Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರಾಜೇಗೌಡ ಆರೋಪದ ಬೆನ್ನಲ್ಲೇ ಪೆನ್​ಡ್ರೈವ್​ ಗ್ಯಾಂಗ್​ ಎಂದು ಸಚಿವರ ಹೆಸರು ಬಿಚ್ಚಿಟ್ಟ ಜೆಡಿಎಸ್

ರಾಜ್ಯ ರಾಜಕಾರಣದಲ್ಲಿ ಆರೋಪ-ಪ್ರತ್ಯಾರೋಪಗಳೊಂದಿಗೆ ಭಾರೀ ಸಂಚಲನ ಮೂಡಿಸಿರುವ ಹಾಸನ ಪೆನ್​ಡ್ರೈವ್​ ಪ್ರಕರಣ ಈಗ ಮತ್ತೊಂದು ಹಂತಕ್ಕೆ ಹೋಗಿದೆ. ಎಸ್​ಐಟಿ ವಶದಲ್ಲಿದ್ದುಕೊಂಡೇ ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಎ ಅವರ ಅವರು ಪೆನ್​ಡ್ರೈವ್​ ಬಗ್ಗೆ ಡಿಕೆ ಶಿವಕುಮಾರ್ ವಿರುದ್ಧ ಮತ್ತಷ್ಟು ಹೊಸ ಹೊಸ ಆರೋಪಗಳನ್ನು ಮಾಡಿದ್ದಾರೆ. ಇದರ ಬೆನ್ನಲ್ಲೇ ಇತ್ತ ಜೆಡಿಎಸ್​ ಸಿಡಿದೆದ್ದಿದೆ.

ದೇವರಾಜೇಗೌಡ ಆರೋಪದ ಬೆನ್ನಲ್ಲೇ ಪೆನ್​ಡ್ರೈವ್​ ಗ್ಯಾಂಗ್​ ಎಂದು ಸಚಿವರ ಹೆಸರು ಬಿಚ್ಚಿಟ್ಟ ಜೆಡಿಎಸ್
Follow us
ರಮೇಶ್ ಬಿ. ಜವಳಗೇರಾ
|

Updated on: May 17, 2024 | 8:39 PM

ಬೆಂಗಳೂರು/ಹಾಸನ, (ಮೇ 17): ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಅವರಿಗೆ ಸಂಬಂಧಿಸಿದ್ದು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣದ ಬಗ್ಗೆ ವಕೀಲ ದೇವರಾಜೇಗೌಡ (Devarajegowda) ಹೊಸ ಬಾಂಬ್‌ ಸಿಡಿಸಿದ್ದಾರೆ. ಪೆನ್‌ಡ್ರೈವ್‌ ರೆಡಿ ಮಾಡಿದ್ದೇ ಡಿ.ಕೆ.ಶಿವಕುಮಾರ್‌. ಹ್ಯಾಂಡಲ್​ ಮಾಡಲು ನಾಲ್ವರು ಸಚಿವರ ಸಮಿತಿ ರಚಿಸಿದ್ದರು. ಅಲ್ಲದೇ ಪೆನ್​ಡ್ರೈವ್​ ಹಂಚಿಕೆ ಮಾಡಿದ್ದು ಕುಮಾರಸ್ವಾಮಿ ಎಂದು ಹೇಳಲು ನನಗೆ 100 ಕೋಟಿ ಆಫರ್​ ನೀಡಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಜೆಡಿಎಸ್​ ಟ್ವೀಟ್ ಮಾಡಿದ್ದು, ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದು ನಾಲ್ವರು ಸಚಿವರುಗಳ ಹೆಸರುಗಳನ್ನು ಬಹಿರಂಗಪಡಿಸಿದೆ.

ಎಸ್​ಐಟಿ ವಶದಲ್ಲಿದ್ದುಕೊಂಡೇ ಮಾಧ್ಯಮಗಳ ಮುಂದೆ ಡಿಕೆ ಶಿವಕುಮಾರ್ ವಿರುದ್ಧ ಕೆಲ ಗಂಭೀರ ಆರೋಪಗಳನ್ನು ಮಾಡಿದ ಬೆನ್ನಲ್ಲೇ ಈ ಬಗ್ಗೆ ಜೆಡಿಎಸ್ ಟ್ವೀಟ್ ಮಾಡಿದ್ದು,  1.ಡಿಸಿಎಂ ಡಿ.ಕೆ.ಶಿವಕುಮಾರ್ , 2.ಕೃಷಿ ಸಚಿವ ಚೆಲುವರಾಯಸ್ವಾಮಿ, 3.ಕಂದಾಯ ಸಚಿವ ಕೃಷ್ಣಭೈರೇಗೌಡ, 4. IT BT ಸಚಿವ ಪ್ರಿಯಾಂಕ್ ಖರ್ಗೆ ಪ್ಲಸ್ ಇನ್ನೂ ಒಬ್ಬ ಸಚಿವ ಹಾಗೇ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ. ಇವರೆಲ್ಲರೂ ಹೂಡಿರುವ ಸಂಚು ಏನ್ ಗೊತ್ತಾ? ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರುವುದು. ಈ ಸಂಚು ಸಾಕಾರಗೊಳಿಸಲು CD ಶಿವಕುಮಾರ್ ಸಾಹೇಬರು ವಕೀಲರಾದ ದೇವರಾಜೇಗೌಡರಿಗೆ ಆಫರ್ ಮಾಡಿದ ಮೊತ್ತ ಬರೋಬ್ಬರಿ 100 ಕೋಟಿ ಎಂದು ಬರೆದುಕೊಂಡಿದೆ.

