ವಿಧಾನಪರಿಷತ್ ಸಭಾಪತಿ ಸ್ಥಾನ ಜೆಡಿಎಸ್​ಗೆ ಸಿಗಲಿದೆ: ಬಸವರಾಜ ಹೊರಟ್ಟಿ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 20, 2021 | 5:16 PM

ಬಿಜೆಪಿಯಲ್ಲೂ ಸಭಾಪತಿ ಸ್ಥಾನಕ್ಕೆ ಆಕಾಂಕ್ಷಿಗಳಿರಬಹುದು. ಹಾಗಂತ ನಾವೇನೂ ರಾಜಕೀಯ ಸನ್ಯಾಸಿಗಳಲ್ಲ ಎಂದು ಬಸವರಾಜ ಹೊರಟ್ಟಿ ಹೇಳಿದ್ದಾರೆ.

ವಿಧಾನಪರಿಷತ್ ಸಭಾಪತಿ ಸ್ಥಾನ ಜೆಡಿಎಸ್​ಗೆ ಸಿಗಲಿದೆ: ಬಸವರಾಜ ಹೊರಟ್ಟಿ
ಬಸವರಾಜ ಹೊರಟ್ಟಿ
Follow us on

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಸ್ಥಾನ ಜೆಡಿಎಸ್​ಗೆ ಸಿಗಲಿದೆ ಎಂದು ವಿಧಾನಸೌಧದಲ್ಲಿ ಜೆಡಿಎಸ್ ಎಂಎಲ್​ಸಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಎಚ್.ಡಿ.ದೇವೇಗೌಡ ಅವರು ಈಗಾಗಲೇ ನನ್ನನ್ನು ಸಭಾಪತಿ ಮಾಡಲು ತೀರ್ಮಾನಿಸಿದ್ದಾರೆ. ಈ ವಿಚಾರ ನನ್ನ ಬಳಿ ಚರ್ಚೆ ಮಾಡಿಯೇ ತೀರ್ಮಾನ ಆಗಬೇಕಿದೆ. ಬಿಜೆಪಿಯಲ್ಲೂ ಸಭಾಪತಿ ಸ್ಥಾನಕ್ಕೆ ಆಕಾಂಕ್ಷಿಗಳಿರಬಹುದು. ಹಾಗಂತ ನಾವೇನೂ ರಾಜಕೀಯ ಸನ್ಯಾಸಿಗಳಲ್ಲ. ಸಭಾಪತಿ ವಿಚಾರವನ್ನು ದೇವೇಗೌಡ್ರು, ಕುಮಾರಸ್ವಾಮಿ ತೀರ್ಮಾನ ಮಾಡುತ್ತಾರೆ ಎಂದಿದ್ದಾರೆ ಹೊರಟ್ಟಿ.

ವಿಧಾನ ಪರಿಷತ್​ ಸಭಾಪತಿ ಸ್ಥಾನ ಬದಲಾವಣೆ: ಕಾಂಗ್ರೆಸ್​ಗೆ ಟಕ್ಕರ್ ಕೊಡಲು ದೊಡ್ಡಗೌಡರ ಪ್ಲಾನ್