರ್ಚೆ ಮಾಡುತ್ತೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಹಾನಗಲ್ ಕ್ಷೇತ್ರದಲ್ಲಿ ನಯಾಜ್ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಈ ಚುನಾವಣೆ ಗೆಲ್ಲಲು ಈ ಕಾರ್ಯಗಾರದಲ್ಲಿ ತರಬೇತಿ ನೀಡಲಾಗುತ್ತದೆ ಎಂದು ಅವರು ಹೇಳಿದರು. ಎರಡೂ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕುತ್ತೇವೆ. ಎರಡೂ ಕಡೆ ನಮ್ಮ ಪಕ್ಷಕ್ಕೆ ಉತ್ತಮ ನೆಲೆ ಇದೆ. ಗೆಲುವಿಗಾಗಿ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಹೆಚ್.ಡಿ.ಕುಮಾರಸ್ವಾಮಿ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಾನಗಲ್, ಸಿಂದಗಿ ಎರಡೂ ಕ್ಷೇತ್ರದಲ್ಲಿ ಜೆಡಿಎಸ್​ ಅಭ್ಯರ್ಥಿಗಳು ಕಣಕ್ಕೆ |HDK | Tv9kannada

(jds to field candidates for hanagal and sindagi assembly by election declare jds leader hd kumaraswamy)

Published On - 11:14 am, Tue, 28 September 21