ಇದನ್ನೂ ಒದಿ: ಪೆನ್​ಡ್ರೈವ್ ಕೇಸ್: ಡಿಕೆ ಶಿವಕುಮಾರ್​ ವಿರುದ್ಧ 100 ಕೋಟಿ ರೂ. ಆಫರ್​ ಬಾಂಬ್ ಸಿಡಿಸಿದ ದೇವರಾಜೇಗೌಡ

ಮತ್ತೆ ಆರೋಪ=ಪ್ರತ್ಯಾರೋಪ ಶುರು

ಹೌದು..ಈ ಹಿಂದೆ ಪ್ರಕರಣ ಸಂಬಂಧ ವಕೀಲ ದೇವರಾಜೇಗೌಡ ಅವರು ಆರಂಭದಲ್ಲೇ ಡಿಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದರು. ಅಲ್ಲದೇ ವಾಯ್ಸ್ ರೆಕಾರ್ಡ್ ಬಿಡುಗಡೆ ಮಾಡಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಅಲ್ಲದೇ ಈ ಸಂಬಂಧ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಡಿಕೆ ಶಿವಕುಮಾರ್ ವಿರುದ್ಧ ಮಗಿಬಿದ್ದಿದ್ದರು. ಎಸ್​ಐಟಿ ತನಿಖೆಯಲ್ಲಿ ನಂಬಿಕೆ ಇಲ್ಲ. ಹೀಗಾಗಿ ಪೆನ್​ಡ್ರೈವ್ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಇದೀಗ ದೇವರಾಜೇಗೌಡ ಅವರು ಡಿಕೆ ಶಿವಕುಮಾರ್ ವಿರುದ್ಧ ಮತ್ತಷ್ಟು ಗಂಭೀರ ಆರೋಪಗಳನ್ನು ಮಾಡಿದ್ದು, ಆರೋಪ-ಪ್ರತ್ಯಾರೋಪಗಳು ಜೋರಾಗಲಿವೆ.

ದೇವರಾಜೇಗೌಡ ಹೇಳಿದ್ದೇನು?

ಕಾರ್ತಿಕ್ ಕರೆಸಿಕೊಂಡು ಸಂಪೂರ್ಣ ಮಾಹಿತಿ ಪಡೆದು ಪೆನ್‌ಡ್ರೈವ್ ರೆಡಿ ಮಾಡಿದ್ದೇ ಡಿ.ಕೆ.ಶಿವಕುಮಾರ್. ನಾಲ್ಕು ಜನ ಮಂತ್ರಿಗಳ ಕಮಿಟಿ ಮಾಡಿದ್ದರು. ಚೆಲುವರಾಯಸ್ವಾಮಿ, ಕೃಷ್ಣಭೈರೇಗೌಡ, ಪ್ರೀಯಾಂಕ ಖರ್ಗೆ ಮತ್ತು ಇನ್ನೊಬ್ಬ ಸಚಿವರು. ನಾಲ್ಕು ಮಂತ್ರಿಗಳ ತಂಡ ರಚನೆ ಮಾಡಿ ಇದನ್ನು ಹ್ಯಾಂಡಲ್ ಮಾಡಲು ಬಿಟ್ಟಿದ್ದರು ಎಂದು ದೇವರಾಜೇಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.

ಅಲ್ಲದೇ ಡಿಕೆ ಶಿವಕುಮಾರ್​ 100 ಕೋಟಿ ರೂ. ಆಫರ್ ಕೊಟ್ಟಿದ್ದಾರೆ. ಮೊದಲಿಗೆ ಡಿಕೆ ಶಿವಕುಮಾರ್ ಅವರು ನನ್ನನ್ನು ಕರೆಸಿ ಮಾತನಾಡಿದ್ದರು. ಪೆನ್‌ಡ್ರೈವ್‌ ಅನ್ನು ಕುಮಾರಸ್ವಾಮಿ ಹಂಚಿದ್ರು ಎಂದು ಹೇಳು ನಿನಗೆ ಸಮಸ್ಯೆ ಆಗಲ್ಲ ಸೆಕ್ಯೂರ್ ಮಾಡುತ್ತೇನೆ ಎಂದು ಹೇಳಿದ್ದರು. ಇದಕ್ಕೆ ದೊಡ್ಡಮಟ್ಟದ 100 ಕೋಟಿ ಹಣದ ಆಫರ್ ಕೊಟ್ಟರು. ಈ ಪೈಕಿ ಐದು ಕೋಟಿ ರೂಪಾಯಿ ಅಡ್ವಾನ್ಸ್ ದುಡ್ಡನ್ನ ಬೌರಿಂಗ್ ಕ್ಲಬ್‌ನ 110 ರೂಂಗೆ ಕಳುಹಿಸಿದ್ದರು ಎಂದು ಆರೋಪಿಸಿದ್ದಾರೆ.

ಚನ್ನರಾಯಪಟ್ಟಣ ಮಾಜಿ ವಿದಾನಪರಿಷತ್ ಸದಸ್ಯ ಗೋಪಾಲಸ್ವಾಮಿ ಅವರನ್ನು ಐದು ಕೋಟಿ ಕ್ಯಾಶ್ ಕೊಟ್ಟು ಸಂಧಾನಕ್ಕೆ ಕಳುಹಿಸಿದ್ದರು. ಆದ್ರೆ, ಇದಕ್ಕೆ ನಾನು ಒಪ್ಪದೇ ಇದ್ದಾಗ ಈಗಾಗಲೇ ದೊಡ್ಡ ಹಗರಣ ಆಗಿರುವುದರಿಂದ ಮೋದಿಗೆ, ಬಿಜೆಪಿಗೆ, ಕುಮಾರಸ್ವಾಮಿಗೆ ಕೆಟ್ಟ ಹೆಸರು ತರಲು ಸಂಚು ಮಾಡಿದ್ರು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​